AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್: ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ

ಹೊಸ ದರ ಪರಿಷ್ಕರಣೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ವಿದ್ಯುತ್ ದರ ಇಳಿಕೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. 100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ. ಅದೇ ರೀತಿಯಾಗಿ ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ. ಆ ಮೂಲಕ  ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್​ ನೀಡಿದೆ.

ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್: ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ
ವಿಧಾನಸೌಧ
Vinayak Hanamant Gurav
Vinayak Hanamant Gurav| Edited By: |

Updated on:Feb 28, 2024 | 5:06 PM

Share

ಬೆಂಗಳೂರು, ಫೆಬ್ರವರಿ 28: ಹೊಸ ದರ ಪರಿಷ್ಕರಣೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ವಿದ್ಯುತ್ ದರ ಇಳಿಕೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಆ ಮೂಲಕ  ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್​ ನೀಡಿದೆ. ಲೋಕಸಭೆ ಚುನಾವಣೆ ಬೆನ್ನಲ್ಲೇ ಗ್ರಾಹಕರಿಗೆ ಬಂಪರ್​ ಕೊಡುಗೆ ನೀಡಿದೆ. 100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ. ಅದೇ ರೀತಿಯಾಗಿ ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ. ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್​ಗೆ 40 ಪೈಸೆ ಕಡಿತ ಮಾಡಲಾಗಿದ್ದು, ಖಾಸಗಿ ಏತ ನೀರಾವರಿ ಬಳಕೆದಾರರಿಗೆ 2 ರೂಪಾಯಿ ಇಳಿಕೆ ಮಾಡಲಾಗಿದೆ. 100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಮಾತ್ರ ಹೊಸ ದರ ಮಾರ್ಚ್​ 1ರಿಂದಲೇ ಅನ್ವಯವಾಗಲಿದೆ.

ವಿದ್ಯುತ್ ದರ ಇಳಿಕೆಯ ಮಾಹಿತಿ ಹೀಗಿದೆ

  1. ಎಲ್‌ಟಿ ಡೊಮೆಸ್ಟಿಕ್ ಲೈಟಿಂಗ್: 100 ಯೂನಿಟ್‌ಗಿಂತ ಹೆಚ್ಚಿನ ಬಳಕೆಗಾಗಿ ಪ್ರತಿ ಯೂನಿಟ್‌ಗೆ 110 ಪೈಸೆ ಕಡಿಮೆ ಮಾಡಲಾಗಿದೆ.
  2. ಹೆಚ್​ಟಿ ಕಮರ್ಷಿಯಲ್: ವಿದ್ಯುತ್ ದರವು ಪ್ರತಿ ಯೂನಿಟ್‌ಗೆ 1 ರೂ. 25 ಪೈಸೆ ಕಡಿಮೆ ಮಾಡಲಾಗಿದೆ. ಅಂದರೆ ಬೇಡಿಕೆಯ ಶುಲ್ಕಗಳ ಪ್ರತಿ ಕೆವಿಎಗೆ (ಕಿಲೋವೋಲ್ಟ್‌ ಆಂಪಿಯರ್‌) ರೂ.10 ರಷ್ಟು ಕಡಿಮೆ ಮಾಡಲಾಗಿದೆ. ಹೆಚ್​ಟಿ ಇಂಡಸ್ಟ್ರಿಯಲ್: ಪ್ರತಿ ಯೂನಿಟ್‌ಗೆ 50 ಪೈಸೆ ಇಳಿಕೆ ಮಾಡಲಾಗಿದೆ. ಬೇಡಿಕೆಯ ಶುಲ್ಕಗಳ ಪ್ರತಿ ಕೆವಿಎಗೆ ರೂ.10 ಕಡಿಮೆಯಾಗಿದೆ.
  3. ಹೆಚ್​ಟಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳು: ಪ್ರತಿ ಯೂನಿಟ್‌ಗೆ 40 ಪೈಸೆ ಇಳಿಕೆ ಮಾಡಲಾಗಿದೆ. ಬೇಡಿಕೆಯ ಶುಲ್ಕಗಳು ಪ್ರತಿ ರೂ.10 ರಷ್ಟು ಕಡಿಮೆಯಾಗಿದೆ.
  4. ಹೆಚ್​ಟಿ ಖಾಸಗಿ ಏತ ನೀರಾವರಿ: ಪ್ರತಿ ಯೂನಿಟ್‌ಗೆ 200 ಪೈಸೆ ಕಡಿಮೆಯಾಗಿದೆ.
  5. ಹೆಚ್​ಟಿ ವಸತಿ ಅಪಾರ್ಟ್‌ಮೆಂಟ್‌ಗಳು: ಪ್ರತಿ ಪ್ರತಿ ಕೆವಿಎಗೆ ರೂ.10 ಕಡಿಮೆಯಾಗಿದೆ.
  6. ಎಲ್​​ಟಿ ಖಾಸಗಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳು: ಪ್ರತಿ ಯೂನಿಟ್‌ಗೆ 50 ಪೈಸೆ ಇಳಿಕೆ ಮಾಡಲಾಗಿದೆ.
  7. ಎಲ್​ಟಿ ಕೈಗಾರಿಕಾ ಸ್ಥಾಪನೆಗಳು: ಪ್ರತಿ ಘಟಕಕ್ಕೆ 100 ಪೈಸೆ ಕಡಿಮೆ ಮಾಡಲಾಗಿದೆ.
  8. ಎಲ್​ಟಿ ವಾಣಿಜ್ಯ ಸ್ಥಾಪನೆಗಳು: ಪ್ರತಿ ಯೂನಿಟ್‌ಗೆ 50 ರಷ್ಟು ಕಡಿಮೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:39 pm, Wed, 28 February 24

Follow Us
Vinayak Hanamant Gurav
Vinayak Hanamant Gurav
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ