Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರಶೈವ ಲಿಂಗಾಯತರನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಬೇಕು: ಶಾಮನೂರು ಶಿವಶಂಕರಪ್ಪ

ವೀರಶೈವ ಲಿಂಗಾಯತ ಸಮುದಾಯಕ್ಕೆ ಒಬಿಸಿ 2ಎ ವಿಭಾಗಕ್ಕೆ ಸೇರ್ಪಡೆಗೊಳಿಸಬೇಕು ಎಂಬ ಬೇಡಿಕೆ ಹೆಚ್ಚುತ್ತಲೇ ಇದ್ದು, ಹೋರಾಟವೂ ನಡೆಯುತ್ತಿದೆ. ಇಂದು ಪಂಚಮಸಾಲಿ ಗುರುಪೀಠದಲ್ಲಿ ನಡೆದ ಹರ ಜಾತ್ರೆಯಲ್ಲಿ ಮಾತನಾಡಿದ ವೀರಶೈವ ಮಹಾಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ವೀರಶೈವ ಸಮುದಾಯವನ್ನು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಲು ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕು ಎಂದು ಆಗ್ರಹಿಸಿದರು.

ವೀರಶೈವ ಲಿಂಗಾಯತರನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಬೇಕು: ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: Rakesh Nayak Manchi

Updated on: Jan 15, 2024 | 2:46 PM

ದಾವಣಗೆರೆ, ಜ.15: ಸಕಲ ವೀರಶೈವ ಸಮುದಾಯವನ್ನು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಲು ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕು ಎಂದು ವೀರಶೈವ ಮಹಾಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (Shamanur Shivashankarappa) ಒತ್ತಾಯಿಸಿದರು. ಹರಿಹರ ತಾಲೂಕಿನ ಹನಗವಾಡಿ ಬಳಿಯ ಪಂಚಮಸಾಲಿ ಗುರುಪೀಠದಲ್ಲಿ ಇಂದು ನಡೆದ ಹರ ಜಾತ್ರೆಯಲ್ಲಿ ಮಾತನಾಡಿದ ಅವರು, ಸರ್ಕಾರ ಯಾವುದೇ ರಾಜಕೀಯ ಮಾಡದೆ ಶಿಫಾರಸ್ಸು ಮಾಡಬೇಕು ಎಂದರು.

ವೀರಶೈವರು ಹಾಗೂ ಲಿಂಗಾಯತರು ಬೇರೆ ಬೇರೆ ಅಲ್ಲ, ಎಲ್ಲರೂ ಒಂದೇ. ವೀರಶೈವ ಲಿಂಗಾಯತರು ಒಳಪಂಗಡಗಳ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು. ಎಲ್ಲಾ ವೀರಶೈವ ಲಿಂಗಾಯತರು ಒಂದೇ ಎಂಬುದನ್ನು ತಿಳಿಯಬೇಕು ಎಂದು ಕಾಂಗ್ರೆಸ್​ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದರು.

ವೀರಶೈವ ಲಿಂಗಾಯತ ಸಮುದಾಯದ ಬಡ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗಕ್ಕೆ ಅನುಕೂಲ ಆಗುವ ದೃಷ್ಟಿಯಿಂದ ಸರ್ಕಾರ ಶಿಫಾರಸು ಮಾಡಲಿ. ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರ್ಪಡೆಗೆ ಶಿಫಾರಸ್ಸು ಮಾಡಬೇಕು. ಇತ್ತೀಚೆಗೆ ಪಂಚಮಸಾಲಿ ಸಮುದಾಯ ಹೆಚ್ಚು ಬೆಳವಣಿಗೆ ಹೊಂದುತ್ತಿದೆ. ಇದು ಸಂತಸದ ವಿಚಾರ ಎಂದರು.

ಇದನ್ನೂ ಓದಿ: ರಾಜ್ಯ ಸರ್ಕಾರ ಜಾತಿ ಗಣತಿ ಅಂಗೀಕರಿಸುವ ಹಠಕ್ಕೆ ಬೀಳಬಾರದು; ಶಾಮನೂರು ಶಿವಶಂಕರಪ್ಪ ಎಚ್ಚರಿಕೆ

ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಇದಕ್ಕೆ ಸಮುದಾಯದ ರಾಜಕೀಯ ನಾಯಕರು ಪಕ್ಷಾತೀತವಾಗಿ ಬೆಂಬಲ ಸೂಚಿಸಿದ್ದಾರೆ. ಮೀಸಲಾತಿ ನೀಡದಿದ್ದಲ್ಲಿ ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿಗಾಗಿ ನಡೆದ ಹೋರಾಟದ ಮಾದರಿಯಲ್ಲಿ ಹೋರಾಟ ಮಾಡುತ್ತೇವೆ ಎಂದು ಇತ್ತೀಚೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ನೀಡಿದ್ದರು.

2ಎ ಮೀಸಲಾತಿ ರಾಜ್ಯ ಸರ್ಕಾರದ ಕೈಯಲ್ಲಿದೆ. ಒಬಿಸಿಗೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕು. ಕೇಂದ್ರ ಸರ್ಕಾರ ಮೀಸಲಾತಿ ಘೋಷಿಸಬೇಕು. ಆದರೆ ಎರಡೂ ಕಡೆ ಎರಡು ರಾಷ್ಟ್ರೀಯ ಪಕ್ಷಗಳು ಅಧಿಕಾರದಲ್ಲಿವೆ. ಈಗ ಲೋಕಸಭೆ ಚುನಾವಣೆ ಬಂದಿದೆ. ಈ ಸಮಯದಲ್ಲಿ ನಮ್ಮ ಬೇಡಿಕೆ ಈಡೇರಬೇಕು. ಇಲ್ಲದೇ ಹೋದಲ್ಲಿ ಎರಡೂ ಪಕ್ಷಗಳಿಗೆ ಸಮಾಜದ ಜನ ಪಾಠ ಕಲಿಸುತ್ತಾರೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್