ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್​ಗಳಲ್ಲಿ ಸೂಕ್ತ ಆಹಾರ ತಪಾಸಣೆಗೆ ರಾಜ್ಯ ಸರ್ಕಾರ ಸೂಚನೆ

|

Updated on: Jun 14, 2024 | 11:08 PM

ರಾಜ್ಯ ಸರ್ಕಾರ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಹಾಗೂ ಲಘು ಉಪಹಾರ ಕೇಂದ್ರಗಳನ್ನು ತಪಾಸಣೆ ನಡೆಸಲು ಕ್ರಮಕೈಗೊಳ್ಳಲು ಮುಂದಾಗಿದೆ. The Food Safety and Standards Act - 2006 ಮತ್ತು 2011 ನಿಯಮಗಳಲ್ಲಿ ಸೂಚಿಸಿರುವ ಮಾರ್ಗಸೂಚಿಯಂತೆ ತಪಾಸಣೆ ನಡೆಸಿ ಸೂಕ್ತ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್​ಗಳಲ್ಲಿ ಸೂಕ್ತ ಆಹಾರ ತಪಾಸಣೆಗೆ ರಾಜ್ಯ ಸರ್ಕಾರ ಸೂಚನೆ
ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್​ಗಳಲ್ಲಿ ಸೂಕ್ತ ಆಹಾರ ತಪಾಸಣೆಗೆ ರಾಜ್ಯ ಸರ್ಕಾರ ಸೂಚನೆ
Follow us on

ಬೆಂಗಳೂರು, ಜೂನ್ 14: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಫುಡ್​ ಪಾಯಿಸನ್, ಕಲುಷಿತ ನೀರು ಸೇವನೆಯಿಂದ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಕೆಲವೆಡೆ ಸಾವನ್ನಪ್ಪಿದ್ದಾರೆ ಕೂಡ. ಹೀಗಾಗಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ (government) ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಹಾಗೂ ಲಘು ಉಪಹಾರ ಕೇಂದ್ರಗಳನ್ನು ತಪಾಸಣೆ ನಡೆಸಲು ಕ್ರಮಕೈಗೊಳ್ಳಲು ಮುಂದಾಗಿದೆ.

ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ ಸ್ವಚ್ಛತೆ ಇಲ್ಲದೆ, ಕಲುಷಿತ, ವಿಷಾಹಾರ ಸೇವನೆ, ಕಲಬೆರಕೆ ಪದಾರ್ಥಗಳು, ಅವಧಿ ಮೀರಿದ ಪದಾರ್ಥಗಳನ್ನು ಉಪಯೋಗಿಸುತ್ತಿರುವ ಘಟನೆಗಳ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮಕ್ಕೆ ಮುಂದಾಗಿದೆ.

ಸಿಎಂ ಸಿದ್ದರಾಮಯ್ಯ ಕಚೇರಿಯಿಂದ ಟ್ವೀಟ್ 


ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉತ್ತಮ ಗುಣಮಟ್ಟ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ The Food Safety and Standards Act – 2006 ಮತ್ತು 2011 ನಿಯಮಗಳಲ್ಲಿ ಸೂಚಿಸಿರುವ ಮಾರ್ಗಸೂಚಿಯಂತೆ ತಪಾಸಣೆ ನಡೆಸಿ ಸೂಕ್ತ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ತುಮಕೂರಿನಲ್ಲಿ ಕಲುಷಿತ ನೀರು ಕುಡಿದು ವಾಂತಿ ಭೇದಿ ಪ್ರಕರಣ: ಮೃತರ ಸಂಖ್ಯೆ 6ಕ್ಕೆ ಏರಿಕೆ

ಲಬೆರಕೆ ಪದಾರ್ಥಗಳು, ಅವಧಿ ಮೀರಿದ ಪದಾರ್ಥಗಳನ್ನು ಉಪಯೋಗಿಸುತ್ತಿರುವ ಬಗ್ಗೆ ಇತ್ತೀಚೆಗೆ ವರದಿ ಹಿನ್ನೆಲ್ಲೆ ಬಿಬಿಎಂಪಿ ಪೂರ್ವ ವಲಯದ ಇಂದಿರಾನಗರದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಅಧಿಕಾರಿಗಳಿಂದ ತಪಾಸಣೆ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:01 pm, Fri, 14 June 24