ಇಂದೂ ಸೇರಿ ಮೂರು ದಿನಗಳ ಕಾಲ ತೌಕ್ತೆ ಎಫೆಕ್ಟ್ ಇರಲಿದೆ; ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಮಾಹಿತಿ

|

Updated on: May 16, 2021 | 8:45 AM

ಸದ್ಯ ಅರಬ್ಬೀ ಸಮುದ್ರದ ಮಧ್ಯ ಭಾಗದಲ್ಲಿರುವ ಚಂಡಮಾರುತ ತೀವ್ರಗೊಳ್ಳುತ್ತಾ ಗುಜರಾತ್ ಕಡೆಗೆ ಚಲಿಸುವ ಮುನ್ಸೂಚನೆ ಇದೆ. ಈ ಹಿನ್ನಲೆ ಮುಂದಿನ ಮೂರುದಿನಗಳ ಕಾಲ ಈ ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೆ ತೀವ್ರವಾಗಿರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಇಂದೂ ಸೇರಿ ಮೂರು ದಿನಗಳ ಕಾಲ ತೌಕ್ತೆ ಎಫೆಕ್ಟ್ ಇರಲಿದೆ; ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಮಾಹಿತಿ
ಸಮುದ್ರದ ಅಲೆ
Follow us on

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ತೌಕ್ತೆ ಚಂಡಮಾರುತದ ಎಫೆಕ್ಟ್ ಇರಲಿದೆ ಎಂದು ಟಿವಿ9 ಗೆ ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು (ಮೇ 16) ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿಯಲ್ಲೂ ಬಿರುಸಿನ ಮಳೆ ಬೀಳುವ ಸಾಧ್ಯತೆಯಿದೆ. ಈ ಹಿನ್ನಲೆ ಇಂದು ಕರಾವಳಿ ಜಿಲ್ಲೆಗಳಿಗೆ ರಾಜ್ಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಸದ್ಯ ಅರಬ್ಬೀ ಸಮುದ್ರದ ಮಧ್ಯ ಭಾಗದಲ್ಲಿರುವ ಚಂಡಮಾರುತ ತೀವ್ರಗೊಳ್ಳುತ್ತಾ ಗುಜರಾತ್ ಕಡೆಗೆ ಚಲಿಸುವ ಮುನ್ಸೂಚನೆ ಇದೆ. ಈ ಹಿನ್ನಲೆ ಮುಂದಿನ ಮೂರುದಿನಗಳ ಕಾಲ ಈ ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೆ ತೀವ್ರವಾಗಿರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣ ಕರ್ನಾಟಕದ ಕೆಲ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ನಿನ್ನೆ ರಾಜ್ಯದ ಕೆಲವು ಕಡೆ ಮಳೆಯಾಗಿದ್ದು ಮೇ 17ರ ತನಕ ರಾಜ್ಯದ ಕರಾವಳಿ ಭಾಗ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ ಇದೆ. ಇನ್ನು ತೌಕ್ತೆ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆಯಿದೆ ಮತ್ತು ಮೇ 18 ರ ಬೆಳಿಗ್ಗೆ ಗುಜರಾತ್ ಕರಾವಳಿಯನ್ನು ದಾಟಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ತಿಳಿಸಿದೆ.

ಇದನ್ನೂ ಓದಿ

ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಸೋಂಕಿತ ವೃದ್ಧ ಸಾವು; ರಸ್ತೆಯಲ್ಲಿ ಬಿದ್ದು ಒದ್ದಾಡಿದರು ಸಹಾಯಕ್ಕೆ ಬಾರದ ಜನ

Cyclone Tauktae ಮೇ 18ರಂದು ಗುಜರಾತ್ ಕರಾವಳಿ ದಾಟಲಿದೆ ತೌಕ್ತೆ ಚಂಡಮಾರುತ

(State Meteorological Department Director CS Patil informed that there would be three days Tauktae effect)