ಬೆಂಗಳೂರು: ರಾಜ್ಯದಲ್ಲಿ ಲಸಿಕೆ ವಿತರಣಾ ಅಭಿಯಾನಕ್ಕೆ ಸಕಲ ಸಿದ್ಧತೆಗಳನ್ನೂ ಮಾಡಲಾಗಿದೆ. ಲಸಿಕೆಗಳು ವಿವಿಧ ಹಂತದಲ್ಲಿ ಕ್ಲಿನಿಕಲ್ ಟ್ರಯಲ್ಗೆ ಒಳಪಟ್ಟಿದ್ದು, ಸಂಪೂರ್ಣ ಸುರಕ್ಷಿತವಾಗಿವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಇಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸುಧಾಕರ್, ಇಂದು ನರೇಂದ್ರ ಮೋದಿಯವರು ಸಂವಾದದಲ್ಲಿ ಹಲವು ವಿಚಾರಗಳನ್ನು ತಿಳಿಸಿದ್ದಾರೆ. ಮೊದಲನೇ ಡೋಸ್ ಬಳಿಕ 2ನೇ ಡೋಸ್ ಪಡೆಯುವಂತೆ ತಿಳಿಸಿದ್ದಾರೆ. ಅದರಂತೆ ರಾಜ್ಯದಲ್ಲಿ ಮೊದಲ ಹಂತದಲ್ಲಿ ಸುಮಾರು 16 ಲಕ್ಷ ಹೆಲ್ತ್ ವರ್ಕರ್ಸ್, ಕೊರೋನಾ ವಾರಿಯರ್ಸ್ಗೆ ಲಸಿಕೆ ನೀಡಲಾಗುವುದು. ಹಾಗೇ, 50 ವರ್ಷ ಮೇಲ್ಪಟ್ಟವರಿಗೆ, ಅನಾರೋಗ್ಯ ಇರುವವರಿಗೆ 2ನೇ ಹಂತದಲ್ಲಿ ಕೊಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಕೊರೊನಾ ಲಸಿಕೆ ಸಂಗ್ರಹ, ವಿತರಣೆಗಳಿಗೆ ಸಕಲ ಸಿದ್ಧತೆಯನ್ನೂ ಮಾಡಲಾಗಿದೆ. ಅದರಂತೆ ಹಂತಹಂತವಾಗಿ ಲಸಿಕೆ ಅಭಿಯಾನ ನಡೆಸುತ್ತೇವೆ ಎಂದು ಸುಧಾಕರ್ ತಿಳಿಸಿದರು. ಸಚಿವರು ನಿನ್ನೆ ಬೆಂಗಳೂರಿನ ಲಸಿಕೆ ಸಂಗ್ರಹ ಕೇಂದ್ರಗಳಿಗೆ ಭೇಟಿ ನೀಡಿ, ವ್ಯವಸ್ಥೆ ಪರಿಶೀಲನೆ ನಡೆಸಿದ್ದಾರೆ.
ಮೊದಲ ಹಂತದಲ್ಲಿ ರಾಜಕಾರಣಿಗಳಿಗೆ ಲಸಿಕೆ ಇಲ್ಲ: ಪ್ರಧಾನಿ ಮೋದಿ ಸ್ಪಷ್ಟ ನಿಲುವು