43 ಹೆಚ್ಚುವರಿ ಬರಪೀಡಿತ ತಾಲೂಕುಗಳನ್ನು ಘೋಷಿಸಿದ ರಾಜ್ಯ ಸರ್ಕಾರ

ರಾಜ್ಯದಲ್ಲಿ ಮುಂಗಾರು ಮುನಿಸಿಕೊಂಡ ಕಾರಣ ಭೀಕರ ಬರದ ಛಾಯೆ ಆವರಿಸಿದೆ. ಇದೀಗ 21 ಬರಪೀಡಿತ, 22 ಸಾಧಾರಣ ಹೆಚ್ಚುವರಿ ಬರಪೀಡಿತ ತಾಲ್ಲೂಕುಗಳ ಪಟ್ಟಿ ಘೋಷಿಸಿ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಸೋಮವಾರ ಆದೇಶ ಹೊರಡಿಸಿದ್ದಾರೆ. 

43 ಹೆಚ್ಚುವರಿ ಬರಪೀಡಿತ ತಾಲೂಕುಗಳನ್ನು ಘೋಷಿಸಿದ ರಾಜ್ಯ ಸರ್ಕಾರ
ವಿಧಾನಸೌಧ
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on:Oct 09, 2023 | 6:56 PM

ಬೆಂಗಳೂರು, ಅಕ್ಟೋಬರ್​​ 09: ರಾಜ್ಯದಲ್ಲಿ ಮುಂಗಾರು ಮುನಿಸಿಕೊಂಡ ಕಾರಣ ಭೀಕರ ಬರದ ಛಾಯೆ ಆವರಿಸಿದೆ. ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ ಸರ್ಕಾರವು ಇತ್ತೇಚೆಗೆ ರಾಜ್ಯದ 195 ತಾಲೂಕುಗಳು ಬರ (drought) ಪೀಡಿತ ಎಂದು ಅಧಿಕೃತವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಿತ್ತು. ಇದೀಗ 21 ಬರಪೀಡಿತ, 22 ಸಾಧಾರಣ ಹೆಚ್ಚುವರಿ ಬರಪೀಡಿತ ತಾಲ್ಲೂಕುಗಳ ಪಟ್ಟಿ ಘೋಷಿಸಿ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಸೋಮವಾರ ಆದೇಶ ಹೊರಡಿಸಿದ್ದಾರೆ.

ಬರಪೀಡಿತ ತಾಲ್ಲೂಕುಗಳ ಪಟ್ಟಿ ಹೀಗಿದೆ

ಚಾಮರಾಜನಗರ, ಯಳಂದೂರು, ಕೆ.ಆರ್.ನಗರ, ಬೆಳಗಾವಿ, ಖಾನಾಪುರ, ಮುಂಡರಗಿ, ಬ್ಯಾಡಗಿ, ಹಾನಗಲ್, ಶಿಗ್ಗಾಂ, ಕಲಘಟಗಿ, ಅಳ್ನಾವರ,ಅಣ್ಣಿಗೇರಿ, ಆಲೂರು, ಅರಸಿಕೆರೆ, ಹಾಸನ, ಮೂಡಿಗೆರೆ, ತರೀಕೆರೆ, ಪೊನ್ನಂಪೇಟೆ, ಹೆಬ್ರಿ, ಸಿದ್ದಾಪುರ, ದಾಂಡೇಲಿ.

ಸಾಧಾರಣ ಬರಪೀಡಿತ ತಾಲ್ಲೂಕುಗಳ ಪಟ್ಟಿ ಹೀಗಿದೆ

ಬೆಂಗಳೂರು ಉತ್ತರ, ಚನ್ನಪಟ್ಟಣ, ಮಾಗಡಿ, ಮಾಲೂರು, ತುಮಕೂರು,‌ ಗುಂಡ್ಲುಪೇಟೆ, ಹನೂರು, ಕೊಳ್ಳೆಗಾಲ, ದೇವದುರ್ಗ, ಮಸ್ಕಿ, ಬೇಲೂರು, ಹೊಳೆನರಸೀಪುರ, ಸಕಲೇಶಪುರ, ಚನ್ನರಾಯಪಟ್ಟಣ, ಸೋಮವಾರಪೇಟೆ, ಕೊಪ್ಪ, ನರಸಿಂಹರಾಜಪುರ, ಶೃಂಗೇರಿ,ಮಂಗಳೂರು,‌ ಮೂಡಬಿದಿರೆ, ಬ್ರಹ್ಮಾವರ, ಕಾರವಾರ.

ಇದನ್ನೂ ಓದಿ: ಕರ್ನಾಟಕದ 195 ಬರ ಪೀಡಿತ ತಾಲೂಕುಗಳು: ಸರ್ಕಾರದಿಂದ ಅಧಿಕೃತ ಘೋಷಣೆ

ಪರಿಷ್ಕೃತ ಬರ ಕೈಪಿಡಿ -2020ರಲ್ಲಿ ಹಂತ-1 ಮತ್ತು ಹಂತ-2ರಲ್ಲಿ ಸೂಚಿಸಿರುವ ಮಾನದಂಡಗಳನ್ವಯ ಪ್ರಸಕ್ತ ಮುಂಗಾರು ಅವಧಿಯಲ್ಲಿ ರಾಜ್ಯದ 236 ತಾಲೂಕಗಳ ಪೈಕಿ ಈಗಾಗಲೇ 195 ತಾಲೂಕುಗಳು ಬರಪೀಡಿತ ಎಂದು ಘೋಷಿಸಲಾಗಿದೆ. ಉಳಿದಿರುವ 41 ತಾಲೂಕುಗಳ ಪೈಕಿ ಹೆಚ್ಚುವರಿಯಾಗಿ 21 ತಾಲ್ಲೂಕುಗಳಲ್ಲಿ ತೀವ್ರತೆಯನ್ನು ಆಧರಿಸಿ 21 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿಯನ್ನು ನಿರ್ಧರಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಇದನ್ನೂ ಓದಿ: 475 ಕೋಟಿ ರೂ. ನರೇಗಾ ಹಣವನ್ನ ಕೇಂದ್ರ ಸರ್ಕಾರ ಬಿಡುಗಡೆ ಮಾಡಲಿ: ಸಚಿವ ಕೃಷ್ಣ ಬೈರೇಗೌಡ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಇಂದು ಸಚಿವ ಸಂಪುಟದ ಉಪ ಸಮಿತಿಯ ಶಿಫಾರಸ್ಸಿನಂತೆ ಅನುಬಂಧ-1ರಲ್ಲಿ ಹೊಸದಾಗಿ ಪ್ರಸ್ತಾಪಿಸಿರುವ 21 ತಾಲೂಕುಗಳಲ್ಲಿ ಶೇಕಡ 10 ರಷ್ಟು ಗ್ರಾಮಗಳನ್ನು ಯಾದೃಚ್ಛಿಕ ಆಗಿ ಆಯ್ಕೆ ಮಾಡಿ, ಪ್ರಮುಖ ಬೆಳೆಗಳನ್ನು ಗುರುತಿಸಿ ಪ್ರತಿ ಬೆಳೆಗಳ ಸುಮಾರು 5 sites ಇ-ಆಡಳಿತ ಅಭಿವೃದ್ಧಿ ಪಡಿಸಿರುವ ಆ್ಯಪ್​ ಮೂಲಕ ಪರೀಕ್ಷೆ ಮಾಡಿ, ಬರ ಪಿಡಿಯಲ್ಲಿ ನಮೂದಿಸಿರುವ Form No.11 ರಲ್ಲಿ ದೃಢೀಕೃತ ವರದಿಯನ್ನು ಸಂಬಂಧ ಪಟ್ಟ ಜಿಲ್ಲಾಧಿಕಾರಿಗಳು ಸಲ್ಲಿಸಿದ್ದರು. ಅದರಂತೆಯೇ ಇದೀಗ 21 ಬರಪೀಡಿತ, 22 ಸಾಧಾರಣ ಹೆಚ್ಚುವರಿ ಬರಪೀಡಿತ ತಾಲ್ಲೂಕುಗಳ ಪಟ್ಟಿ ಪ್ರಕಟಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:39 pm, Mon, 9 October 23

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್