ರಾಜ್ಯ ಸರ್ಕಾರಿ ನೌಕರರ ದಿನಾಚರಣೆ: ಸೆ.6ಕ್ಕೆ ಸಾಧಕರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ

| Updated By: Rakesh Nayak Manchi

Updated on: Sep 03, 2022 | 12:30 PM

ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಸೆಪ್ಟೆಂಬರ್ 6ರಂದು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ 30 ಸೇವಾ ಸಾಧಕರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ರಾಜ್ಯ ಸರ್ಕಾರಿ ನೌಕರರ ದಿನಾಚರಣೆ: ಸೆ.6ಕ್ಕೆ ಸಾಧಕರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ
ವಿಧಾನಸೌಧ
Follow us on

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಸೆಪ್ಟೆಂಬರ್ 6ರಂದು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸೇವಾ ಸಾಧಕರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಔತಣ ಸಭಾಂಗಣದಲ್ಲಿ ನಡೆಯಲಿರುವ ಈ ಸಮಾರಂಭಕ್ಕೆ ಹಾಜರಾಗುವ ಸರ್ಕಾರಿ ನೌಕರರಿಗೆ ಅರ್ಧ ದಿನದ ವಿಶೇಷ ಸಾಂದರ್ಭಿಕ ರಜೆಯ ಸೌಲಭ್ಯವನ್ನೂ ಕಲ್ಪಿಸಲಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರಿ ಸೇವೆಯಲ್ಲಿ ಅನುಪಮ ಸೇವೆ ಸಲ್ಲಿಸಿ ಗಮನಾರ್ಹ ಸಾಧನೆ ಮಾಡಿರುವ 30 ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ 2022ನೇ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಡಳಿತ ಸುಧಾರಣಾ ವಿಭಾಗದ ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀವತ್ಸ ಕೃಷ್ಣ ಅವರು ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿರುವ ಈ ಎರಡೂ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದು, ಪ್ರಶಸ್ತಿಗೆ ಆಯ್ಕೆಯಾಗಿರುವ ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ರಾಜ್ಯ ಸಚಿವ ಸಂಪುಟದ ಸದಸ್ಯರು, ಸಂಸದರು, ಶಾಸಕರು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಒಳಗೊಂಡಂತೆ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸೇರಿದಂತೆ ಸಂಘದ ಪದಾಧಿಕಾರಿಗಳು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ