ಉಪನ್ಯಾಸಕರ ಬೇಡಿಕೆಗೆ ಸ್ಪಂದಿಸಿದ ಸರ್ಕಾರ: ಸಿಎಂ BSYರಿಂದ ನೇಮಕಾತಿ ಆದೇಶ ಪತ್ರ ವಿತರಣೆ

ಬೆಂಗಳೂರು: ನೇಮಕಾತಿ ಆದೇಶ ಪತ್ರವನ್ನು ನೀಡುವಂತೆ ಪ್ರತಿಭಟನೆ ನಡೆಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಇದೀಗ ಸಿಹಿ ಸುದ್ದಿ ನೀಡಿದೆ. ಈ ಹಿಂದೆ ಹೊಸದಾಗಿ ನೇಮಕಗೊಂಡಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ನೇಮಕಾತಿ ಆದೇಶ ಪತ್ರವನ್ನು ನೀಡದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದರು. ಆಗ, ಕಾಲೇಜುಗಳು ಪುನರಾರಂಭಗೊಂಡ ನಂತರ ಉಪನ್ಯಾಸಕರಿಗೆ ನೇಮಕಾತಿ ಆದೇಶ ಪತ್ರವನ್ನು ನೀಡುವಂತೆ ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಇದೀಗ, ಕೊಟ್ಟ ಮಾತಿನಂತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಸಾಂಕೇತಿಕವಾಗಿ […]

ಉಪನ್ಯಾಸಕರ ಬೇಡಿಕೆಗೆ ಸ್ಪಂದಿಸಿದ ಸರ್ಕಾರ: ಸಿಎಂ BSYರಿಂದ ನೇಮಕಾತಿ ಆದೇಶ ಪತ್ರ ವಿತರಣೆ

Updated on: Nov 20, 2020 | 7:39 PM

ಬೆಂಗಳೂರು: ನೇಮಕಾತಿ ಆದೇಶ ಪತ್ರವನ್ನು ನೀಡುವಂತೆ ಪ್ರತಿಭಟನೆ ನಡೆಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ
ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಇದೀಗ ಸಿಹಿ ಸುದ್ದಿ ನೀಡಿದೆ. ಈ ಹಿಂದೆ ಹೊಸದಾಗಿ ನೇಮಕಗೊಂಡಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ನೇಮಕಾತಿ ಆದೇಶ ಪತ್ರವನ್ನು ನೀಡದ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದರು. ಆಗ, ಕಾಲೇಜುಗಳು ಪುನರಾರಂಭಗೊಂಡ ನಂತರ ಉಪನ್ಯಾಸಕರಿಗೆ ನೇಮಕಾತಿ ಆದೇಶ ಪತ್ರವನ್ನು ನೀಡುವಂತೆ ರಾಜ್ಯ ಸರ್ಕಾರ ಭರವಸೆ ನೀಡಿತ್ತು.
ಇದೀಗ, ಕೊಟ್ಟ ಮಾತಿನಂತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಸಾಂಕೇತಿಕವಾಗಿ ಒಟ್ಟು 28 ಉಪನ್ಯಾಸಕರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಿದರು. ಜೊತೆಗೆ, ಇನ್ನುಳಿದ ಉಪನ್ಯಾಸಕರ ನೇಮಕಾತಿ ಪತ್ರವನ್ನು ಪದವಿ ಪೂರ್ವ ಮಂಡಳಿಯ ವೆಬ್​ಸೈಟ್​ನಲ್ಲಿ ಇಂದು ಅಪ್​ಲೋಡ್​ ಮಾಡಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಆರ್ಥಿಕ ಇಲಾಖೆಯ ಆದೇಶದ ಹಿನ್ನೆಲೆಯಲ್ಲಿ ಹಾಗೂ ಉಪಚುನಾವಣೆಯ ಅಂಗವಾಗಿ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದ ಕಾರಣ ಪದವಿ ಪೂರ್ವ ಉಪನ್ಯಾಸಕರ ನೇಮಕಾತಿ ಆದೇಶವನ್ನು ನೀಡುವಲ್ಲಿ ಸ್ವಲ್ಪ ವಿಳಂಬವಾಯಿತು ಎಂದು ಸಚಿವ ಸುರೇಶ್ ಕುಮಾರ್ ಅಭಿಪ್ರಾಯಪಟ್ಟರು.