ಮಹಾ ಕುಂಭಮೇಳದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮಡಿದವರಿಗೆ ಸರ್ಕಾರ ಪರಿಹಾರ ನೀಡಲಿದೆ: ಸಿದ್ದರಾಮಯ್ಯ

ಮಹಾ ಕುಂಭಮೇಳದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮಡಿದವರಿಗೆ ಸರ್ಕಾರ ಪರಿಹಾರ ನೀಡಲಿದೆ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 30, 2025 | 1:44 PM

ಮಹಾಕುಂಭ ಮೇಳದಲ್ಲಿ ಕಾಲ್ತುಳಿತದ ಘಟನೆಯ ನಂತರ ಮಡಿದವರ ಹೊರತಾಗಿ ಇನ್ನೂ ಎಂಟು ಜನ ಕಾಣೆಯಾಗಿರುವ ಸುದ್ದಿಯಿದೆ. ಅವರ ಶೋಧಕ್ಕಾಗಿ ಮತ್ತು ಸುರಕ್ಷಿತವಾಗಿ ವಾಪಸ್ಸು ಕರೆತರಲು ಸರ್ಕಾರ ಏನಾದರೂ ಕ್ರಮ ಕೈಗೊಂಡಿದೆಯೇ ಎಂದು ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ, ಕಾಣೆಯಾದವರ ಬಗ್ಗೆ ಸರ್ಕಾರಕ್ಕೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್​ರಾಜ್​ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮಡಿದಿರುವ ನಾಲ್ವರು ಕನ್ನಡಿಗರಿಗೆ ಕರ್ನಾಟಕ ಸರ್ಕಾರ ಸೂಕ್ತ ಪರಿಹಾರ ನೀಡಲಿದೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿಯ ಬಳಿ ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತಾಡಿದ ಅವರು ಪಾರ್ಥೀವ ಶರೀರಗಳನ್ನು ಬೆಳಗಾವಿಗೆ ತರಲು ಏರ್ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ, ಬೆಳಗಾವಿ ಜಿಲ್ಲಾಧಿಕಾರಿ ದೇಹಗಳನ್ನು ರಿಸೀವ್ ಮಾಡಿಕೊಳ್ಳುತ್ತಾರೆ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಇವತ್ತು ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವುದರಿಂದ ನಾಳೆ ವಾಪಸ್ಸು ಹೋದ ಬಳಿಕ ಪರಿಹಾರ ಘೋಷಣೆ ಮಾಡಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಮಹಾಕುಂಭ ಕಾಲ್ತುಳಿತ: ಪ್ರಯಾಗ್​ರಾಜ್​ಗೆ ಬರುತ್ತಿದ್ದ ರೈಲುಗಳ ಮಾರ್ಗ ಬದಲಾವಣೆ, ವಿಶೇಷ ರೈಲುಗಳು ರದ್ದು