ಬೆಂಗಳೂರು, ಮಾರ್ಚ್ 14: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರತಿಯೊಂದು ಪಕ್ಷಗಳು ಸಾಕಷ್ಟು ಕಸರತ್ತು ಮಾಡುತ್ತಿವೆ. ಯಾವ ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಗೆಲ್ಲಬಹುದು ಎಂಬ ಲೆಕ್ಕಾಚಾರವನ್ನು ಹಾಕಲಾಗುತ್ತಿದೆ. ಇದೆಲ್ಲದರ ಮಧ್ಯೆ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ (transfer) ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: IAS Officer Transfer: 14 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ; ಇಲ್ಲಿದೆ ಪೂರ್ಣ ವಿವರ
ಇತ್ತೀಚೆಗೆ 14 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿತ್ತು. ಈ ಆದೇಶಕ್ಕೂ ಕೆಲವೇ ಕ್ಷಣಗಳ ಮುನ್ನ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು.
ಫೆಬ್ರುವರಿ 1 ರಂದು ಅಷ್ಟೇ ನಾಲ್ವರು ಐಪಿಎಸ್ (IPS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಅಮಿತ್ ಸಿಂಗ್, ಡಿಐಜಿಪಿ, ದಕ್ಷಿಣ ವಲಯ (ಮೈಸೂರು), ಡಾ.ಎಂ.ಬಿ.ಬೋರಲಿಂಗಯ್ಯ, ಡಿಐಜಿಪಿ, ಪಶ್ಚಿಮ ವಲಯ (ಮಂಗಳೂರು), ಶಿವಪ್ರಕಾಶ್ ದೇವರಾಜು, ಪೊಲೀಸ್ ವರಿಷ್ಠಾಧಿಕಾರಿ, (ಕಲಬುರಗಿ) ಮತ್ತು ಎ.ಶ್ರೀನಿವಾಸುಲು, ಡಿಸಿಪಿ, ಬೆಂಗಳೂರು ದಕ್ಷಿಣ ಸಂಚಾರ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:32 pm, Thu, 14 March 24