ಚೆಸ್ಕಾಂ ಎಂಡಿ ಸಿಎನ್​ ಶ್ರೀಧರ್​ ಅಮಾನತು- ರಾಜ್ಯ ಸರ್ಕಾರ ಆದೇಶ

ಮೈಸೂರು(Mysore) ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳ್ಳುಸೋಗೆ ಗ್ರಾಮದಲ್ಲಿ ಕಾವೇರಿ ನದಿಯಿಂದ 150 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮವನ್ನು ಸಿಎಂ ಹಮ್ಮಿಕೊಂಡಿದ್ದರು. ಈ ವೇಳೆ ಕರ್ತವ್ಯ ಲೋಪ ಹಿನ್ನೆಲೆ ಚೆಸ್ಕಾಂ ಎಂಡಿ(chescom md) ಸಿ.ಎನ್​.ಶ್ರೀಧರ್​ ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಚೆಸ್ಕಾಂ ಎಂಡಿ ಸಿಎನ್​ ಶ್ರೀಧರ್​ ಅಮಾನತು- ರಾಜ್ಯ ಸರ್ಕಾರ ಆದೇಶ
ಸಾಂದರ್ಭೀಕ ಚಿತ್ರ
Follow us
ಕಿರಣ್​ ಹನಿಯಡ್ಕ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 24, 2024 | 11:10 PM

ಬೆಂಗಳೂರು, ಜ.24: ಚೆಸ್ಕಾಂ ಎಂಡಿ(chescom md) ಸಿ.ಎನ್​.ಶ್ರೀಧರ್​ ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಸಿಎಂ ಕಾರ್ಯಕ್ರಮದಲ್ಲಿ ಕರ್ತವ್ಯ ಲೋಪ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಮೈಸೂರು(Mysore) ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳ್ಳುಸೋಗೆ ಗ್ರಾಮದಲ್ಲಿ ಕಾವೇರಿ ನದಿಯಿಂದ 150 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮವನ್ನು ಸಿಎಂ ಹಮ್ಮಿಕೊಂಡಿದ್ದರು. ಈ ವೇಳೆ ಬಟನ್ ಒತ್ತುವ ಮೂಲಕ ಸಿಎಂ ಯೋಜನೆಗೆ ಚಾಲನೆ ನೀಡಬೇಕಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಒತ್ತಿದ ವೇಳೆ ಬಟನ್ ಚಾಲನೆಯಾಗಿಲ್ಲವಾಗಿತ್ತು.

ಮುಜುಗರಕ್ಕೆ ಸಿಲುಕಿದ್ದ ಸಿಎಂ ಸಿದ್ದರಾಮಯ್ಯ

ಹೌದು ಸಿಎಂ ಬಟನ್​ ಒತ್ತಿದ ವೇಳೆ ಅದು ಆನ್​ ಆಗಿರಲಿಲ್ಲ. ಇದು ಸಿಎಂ ಸಿದ್ದರಾಮಯ್ಯ ಅವರನ್ನು ತೀವ್ರ ಮುಜುಗರಕ್ಕೆ ಒಳಗುಳ್ಳುವಂತೆ ಮಾಡಿತ್ತು. ಸಿಎಂ ಕಾರ್ಯಕ್ರಮವಾಗಿದ್ದರೂ ವಿದ್ಯುತ್ ಬಗ್ಗೆ ಮುನ್ನೆಚ್ಚರಿಕಾ ಕ್ರಮ ವಹಿಸದ ಚೆಸ್ಕಾಂ ಎಂಡಿ ಶ್ರೀಧರ್, ಅಂದಿನ ಕಾರ್ಯಕ್ರಮಕ್ಕೂ ಗೈರಾಗಿದ್ದರು. ಈ ಹಿನ್ನಲೆ ಕರ್ತವ್ಯಲೋಪ ಎಸಗಿದ ಹಿನ್ನಲೆ ಜೊತೆಗೆ ಸರ್ಕಾರ ಮುಜುಗರಕ್ಕೆ ಒಳಪಡುವ ಸನ್ನಿವೇಶ ಸೃಷ್ಟಿಸಿದ್ದಕ್ಕೆ ಸಸ್ಪೆಂಡ್ ಮಾಡಿ ಆದೇಶಿಸಲಾಗಿದೆ.

ಇದನ್ನೂ ಓದಿ:ರಾಮ್ ಗೋಪಾಲ್ ವರ್ಮ ನಿರ್ದೇಶನದ ‘ವ್ಯೂಹಂ’ ಸೆನ್ಸಾರ್ ಪ್ರಮಾಣಪತ್ರ ಅಮಾನತು ಆದೇಶ ಮತ್ತೆ ಮೂರು ವಾರ ವಿಸ್ತರಣೆ

ಲೋಕಾ ಬಲೆಗೆ ಬಿದ್ದ ಸರ್ವೆ ಅಧಿಕಾರಿ

ಉತ್ತರ ಕನ್ನಡ: ಜಿಲ್ಲೆಯ ಯಲ್ಲಾಪುರ ಪಟ್ಟಣದಲ್ಲಿನ ಆಡಳಿತಸೌಧದಲ್ಲಿ 2,500 ರೂ. ಲಂಚ ಸ್ವೀಕರಿಸುತ್ತಿದ್ದ ಸರ್ವೆ ಅಧಿಕಾರಿ ಲೋಕಾ ಬಲೆಗೆ ಬಿದ್ದಿದ್ದಾರೆ. ಸಾಮಾಜಿಕ ಕಾರ್ಯಕರ್ತ ಧೀರಜ್​ ತಿನೇಕರ್ ಹುಣಶೆಟ್ಟಿಕೊಪ್ಪರ ಜಮೀನು ಭಾಗ ಮಾಡುವ ವಿಚಾರಕ್ಕೆ ಸರ್ವೆ ಇಲಾಖೆ ಅಧಿಕಾರಿ ಚಂದ್ರ ಮೋಹನ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಇಂದು 2,500 ರೂ. ಲಂಚ ಸ್ವೀಕರಿಸುವಾಗ ದಿಢೀರ್​ ಲೋಕಾಯುಕ್ತ ದಾಳಿ ನಡೆಸಿದ್ದು, ಕಾರವಾರ ಲೊಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ​

Published On - 11:05 pm, Wed, 24 January 24

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?