AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸದ ಅವಧಿ ಮೊದಲಿನಂತೆ 8 ಗಂಟೆ ಮಾತ್ರ, ರಾಜ್ಯದ ಮಹತ್ವದ ನಿರ್ಧಾರ

ಬೆಂಗಳೂರು: ಮಹತ್ವಪೂರ್ಣ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಕಾರ್ಮಿಕರ ಕೆಲಸದ ಸಮಯವನ್ನ ಮತ್ತೇ 8 ಗಂಟೆಗೆ ಇಳಿಸಿದೆ. ಈ ಸಂಬಂಧ ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಕೋವಿಡ್‌-19 ನಿಮಿತ್ತ ವಿಧಿಸಿದ್ದ ಲಾಕ್‌ಡೌನ್‌ ಸಮಯದಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನ 8 ಗಂಟೆಯಿಂದ 10 ಗಂಟೆಗೆ ಏರಿಸಿತ್ತು. ಇದು ಕಾರ್ಮಿಕರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಹಲವಾರು ಕಾರ್ಮಿಕ ಸಂಘಟನೆಗಳು ಮತ್ತು ಕಾರ್ಮಿಕ ಮುಖಂಡರು ಸರಕಾರಕ್ಕೆ ಮನವಿ ಮಾಡಿ ಕೆಲಸದ ಅವಧಿ ವಿಸ್ತರಣೆಯನ್ನ ಹಿಂದಕ್ಕೆ ಪಡೆಯಲು ಆಗ್ರಹಿಸಿದ್ದರು. ಕೆಲವರು ಈ […]

ಕೆಲಸದ ಅವಧಿ ಮೊದಲಿನಂತೆ 8 ಗಂಟೆ ಮಾತ್ರ, ರಾಜ್ಯದ ಮಹತ್ವದ ನಿರ್ಧಾರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 12, 2020 | 3:17 PM

Share

ಬೆಂಗಳೂರು: ಮಹತ್ವಪೂರ್ಣ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಕಾರ್ಮಿಕರ ಕೆಲಸದ ಸಮಯವನ್ನ ಮತ್ತೇ 8 ಗಂಟೆಗೆ ಇಳಿಸಿದೆ. ಈ ಸಂಬಂಧ ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.

ಕೋವಿಡ್‌-19 ನಿಮಿತ್ತ ವಿಧಿಸಿದ್ದ ಲಾಕ್‌ಡೌನ್‌ ಸಮಯದಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನ 8 ಗಂಟೆಯಿಂದ 10 ಗಂಟೆಗೆ ಏರಿಸಿತ್ತು. ಇದು ಕಾರ್ಮಿಕರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಹಲವಾರು ಕಾರ್ಮಿಕ ಸಂಘಟನೆಗಳು ಮತ್ತು ಕಾರ್ಮಿಕ ಮುಖಂಡರು ಸರಕಾರಕ್ಕೆ ಮನವಿ ಮಾಡಿ ಕೆಲಸದ ಅವಧಿ ವಿಸ್ತರಣೆಯನ್ನ ಹಿಂದಕ್ಕೆ ಪಡೆಯಲು ಆಗ್ರಹಿಸಿದ್ದರು. ಕೆಲವರು ಈ ಸಂಬಂಧ ಕೋರ್ಟ್‌ ಮೆಟ್ಟಿಲು ಕೂಡಾ ಏರಿದ್ದರು.

ಈ ಸಮಯದಲ್ಲಿ ಸುಮೋಟೋ ಬಳಸಿ ಸರಕಾರ ಪ್ರಕರಣವನ್ನ ಹಿಂಪಡೆದಿತ್ತು. ನಂತರ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಕಾರ್ಮಿಕ ಸಚಿವರು, ಕೆಲಸದ ಅವಧಿ ವಿಸ್ತರಣೆಯನ್ನ ಹಿಂಪಡೆದು ತಕ್ಷಣದಿಂದಲೇ ಜಾರಿಗೆ ಬರುವಂತೆ ಮೊದಲಿನಂತೆ 8 ಗಂಟೆಗೆ ಇಳಿಸಿದ್ದಾರೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್