ಗೋ ಹತ್ಯೆ ಪ್ರತಿಬಂಧಕ ಕಾಯ್ದೆ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್​ಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ರಾಜ್ಯ ಸರ್ಕಾರ

ಸರ್ಕಾರ ಜೂನ್ 9 ರ ಒಳಗೆ ಗೋ ಹತ್ಯೆ ಪ್ರತಿಬಂಧಕ ಕಾನೂನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಆಕ್ಷೇಪಣೆ ಸಲ್ಲಿಸಬೇಕು. ಇಲ್ಲವಾದರೆ ಮಧ್ಯಂತರ ತಡೆಯಾಜ್ಞೆ ಅವಕಾಶವನ್ನು ಪರಿಗಣಿಸಲಾಗುವುದು ಎಂದು ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಸರ್ಕಾರಿ ವಕೀಲರಿಗೆ ಸೂಚನೆ ನೀಡಿದೆ.

ಗೋ ಹತ್ಯೆ ಪ್ರತಿಬಂಧಕ  ಕಾಯ್ದೆ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್​ಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ರಾಜ್ಯ ಸರ್ಕಾರ
ಕರ್ನಾಟಕ ಹೈಕೋರ್ಟ್
Follow us
guruganesh bhat
|

Updated on:May 27, 2021 | 5:11 PM

ಬೆಂಗಳೂರು: ಗೋ ಹತ್ಯೆ ಪ್ರತಿಬಂಧಕ ಕಾಯ್ದೆ ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ (ಪಿಐಎಲ್) ಆಕ್ಷೇಪಣೆ ಸಲ್ಲಿಸಲು ಕರ್ನಾಟಕ ಸರ್ಕಾರ ಮತ್ತೊಮ್ಮೆ ಕಾಲಾವಕಾಶ ಕೋರಿದೆ. ಈ ಕಾಯ್ದೆಯಡಿ ಈಗಾಗಲೇ 50 ಕ್ಕೂ ಹೆಚ್ಚು ಎಫ್ಐಆರ್​ಗಳನ್ನು ಪೊಲೀಸರು ದಾಖಲಿಸಿದ್ದು, ಕಾಯ್ದೆಗೆ ತಡೆ ನೀಡಲು ಅರ್ಜಿದಾರರ ಪರ ವಕೀಲರ ಮನವಿ ಮಾಡಿದ್ದರು.

ಸರ್ಕಾರ ಜೂನ್ 9 ರ ಒಳಗೆ ಗೋ ಹತ್ಯೆ ಪ್ರತಿಬಂಧಕ ಕಾನೂನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಆಕ್ಷೇಪಣೆ ಸಲ್ಲಿಸಬೇಕು. ಇಲ್ಲವಾದರೆ ಮಧ್ಯಂತರ ತಡೆಯಾಜ್ಞೆ ಅವಕಾಶವನ್ನು ಪರಿಗಣಿಸಲಾಗುವುದು ಎಂದು ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಸರ್ಕಾರಿ ವಕೀಲರಿಗೆ ಸೂಚನೆ ನೀಡಿದೆ. ಮೊಹಮ್ಮದ್ ಆರಿಫ್ ಜಮೀಲ್ ಮತ್ತಿತರರು ಗೋ ಹತ್ಯೆ ಪ್ರತಿಬಂಧಕ ಕಾನೂನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಸಲ್ಲಿಸಿದ್ದರು.

ಈ ಮುನ್ನವೇ ಕಾಯ್ದೆಯನ್ನು ವಿರೋಧಿಸಿದ್ದ ಸಿದ್ದರಾಮಯ್ಯ ಗೋಹತ್ಯೆ ನಿಷೇಧ 1964 ರಿಂದಲೇ ಇದೆ. ಆದರೆ, ಈಗ ರಾಜ್ಯ ಸರ್ಕಾರ ತನ್ನ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಜನರ ಗಮನ ಬೇರೆಡೆ ಸೆಳೆಯಲು ಹೊಸದಾಗಿ ಒಂದಷ್ಟು ಸೇರಿಸಿ ಕಾಯ್ದೆ ತರಲು ಹೊರಟಿದೆ. ವಿಧಾನಸಭೆಯಲ್ಲಿ ಚರ್ಚೆಗೆ ಅವಕಾಶ ನೀಡದೆ ಮಸೂದೆ ಮಂಡಿಸಿ ಅಂಗೀಕಾರ ಪಡೆಯುವ ಪ್ರಯತ್ನ ಮಾಡಿದೆ. ಇದು ಭಾರತೀಯ ಜನತಾ ಪಕ್ಷದ ರಾಜಕೀಯ ಮತ್ತು ನೈತಿಕ ದಿವಾಳಿತನಕ್ಕೆ ಸಾಕ್ಷಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ  ಗೋ ಹತ್ಯೆ ಪ್ರತಿಬಂಧಕ ಕಾಯ್ದೆ ಜಾರಿಗೊಳಿಸುವ ಸಂದರ್ಭದಲ್ಲೇ ವಿರೋಧಿಸಿದ್ದರು.

ಗೋಹತ್ಯೆ ನಿಷೇಧಿಸುವ ಮೊದಲು ಅನುತ್ಪಾದಕ ಜಾನುವಾರುಗಳನ್ನು ಸರ್ಕಾರವೇ ಖರೀದಿಸಬೇಕು. ಅಥವಾ ಸಾಕಣಿಕೆಗೆ ತಗಲುವ ವೆಚ್ಚವನ್ನು ಸರ್ಕಾರ ಭರಿಸಬೇಕು. ಇದಕ್ಕೆ ಸಿದ್ಧವಿದ್ದರೆ ಮುಂದಿನ ವಾರವೇ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲಿ ನಾವು ಭಾಗವಹಿಸುತ್ತೇವೆ ಎಂದು ತಿಳಿಸಿದ್ದರು.

ಆದರೆ, ಕಳೆದ 20 ವರ್ಷಗಳಲ್ಲಿ ಕನಿಷ್ಠ 15 ವರ್ಷ ರಾಜ್ಯ ಬರಗಾಲ ಎದುರಿಸಿದೆ. ಜಾನುವಾರುಗಳಿಗೆ ಮೇವು ಒದಗಿಸಲು ಅಸಾಧ್ಯ ಎಂಬ ಪರಿಸ್ಥಿತಿ ಎದುರಾದಾಗ ಸಹಜವಾಗಿಯೇ ರೈತರು ತಮ್ಮ ಜಾನುವಾರುಗಳನ್ನು ಮಾರಾಟ ಮಾಡುತ್ತಾರೆ. ಆದರೆ, ಹೊಸ ಕಾಯ್ದೆಯಿಂದ ಇಂತಹ ಸನ್ನಿವೇಶದಲ್ಲಿ ಸಂಘರ್ಷ ಉಂಟಾಗುತ್ತದೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಸೋಮವಾರದೊಳಗೆ ಕಟ್ಟಡ ಕಾರ್ಮಿಕರಿಗೆ ತಲುಪಲಿದೆ ಕೊವಿಡ್ ಪ್ಯಾಕೇಜ್: ಸಚಿವ ಶಿವರಾಮ್ ಹೆಬ್ಬಾರ್

ತಮಿಳುನಾಡಿನಲ್ಲಿ 3000 ಬೆಡ್​ಗಳ ಕೊವಿಡ್ ಆಸ್ಪತ್ರೆ ನಿರ್ಮಿಸಿದ ಮೇಘಾ ಎಂಜಿನಿಯರಿಂಗ್ ಅಂಡ್ ಇನ್ಪಾಸ್ಟ್ರಕ್ಚರ್ ಕಂಪನಿ

(State Government seeking time to file objections to PIL against Prevention of Slaughter and Preservation of Cattle Bill 2020

Published On - 5:10 pm, Thu, 27 May 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ