AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭತ್ಯೆಗಳ ಪರಿಷ್ಕರಣೆ ಮಾಡಿ ವೈದ್ಯಾಧಿಕಾರಿಗಳಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ..

ಕೋವಿಡ್ ಸಂದರ್ಭದಲ್ಲಿ ವೈದ್ಯರು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಮತ್ತು ಭವಿಷ್ಯದಲ್ಲಿ ಯುವ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಮಾಡಲು ಪ್ರೋತ್ಸಾಹಿಸಲು ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ 2020ರ ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ವಿಶೇಷ ಭತ್ಯೆ ಪರಿಷ್ಕರಣೆಯಾಗಿದೆ.

ಭತ್ಯೆಗಳ ಪರಿಷ್ಕರಣೆ ಮಾಡಿ ವೈದ್ಯಾಧಿಕಾರಿಗಳಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ..
ಸಾಂದರ್ಭಿಕ ಚಿತ್ರ
sandhya thejappa
| Edited By: |

Updated on: Dec 22, 2020 | 4:09 PM

Share

ಬೆಂಗಳೂರು: ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೋವಿಡ್ ಸಂದರ್ಭದಲ್ಲಿ ವೈದ್ಯರು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಮತ್ತು ಭವಿಷ್ಯದಲ್ಲಿ ಯುವ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಮಾಡಲು ಪ್ರೋತ್ಸಾಹಿಸಲು ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ 2020ರ ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ವಿಶೇಷ ಭತ್ಯೆ ಪರಿಷ್ಕರಣೆಯಾಗಿದೆ.

ಭಾರಿ ಪ್ರಮಾಣದಲ್ಲಿ ಸಂಬಳ ಹೆಚ್ಚಳ: ಈ ಹಿಂದೆ 2015 ರಲ್ಲಿ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಿದ್ದ ರಾಜ್ಯ ಸರ್ಕಾರ ಇದೀಗ 0-6 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಎಸ್ ಅಥವಾ ಬಿಡಿಎಸ್ ವಿದ್ಯಾರ್ಹತೆ ಇರುವವರಿಗೆ ಮಾಸಿಕ 21.000 ರೂ.ರಿಂದ 30.500 ರೂ, ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 42.600 ರೂ.ನಿಂದ 55.500 ರೂ. ಜೊತೆಗೆ ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 50.800 ರೂ.ನಿಂದ 64.500 ರೂ.ಗೆ ಹೆಚ್ಚಳ ಮಾಡಿದೆ.

6-13 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್ ಅಥವಾ ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 22.000 ರೂ.ನಿಂದ 37.500 ರೂ. ಹಾಗೂ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 43.700 ರೂ.ನಿಂದ 64.500 ರೂ. ಜೊತೆಗೆ ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 52.100 ರೂ.ನಿಂದ 73.500 ರೂ.ಗೆ ಹೆಚ್ಚಳ ಮಾಡಿದೆ.

13-20 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್ ಅಥವಾ ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 23.000 ರೂ.ನಿಂದ 44.500 ರೂ. ಮತ್ತು ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 44.800 ರೂ.ನಿಂದ 73.500 ರೂ. ಜೊತೆಗೆ ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 58.400 ರೂ.ನಿಂದ 83.500 ರೂ.ಗೆ ಹೆಚ್ಚಳ ಮಾಡಿದೆ.

20-25 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್ ಅಥವಾ ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 23.000 ರೂ.ನಿಂದ 52.500 ರೂ. ಅಲ್ಲದೆ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 44.800 ರೂ.ನಿಂದ 83.500 ರೂ. ಮತ್ತು ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 58.400 ರೂ.ನಿಂದ 93.500 ರೂ.ಗೆ ಹೆಚ್ಚಳ ಮಾಡಿದೆ.

25 ವರ್ಷಕ್ಕಿಂತ ಹೆಚ್ಚು ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್ ಅಥವಾ ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 23.000 ರೂ.ನಿಂದ 60.500 ರೂ. ಜೊತೆಗೆ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 44.800 ರೂ.ನಿಂದ 93.500 ರೂ. ಹಾಗೂ ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 58.400 ರೂ.ನಿಂದ 1.03.500 ರೂ.ಗೆ ಹೆಚ್ಚಳ ಮಾಡಿದೆ.

ಕರ್ನಾಟಕ ಸರ್ಕಾರದ ನಡವಳಿಗಳು:

ಕಬ್ಬು ಬೆಳೆಗಾರರಿಗೆ ₹3,500 ಕೋಟಿ ಸಬ್ಸಿಡಿ: ಕೇಂದ್ರ ಅನುಮೋದನೆ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು