ಬೆಂಗಳೂರು, ಜ.24: ಚೆಸ್ಕಾಂ ಎಂಡಿ(chescom md) ಸಿ.ಎನ್.ಶ್ರೀಧರ್ ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಸಿಎಂ ಕಾರ್ಯಕ್ರಮದಲ್ಲಿ ಕರ್ತವ್ಯ ಲೋಪ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಮೈಸೂರು(Mysore) ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳ್ಳುಸೋಗೆ ಗ್ರಾಮದಲ್ಲಿ ಕಾವೇರಿ ನದಿಯಿಂದ 150 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮವನ್ನು ಸಿಎಂ ಹಮ್ಮಿಕೊಂಡಿದ್ದರು. ಈ ವೇಳೆ ಬಟನ್ ಒತ್ತುವ ಮೂಲಕ ಸಿಎಂ ಯೋಜನೆಗೆ ಚಾಲನೆ ನೀಡಬೇಕಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಒತ್ತಿದ ವೇಳೆ ಬಟನ್ ಚಾಲನೆಯಾಗಿಲ್ಲವಾಗಿತ್ತು.
ಹೌದು ಸಿಎಂ ಬಟನ್ ಒತ್ತಿದ ವೇಳೆ ಅದು ಆನ್ ಆಗಿರಲಿಲ್ಲ. ಇದು ಸಿಎಂ ಸಿದ್ದರಾಮಯ್ಯ ಅವರನ್ನು ತೀವ್ರ ಮುಜುಗರಕ್ಕೆ ಒಳಗುಳ್ಳುವಂತೆ ಮಾಡಿತ್ತು. ಸಿಎಂ ಕಾರ್ಯಕ್ರಮವಾಗಿದ್ದರೂ ವಿದ್ಯುತ್ ಬಗ್ಗೆ ಮುನ್ನೆಚ್ಚರಿಕಾ ಕ್ರಮ ವಹಿಸದ ಚೆಸ್ಕಾಂ ಎಂಡಿ ಶ್ರೀಧರ್, ಅಂದಿನ ಕಾರ್ಯಕ್ರಮಕ್ಕೂ ಗೈರಾಗಿದ್ದರು. ಈ ಹಿನ್ನಲೆ ಕರ್ತವ್ಯಲೋಪ ಎಸಗಿದ ಹಿನ್ನಲೆ ಜೊತೆಗೆ ಸರ್ಕಾರ ಮುಜುಗರಕ್ಕೆ ಒಳಪಡುವ ಸನ್ನಿವೇಶ ಸೃಷ್ಟಿಸಿದ್ದಕ್ಕೆ ಸಸ್ಪೆಂಡ್ ಮಾಡಿ ಆದೇಶಿಸಲಾಗಿದೆ.
ಇದನ್ನೂ ಓದಿ:ರಾಮ್ ಗೋಪಾಲ್ ವರ್ಮ ನಿರ್ದೇಶನದ ‘ವ್ಯೂಹಂ’ ಸೆನ್ಸಾರ್ ಪ್ರಮಾಣಪತ್ರ ಅಮಾನತು ಆದೇಶ ಮತ್ತೆ ಮೂರು ವಾರ ವಿಸ್ತರಣೆ
ಲೋಕಾ ಬಲೆಗೆ ಬಿದ್ದ ಸರ್ವೆ ಅಧಿಕಾರಿ
ಉತ್ತರ ಕನ್ನಡ: ಜಿಲ್ಲೆಯ ಯಲ್ಲಾಪುರ ಪಟ್ಟಣದಲ್ಲಿನ ಆಡಳಿತಸೌಧದಲ್ಲಿ 2,500 ರೂ. ಲಂಚ ಸ್ವೀಕರಿಸುತ್ತಿದ್ದ ಸರ್ವೆ ಅಧಿಕಾರಿ ಲೋಕಾ ಬಲೆಗೆ ಬಿದ್ದಿದ್ದಾರೆ. ಸಾಮಾಜಿಕ ಕಾರ್ಯಕರ್ತ ಧೀರಜ್ ತಿನೇಕರ್ ಹುಣಶೆಟ್ಟಿಕೊಪ್ಪರ ಜಮೀನು ಭಾಗ ಮಾಡುವ ವಿಚಾರಕ್ಕೆ ಸರ್ವೆ ಇಲಾಖೆ ಅಧಿಕಾರಿ ಚಂದ್ರ ಮೋಹನ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಇಂದು 2,500 ರೂ. ಲಂಚ ಸ್ವೀಕರಿಸುವಾಗ ದಿಢೀರ್ ಲೋಕಾಯುಕ್ತ ದಾಳಿ ನಡೆಸಿದ್ದು, ಕಾರವಾರ ಲೊಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:05 pm, Wed, 24 January 24