ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ‘Y’ ಶ್ರೇಣಿಯ ಭದ್ರತೆ ನೀಡಿದ ರಾಜ್ಯ ಸರ್ಕಾರ
ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ಸದ್ಯ ನಿರತಾಗಿರುವ ಶ್ರೀಗಳು ದೇಶಾದ್ಯಂತ ಸಂಚಾರ ಕೈಗೊಂಡಿದ್ದಾರೆ. ಅಲ್ಲಲ್ಲಿ ಸಭೆ ಸಮಾರಂಭ, ಕಾರ್ಯಕ್ರಮ ಉದ್ಘಾಟನೆ, ಧನ ಸಂಗ್ರಹ ಕಚೇರಿ ತೆರೆಯುತ್ತಿದ್ದಾರೆ.
ಉಡುಪಿ: ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ವಿಶ್ವಸ್ಥ ಮಂಡಳಿಯಲ್ಲಿರುವ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಕರ್ನಾಟಕ ಸರಕಾರ ‘ವೈ’ ಶ್ರೇಣಿ ಭದ್ರತೆ ಮಂಜೂರು ಮಾಡಿದೆ.
ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ಸದ್ಯ ನಿರತಾಗಿರುವ ಶ್ರೀಗಳು ದೇಶಾದ್ಯಂತ ಸಂಚಾರ ಕೈಗೊಂಡಿದ್ದಾರೆ. ಅಲ್ಲಲ್ಲಿ ಸಭೆ ಸಮಾರಂಭ, ಕಾರ್ಯಕ್ರಮ ಉದ್ಘಾಟನೆ, ಧನ ಸಂಗ್ರಹ ಕಚೇರಿ ತೆರೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ ರಘುಪತಿ ಭಟ್ ಸರಕಾರಕ್ಕೆ ಮನವಿ ಸಲ್ಲಿಸಿದ್ದರು.
ಸೂಕ್ತ ಭಧ್ರತೆ ಒದಗಿಸುವ ಹಿನ್ನೆಲೆಯಲ್ಲಿ ತ್ವರಿತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ, ಪೇಜಾವರಶ್ರೀ ಗಳಿಗೆ ವೈ ಶ್ರೇಣಿಯ ಭದ್ರತೆಯನ್ನು ಒದಗಿಸಿದ್ದಾರೆ. ಸ್ವಾಮೀಜಿಯವರ ವಾಹನಕ್ಕೆ ಒಂದು ಪೊಲೀಸ್ ವಾಹನದ ಬೆಂಗಾವಲು ವ್ಯವಸ್ಥೆ ಇನ್ನು ಮುಂದೆ ಇರಲಿದೆ.
ಭದ್ರತೆ ಒದಗಿಸಿದ್ದಕ್ಕಾಗಿ ಸಿಎಂ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉಡುಪಿ ಶಾಸಕ ರಘುಪತಿ ಭಟ್ ಹಾಗೂ ರಾಜ್ಯ ಪೋಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಉಡುಪಿ ಪೇಜಾವರ ಮಠ ಕೃತಜ್ಞತೆ ಸಲ್ಲಿಸಿದೆ.
Published On - 4:24 pm, Fri, 1 January 21