Kannada News Karnataka State-level best teacher award for 2023-24 announced: Here's the complete list
2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ: ಸಂಪೂರ್ಣ ಪಟ್ಟಿ ಇಲ್ಲಿದೆ
ಕರ್ನಾಟಕ ಶಿಕ್ಷಣ ಇಲಾಖೆ 2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಶನಿವಾರ ಪ್ರಕಟಿಸಿದೆ. ಓರ್ವ ವಿಶೇಷ ಶಿಕ್ಷಕ ಸೇರಿ 11 ಮಂದಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಈ ಭಾರಿ ನೀಡಲಾಗುತ್ತಿದೆ. ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಇವರ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಪ್ರಾತಿನಿಧಿಕ ಚಿತ್ರ
Follow us on
ಬೆಂಗಳೂರು, ಸೆಪ್ಟೆಂಬರ್ 2: ಕರ್ನಾಟಕ ಶಿಕ್ಷಣ ಇಲಾಖೆ 2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ (teacher) ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಶನಿವಾರ ಪ್ರಕಟಿಸಿದೆ. ಓರ್ವ ವಿಶೇಷ ಶಿಕ್ಷಕ ಸೇರಿ 11 ಮಂದಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಈ ಭಾರಿ ನೀಡಲಾಗುತ್ತಿದೆ. ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಇವರ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಪ್ರಾಥಮಿಕ ಶಾಲಾ ಶಿಕ್ಷಕರ ಪಟ್ಟಿ
ಶ್ರೀಮತಿ ಫೌಜಿಯ ಸರವತ್– ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಾದಾಪುರ, ಹೊಸನಗರ ತಾಲ್ಲೂಕು, ಶಿವಮೊಗ್ಗ ಜಿಲ್ಲೆ.
ಮಂಜುನಾಥ, ಶಿಕ್ಷಕರು– ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಮಾರಪಲ್ಲಿ, ಚಿಂತಾಮಣಿ ತಾಲ್ಲೂಕು, ಚಿಕ್ಕಬಳ್ಳಾಪುರ ಜಿಲ್ಲೆ.
ಸತೀಶ್.ಬಿ.ಕೆ– ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಸವನ ಕೋಟೆ, ಜಗಳೂರು ತಾಲ್ಲೂಕು, ದಾವಣಗೆರೆ ಜಿಲ್ಲೆ.
ಶ್ರೀಮತಿ ಸುಜಾತ ಎಂ.ಜಿ– ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಶಿವಗಂಗೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ.
ಮಹಮ್ಮದ ಹಾಶೀಮಸಾಬ ಹುಸೇನಸಾಬ– ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ನಿಡಗುಂದಿ ಎಲ್.ಟಿ., ಬಸವನ ಬಾಗೇವಾಡಿ ತಾಲ್ಲೂಕು, ವಿಜಯಪುರ ಜಿಲ್ಲೆ.
ಪ್ರತಾಪ ಶಂಕರ ಜೋಡಟ್ಟಿ– ಕನ್ನಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಪ್ಪಲಗುಡ್ಡಿ ಟಿ.ಓ.ಟಿ., ರಾಯಭಾಗ ತಾಲ್ಲೂಕು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ.
ಮೊಹಮದ್ ಹುಸೇನ ಅಬ್ದುಲ್ ಖಾದರ ಸೌದಾಗರ, ಮುಖ್ಯ ಶಿಕ್ಷಕರು- ಉರ್ದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ನಂ:08, ನವನಗರ, ಬಾಗಲಕೋಟೆ, ಬಾಗಲಕೋಟೆ ಜಿಲ್ಲೆ.
ಮಾರ್ತಂಡಪ್ಪ ತೆಳಗೇರಿ-ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಪ್ಪರಗಾಂವ ಬಡಾವಣೆ, ಹುಮ್ಮಾಬಾದ್ ತಾಲ್ಲೂಕು, ಬೀದರ್ ಜಿಲ್ಲೆ.
ಅಕ್ಷತಾ ಅನಿಲ ಬಾಸಗೋಡೆ– ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಣಸಿ, ಜೋಯಿಡಾ ತಾಲ್ಲೂಕು, ಶಿರಸಿ ಶೈಕ್ಷಣಿಕ ಜಿಲ್ಲೆ.
ಭಾಸ್ಕರ್– ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಅಡಗನಹಳ್ಳಿ, ಕೃಷ್ಣರಾಜನಗರ ತಾಲ್ಲೂಕು, ಮೈಸೂರು ಜಿಲ್ಲೆ. ಶ್ರೀಮತಿ ಎ.ಬಿ ಮೂರ್ತಿ- ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರುದ್ರಪಟ್ಟಣ, ಅರಕಲಗೂಡು ತಾಲ್ಲೂಕು, ಹಾಸನ ಜಿಲ್ಲೆ.
ಎಂ.ಆರ್.ವನಜಾಕ್ಷಮ್ಮ– ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹರಗಿನಡೋಣಿ, ಬಳ್ಳಾರಿ ಪಶ್ಚಿಮ ವಲಯ, బಳ್ಳಾರಿ ಜಿಲ್ಲೆ.
ಸೈಯದಾ ಸಾಜೀದಾ ಫಾತೀಮಾ-ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಯರಮರಸ್ ಕ್ಯಾಂಪ್, ರಾಯಚೂರು ತಾಲ್ಲೂಕು & ಜಿಲ್ಲೆ.
ಪ್ರಶಾಂತ.ಜಿ– ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಎಂ ಹೊಸೂರು, ನಾಗಮಂಗಲ ತಾಲ್ಲೂಕು, ಮಂಡ್ಯ ಜಿಲ್ಲೆ.
ವಿ. ವೀರಪ್ಪ, ಮುಖ್ಯ ಶಿಕ್ಷಕರು– ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗೋಪಿನಾಥಂ, ಹನೂರು ತಾಲ್ಲೂಕು, ಚಾಮರಾಜನಗರ ಜಿಲ್ಲೆ.
ಗಂಗಾಧರ.ಎಂ.ಜಿ-ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗುಬ್ಬಿ ಹೊಸಹಳ್ಳಿ, ಗುಬ್ಬಿ ತಾಲ್ಲೂಕು, ತುಮಕೂರು ಜಿಲ್ಲೆ.
ಪೂರ್ಣೇಶ್ ಬಿ.ಐ-ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೋಯಕೇರಿ, ಮಡಿಕೇರಿ ತಾಲ್ಲೂಕು, ಕೊಡಗು ಜಿಲ್ಲೆ.
ಮಂಜುನಾಥ ಹರಿಕಂತ್ರ– ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೀರಂಕಿ, ಹೊನ್ನಾವರ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ಸೋಮಪ್ಪ ಫಕ್ಕಿರಪ್ಪ ಕಠಾರಿ– ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ದ್ಯಾಮನಕೊಪ್ಪ, ಹಾನಗಲ್ ತಾಲ್ಲೂಕು, ಹಾವೇರಿ ಜಿಲ್ಲೆ.