AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐವರು IAS​ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರತಿಯೊಂದು ಪಕ್ಷಗಳು ಸಾಕಷ್ಟು ಕಸರತ್ತು ಮಾಡುತ್ತಿವೆ. ಯಾವ ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಗೆಲ್ಲಬಹುದು ಎಂಬ ಲೆಕ್ಕಾಚಾರವನ್ನು ಹಾಕಲಾಗುತ್ತಿದೆ. ಇದೆಲ್ಲದರ ಮಧ್ಯೆ  ಐವರು ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಐವರು IAS​ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on:Mar 14, 2024 | 8:35 PM

ಬೆಂಗಳೂರು, ಮಾರ್ಚ್​ 14: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರತಿಯೊಂದು ಪಕ್ಷಗಳು ಸಾಕಷ್ಟು ಕಸರತ್ತು ಮಾಡುತ್ತಿವೆ. ಯಾವ ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಗೆಲ್ಲಬಹುದು ಎಂಬ ಲೆಕ್ಕಾಚಾರವನ್ನು ಹಾಕಲಾಗುತ್ತಿದೆ. ಇದೆಲ್ಲದರ ಮಧ್ಯೆ  ಐವರು ಐಎಎಸ್​​ ಅಧಿಕಾರಿಗಳನ್ನು ವರ್ಗಾವಣೆ (transfer) ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

5 ಐಎಎಸ್ ಅಧಿಕಾರಿಗಳ ವರ್ಗಾವಣೆ

  • ಡಾ. ಅಜಯ್ ನಾಗಭೂಷಣ್ ಎಂ.ಎನ್: ಕಾರ್ಯದರ್ಶಿ, ಪಶುಸಂಗೋಪನಾ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹುದ್ದೆ ಹೆಚ್ಚುವರಿ ಹೊಣೆ
  • ತುಳಸ ಮದ್ದಿನೇನಿ: ಕಾರ್ಯದರ್ಶಿ, ಡಿಪಿಎಆರ್
  • ಅರ್ಚನಾ ಎಂ.ಎಸ್: ಮುಖ್ಯ ಸಂಪಾದಕಿ, ಕರ್ನಾಟಕ ಗೆಜೆಟಿಯರ್ ಇಲಾಖೆ
  • ಪ್ರಿಯಾಂಗ ಎಂ: ಎಂಡಿ, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ
  • ಭರತ್ ಎಸ್: ಸಿಇಒ, ಜಿ.ಪಂ. ಗದಗ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: IAS Officer Transfer: 14 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ; ಇಲ್ಲಿದೆ ಪೂರ್ಣ ವಿವರ

ಇತ್ತೀಚೆಗೆ 14 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿತ್ತು. ಈ ಆದೇಶಕ್ಕೂ ಕೆಲವೇ ಕ್ಷಣಗಳ ಮುನ್ನ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು.

ನಾಲ್ವರು ಐಪಿಎಸ್ ವರ್ಗಾವಣೆ

ಫೆಬ್ರುವರಿ 1 ರಂದು ಅಷ್ಟೇ ನಾಲ್ವರು ಐಪಿಎಸ್​ (IPS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಅಮಿತ್ ಸಿಂಗ್, ಡಿಐಜಿಪಿ, ದಕ್ಷಿಣ ವಲಯ (ಮೈಸೂರು), ಡಾ.ಎಂ.ಬಿ.ಬೋರಲಿಂಗಯ್ಯ, ಡಿಐಜಿಪಿ, ಪಶ್ಚಿಮ ವಲಯ (ಮಂಗಳೂರು), ಶಿವಪ್ರಕಾಶ್ ದೇವರಾಜು, ಪೊಲೀಸ್ ವರಿಷ್ಠಾಧಿಕಾರಿ, (ಕಲಬುರಗಿ) ಮತ್ತು ಎ.ಶ್ರೀನಿವಾಸುಲು, ಡಿಸಿಪಿ, ಬೆಂಗಳೂರು ದಕ್ಷಿಣ ಸಂಚಾರ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:32 pm, Thu, 14 March 24