AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪನ್ಯಾಸಕರ ಬೇಡಿಕೆಗೆ ಸ್ಪಂದಿಸಿದ ಸರ್ಕಾರ: ಸಿಎಂ BSYರಿಂದ ನೇಮಕಾತಿ ಆದೇಶ ಪತ್ರ ವಿತರಣೆ

ಬೆಂಗಳೂರು: ನೇಮಕಾತಿ ಆದೇಶ ಪತ್ರವನ್ನು ನೀಡುವಂತೆ ಪ್ರತಿಭಟನೆ ನಡೆಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಇದೀಗ ಸಿಹಿ ಸುದ್ದಿ ನೀಡಿದೆ. ಈ ಹಿಂದೆ ಹೊಸದಾಗಿ ನೇಮಕಗೊಂಡಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ನೇಮಕಾತಿ ಆದೇಶ ಪತ್ರವನ್ನು ನೀಡದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದರು. ಆಗ, ಕಾಲೇಜುಗಳು ಪುನರಾರಂಭಗೊಂಡ ನಂತರ ಉಪನ್ಯಾಸಕರಿಗೆ ನೇಮಕಾತಿ ಆದೇಶ ಪತ್ರವನ್ನು ನೀಡುವಂತೆ ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಇದೀಗ, ಕೊಟ್ಟ ಮಾತಿನಂತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಸಾಂಕೇತಿಕವಾಗಿ […]

ಉಪನ್ಯಾಸಕರ ಬೇಡಿಕೆಗೆ ಸ್ಪಂದಿಸಿದ ಸರ್ಕಾರ: ಸಿಎಂ BSYರಿಂದ ನೇಮಕಾತಿ ಆದೇಶ ಪತ್ರ ವಿತರಣೆ
KUSHAL V
|

Updated on: Nov 20, 2020 | 7:39 PM

Share

ಬೆಂಗಳೂರು: ನೇಮಕಾತಿ ಆದೇಶ ಪತ್ರವನ್ನು ನೀಡುವಂತೆ ಪ್ರತಿಭಟನೆ ನಡೆಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಇದೀಗ ಸಿಹಿ ಸುದ್ದಿ ನೀಡಿದೆ. ಈ ಹಿಂದೆ ಹೊಸದಾಗಿ ನೇಮಕಗೊಂಡಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ನೇಮಕಾತಿ ಆದೇಶ ಪತ್ರವನ್ನು ನೀಡದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದರು. ಆಗ, ಕಾಲೇಜುಗಳು ಪುನರಾರಂಭಗೊಂಡ ನಂತರ ಉಪನ್ಯಾಸಕರಿಗೆ ನೇಮಕಾತಿ ಆದೇಶ ಪತ್ರವನ್ನು ನೀಡುವಂತೆ ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಇದೀಗ, ಕೊಟ್ಟ ಮಾತಿನಂತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಸಾಂಕೇತಿಕವಾಗಿ ಒಟ್ಟು 28 ಉಪನ್ಯಾಸಕರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಿದರು. ಜೊತೆಗೆ, ಇನ್ನುಳಿದ ಉಪನ್ಯಾಸಕರ ನೇಮಕಾತಿ ಪತ್ರವನ್ನು ಪದವಿ ಪೂರ್ವ ಮಂಡಳಿಯ ವೆಬ್​ಸೈಟ್​ನಲ್ಲಿ ಇಂದು ಅಪ್​ಲೋಡ್​ ಮಾಡಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಆರ್ಥಿಕ ಇಲಾಖೆಯ ಆದೇಶದ ಹಿನ್ನೆಲೆಯಲ್ಲಿ ಹಾಗೂ ಉಪಚುನಾವಣೆಯ ಅಂಗವಾಗಿ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದ ಕಾರಣ ಪದವಿ ಪೂರ್ವ ಉಪನ್ಯಾಸಕರ ನೇಮಕಾತಿ ಆದೇಶವನ್ನು ನೀಡುವಲ್ಲಿ ಸ್ವಲ್ಪ ವಿಳಂಬವಾಯಿತು ಎಂದು ಸಚಿವ ಸುರೇಶ್ ಕುಮಾರ್ ಅಭಿಪ್ರಾಯಪಟ್ಟರು.

Follow Us
KUSHAL V
KUSHAL V
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್