ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್ಎಲ್ಎಸ್ಐಯು) ಕರ್ನಾಟಕದವರಿಗೆ ಶೇಕಡಾ 25ರಷ್ಟು ಮೀಸಲಾತಿ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಶೇಕಡಾ 5ರಷ್ಟು ಅಂಕ ವಿನಾಯಿತಿ ಸಿಗುವಂತೆ ಕಳೆದ ಸಾಲಿನ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮಾಡಿದ ತಿದ್ದುಪಡಿಯನ್ನು ಕರ್ನಾಟಕ ಉಚ್ಛ ನ್ಯಾಯಾಲಯ ರದ್ದುಪಡಿಸಿ ಆದೇಶ ಹೊರಡಿಸಿದೆ.
ಸದರಿ ತಿದ್ದುಪಡಿಯನ್ನು ಪ್ರಶ್ನಿಸಿ ಹಲವರು ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್, ಎನ್ಎಲ್ಎಸ್ಐಯು ಅನ್ನು ಒಂದು ಸ್ವಾಯತ್ತ ಸಂಸ್ಥೆಯಾಗಿ ರೂಪಿಸಲಾಗಿದೆ, ಹಾಗಾಗಿ ಸರ್ಕಾರ ಅದನ್ನು ನಿಯಂತ್ರಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.
ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯನ್ನು ಬೆಂಗಳೂರಿನ ನಾಗರಭಾವಿಯಲ್ಲಿ ಸ್ಥಾಪಿಸಲಾಗಿದೆ.