AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ 91 ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ, 4,404 ಜನರಿಗೆ ಉದ್ಯೋಗ ಸೃಷ್ಟಿ

ಕರ್ನಾಟಕದಲ್ಲಿ ಹೊಸ ಸರ್ಕಾರ ರಚನೆಯಾದ ನಂತರ ಮೊದಲ ಬಾರಿ ನಡೆದ 140ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಸುಮಾರು 7,659.52 ಕೋಟಿ ಮೌಲ್ಯದ ಒಟ್ಟು 91 ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಮಾನ್ಯ ಬೃಹತ್ ಮತ್ತು ಕೈಗಾರಿಕೆ, ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆ ಇದಾಗಿದೆ.

ಕರ್ನಾಟಕದಲ್ಲಿ 91 ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ, 4,404 ಜನರಿಗೆ ಉದ್ಯೋಗ ಸೃಷ್ಟಿ
ಸಚಿವ ಎಂಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಏಕಗವಾಕ್ಷಿ ಅನುಮೋದನಾ ಸಮಿತಿಯು 91 ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿತು
TV9 Web
| Updated By: Rakesh Nayak Manchi|

Updated on: Sep 16, 2023 | 12:36 PM

Share

ಬೆಂಗಳೂರು, ಸೆಪ್ಟೆಂಬರ್ 16: ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ (Investment) ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿರುವ ರಾಜ್ಯ ಸರ್ಕಾರ, 91 ಯೋಜನೆಗಳ ಒಟ್ಟು 7,659.52 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ (State Level Single Window Approval Committee) ಅನುಮೋದನೆ ನೀಡಿದೆ.

ಬೆಂಗಳೂರಿನ ಕರ್ನಾಟಕ ಉದ್ಯೋಗಮಿತ್ರ ಕಛೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿಯ 140ನೇ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಈ ಯೋಜನೆಗಳಿಂದ ಸುಮಾರು 18,146 ಜನರಿಗೆ ಉದ್ಯೋಗ ಅವಕಾಶಗಳು ಲಭಿಸಲಿವೆಯೆಂದು ಸಚಿವ ಎಂ. ಬಿ. ಪಾಟೀಲ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅನುಮೋದನೆ ನೀಡಿರುವ ಪ್ರಸ್ತಾವನೆಗಳಲ್ಲಿ 50 ಕೋಟಿ ರೂಪಾಯಿಗೂ ಅಧಿಕ ಬಂಡವಾಳ ಹೂಡಿಕೆಯ 25 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ 5,750.73 ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 13,742 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ: ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ; ರೈತರ ಆತ್ಮಹತ್ಯೆಗಳ ಬಗ್ಗೆ ಸರ್ಕಾರದ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

15 ಕೋಟಿ ರೂಪಾಯಿಯಿಂದ 50 ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ 57 ಹೊಸ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇವುಗಳಿಂದ 1,144.94 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. ಅಂದಾಜು 4,404 ಜನರಿಗೆ ಉದ್ಯೋಗ ಲಭ್ಯವಾಗಲಿದೆ. ಇದಲ್ಲದೇ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇದರಿಂದ ರೂಪಾಯಿ 763.85 ಬಂಡವಾಳ ಹೂಡಿಕೆಯಾಗಲಿದೆ ಎಂದರು.

ಸಭೆಯಲ್ಲಿ ಸರ್ಕಾರದ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತ ಶ್ರೀಮತಿ ಗುಂಜನ್ ಕೃಷ್ಣ, ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಂ.ಮಹೇಶ್, ಐಟಿಬಿಟಿ ಇಲಾಖೆಯ ನಿರ್ದೇಶಕ ಎಚ್.ವಿ.ದರ್ಶನ್ ಮತ್ತು ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಇದ್ದರು.

ಅನುಮೋದನೆ ನೀಡಿರುವ ಪ್ರಮುಖ ಪ್ರಸ್ತಾವನೆಗಳು

1. ಸಂಸ್ಥೆ: ಪ್ರತಿಭಾ ಪಾಟಿಲ್ ಶುಗರ್ ಇಂಡಸ್ಟ್ರೀಸ್ ಪೈವೇಟ್ ಲಿಮಿಟೆಡ್

ಸ್ಥಳ: ಕಣ್ಣೂರ್ ಗ್ರಾಮ, ವಿಜಯಪುರ ತಾಲೂಕು, ವಿಜಯಪುರ ಜಿಲ್ಲೆ

ಹೂಡಿಕೆ: 489.50 ಕೋಟಿ ರೂ.

ಉದ್ಯೋಗ: 275

2. ಸಂಸ್ಥೆ: ಗುರುದೇವ್ ರಿಫೈನರಿಸ್ & ಅಲೈಡ್ ಇಂಡಸ್ಟ್ರೀಸ್

ಸ್ಥಳ: ತಡವಳಗ ಪೋಸ್ಟ್, ವಿಜಯಪುರ ಜಿಲ್ಲೆ

ಹೂಡಿಕೆ: 488.49 ಕೋಟಿ ರೂ.

ಉದ್ಯೋಗ: 255

3. ಸಂಸ್ಥೆ: ದೇವಶ್ರೀ ಇಸ್ಪಾತ್ ಪೈವೇಟ್ ಲಿಮಿಟೆಡ್

ಸ್ಥಳ: ಹಳವರ್ತಿ ಗ್ರಾಮ, ಕೊಪ್ಪಳ ಜಿಲ್ಲೆ

ಹೂಡಿಕೆ: 470 ಕೋಟಿ ರೂ.

ಉದ್ಯೋಗ: 800

4. ಸಂಸ್ಥೆ: ಏಕಸ್ ಕನ್ಸೂಮರ್ ಪ್ರಾಡಕ್ಟಸ್ ಪೈವೇಟ್ ಲಿಮಿಟೆಡ್

ಸ್ಥಳ: ಇತ್ತಿಗಟ್ಟಿ ಗ್ರಾಮ, ಧಾರವಾಡ ಜಿಲ್ಲೆ

ಹೂಡಿಕೆ: 456 ಕೋಟಿ ರೂ.

ಉದ್ಯೋಗ: 1,187

5. ಸಂಸ್ಥೆ: ಇಂಟಿಗ್ರೇಟೆಡ್ ಸೋಲಾರ್ ಪವರ್ ಪೈವೇಟ್ ಲಿಮಿಟೆಡ್

ಸ್ಥಳ: ಮಿಂಡಹಳ್ಳಿ ಗ್ರಾಮ, ಕೋಲಾರ ಜಿಲ್ಲೆ

ಹೂಡಿಕೆ: 441.08 ಕೋಟಿ ರೂ.

ಉದ್ಯೋಗ: 720

6. ಸಂಸ್ಥೆ: ಸೌತ್ ವೆಸ್ಟ್ ಮೈನಿಂಗ್ ಲಿಮಿಟೆಡ್

ಸ್ಥಳ: ಮೂಸಿನಾಯಕನ ಹಳ್ಳಿ ಗ್ರಾಮ, ಬಳ್ಳಾರಿ ಜಿಲ್ಲೆ

ಹೂಡಿಕೆ: 411 ಕೋಟಿ ರೂ.

ಉದ್ಯೋಗ: 65

7. ಸಂಸ್ಥೆ: ಶಶಿ ಅಲೊಯ್ಸ್ ಪೈವೇಟ್ ಲಿಮಿಟೆಡ್

ಸ್ಥಳ: ಭೈರನಾಯಕನಹಳ್ಳಿ ಗ್ರಾಮ, ಚಲ್ಲಕೆರೆ ತಾಲೂಕು, ಚಿತ್ರದುರ್ಗ

ಹೂಡಿಕೆ: 380 ಕೋಟಿ ರೂ.

ಉದ್ಯೋಗ: 400

8. ಸಂಸ್ಥೆ: ಎಸ್​​ಎಫ್ಎಸ್ ಗ್ರೂಪ್ ಇಂಡಿಯಾ ಪೈವೇಟ್ ಲಿಮಿಟೆಡ್

ಸ್ಥಳ: ಬೆಳಗಾವಿ ಜಿಲ್ಲೆ

ಹೂಡಿಕೆ: 250 ಕೋಟಿ ರೂ.

ಉದ್ಯೋಗ: 844

9. ಸಂಸ್ಥೆ: ಮೈಸೂರ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್

ಸ್ಥಳ: ರಾಯಚೂರು ಜಿಲ್ಲೆ

ಹೂಡಿಕೆ: 240 ಕೋಟಿ ರೂ.

ಉದ್ಯೋಗ: 157

10. ಸಂಸ್ಥೆ: ಲಾಮ್ ರಿಸರ್ಚ್ ಇಂಡಿಯಾ ಪೈವೇಟ್ ಲಿಮಿಟೆಡ್

ಸ್ಥಳ: ಬೆಂಗಳೂರು

ಹೂಡಿಕೆ: 235.91 ಕೋಟಿ ರೂ.

ಉದ್ಯೋಗ: 1,724

11. ಸಂಸ್ಥೆ: ಟಾಟ ಸೆಮಿಕಂಡೆಕ್ಟರ್ ಅಸೆಂಬ್ಲಿ ಅಂಡ್ ಟೆಸ್ಟ್ ಪೈವೇಟ್ ಲಿಮಿಟೆಡ್

ಸ್ಥಳ: ಕೊಲಾರ ಜಿಲ್ಲೆ

ಹೂಡಿಕೆ: 200 ಕೋಟಿ ರೂ.

ಉದ್ಯೋಗ: 155

12. ಸಂಸ್ಥೆ: ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್

ಸ್ಥಳ: ಬೆಂಗಳೂರು ಗ್ರಾಮಾಂತರ ಜಿಲ್ಲೆ

ಹೂಡಿಕೆ: 137 ಕೋಟಿ ರೂ.

ಉದ್ಯೋಗ: 1908

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?