ಹೊಸ ರೂಪದಲ್ಲಿ ವಿದ್ಯಾಗಮ ಯೋಜನೆ ಮತ್ತೆ ಆರಂಭ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 15, 2020 | 9:35 PM

ಯೋಜನೆಯಲ್ಲಿ ಹಲವಾರು ಸುಧಾರಣೆಗಳು ಕಂಡುಬಂದಿದ್ದು, ಸರ್ಕಾರಿ, ಅನುದಾನಿತ, ಅನುದಾನಿಯ ರಹಿತ ಶಾಲೆ ಆವರಣದಲ್ಲಿ ವಿದ್ಯಾಗಮ ಕಾರ್ಯಕ್ರಮ ನಡೆಸುವುದಕ್ಕೆ ಅನುವು ಮಾಡಿದೆ. ಪ್ರಸ್ತುತ ಇರುವ ಆನ್ಲೈನ್, ಚಂದನ ವಾಹಿನಿ ಪಾಠಗಳು ಎಂದಿನಂತೆ ಮುಂದವರೆಯುತ್ತವೆ.

ಹೊಸ ರೂಪದಲ್ಲಿ ವಿದ್ಯಾಗಮ ಯೋಜನೆ ಮತ್ತೆ ಆರಂಭ
ಸಚಿವ ಎಸ್. ಸುರೇಶ್ ಕುಮಾರ್
Follow us on

ಬೆಂಗಳೂರು: ಕೆಲವು ದಿನಗಳ ಹಿಂದೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ವಿದ್ಯಾಗಮ ಯೋಜನೆಯನ್ನು ಮತ್ತೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಯೋಜನೆಯನ್ನು ಪರಿಷ್ಕರಿಸಿ ಸುರಕ್ಷತಾ ಕ್ರಮಗಳೊಂದಿಗೆ ಅನುಷ್ಠಾನಗೊಳಿಸಲು ಮುಂದಾದ ರಾಜ್ಯ ಸರ್ಕಾರ ಹೈಕೊರ್ಟ್ ಆಕ್ಷೇಪನುಸಾರವಾಗಿ ಹೊಸ ರೂಪದಲ್ಲಿ ಅನುಷ್ಠಾನಗೊಳಿಸಲು ನಿರ್ಧರಿಸಿದೆ.

ಯೋಜನೆ ಅನುಷ್ಠಾನ ಪ್ರಕ್ರಿಯೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ ಆವರಣದಲ್ಲಿ ವಿದ್ಯಾಗಮ ಕಾರ್ಯಕ್ರಮ ನಡೆಸುವುದಕ್ಕೆ ಅನುವು ಮಾಡಲಾಗಿದೆ. ಪ್ರಸ್ತುತ ಇರುವ ಆನ್​ಲೈನ್ ಮತ್ತು ಚಂದನ ವಾಹಿನಿ ಪಾಠಗಳು ಎಂದಿನಂತೆ ಮುಂದವರೆಯುತ್ತವೆ.

ಮಕ್ಕಳಿಗೆ ಥರ್ಮಲ್ ಸ್ಕ್ರೀನಿಂಗ್: ಮುನ್ನೆಚ್ಚರಿಕೆಯಿಂದ ಶಾಲೆಯಲ್ಲಿ ಮಕ್ಕಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತದೆ. ಕೊರೊನಾ ಲಕ್ಷಣ ಇರುವ ಮಕ್ಕಳು ಶಾಲೆಗೆ ಬರುವಂತಿಲ್ಲ. ಹಾಗೇ ದಿನಕ್ಕೆ 7ರಿಂದ 8 ತಂಡಗಳಲ್ಲಿ ವಿದ್ಯಾರ್ಥಿಗಳಿಗೆ ಬರಲು ಸೂಚನೆ ನೀಡಿದೆ. ಬೆಳಿಗ್ಗೆ 45 ನಿಮಿಷದ 3 ತರಗತಿಗಳು, ಮಧ್ಯಾಹ್ನ 3 ತರಗತಿಗಳಂತೆ ಎರಡು ಪಾಳಿಯಲ್ಲಿ ವಿದ್ಯಾಗಮ ತರಗತಿಗಳು ನಡೆಯಲಿವೆ.

ಟಿವಿ 9 ಅಭಿಯಾನಕ್ಕೆ ಮಹಾ ಗೆಲುವು: ವಿದ್ಯಾಗಮ ಯೋಜನೆ ತಾತ್ಕಾಲಿಕ ಸ್ಥಗಿತಕ್ಕೆ ಸರ್ಕಾರ ನಿರ್ದೇಶನ