AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ಎಡವಟ್ಟು ಬಾಣಂತಿ ಸಾವು ಆರೋಪ; ಚಿಂತಾಮಣಿ ಸರ್ಕಾರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ!

ಚಿಕ್ಕಬಳ್ಳಾಪುರದ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ನರ್ಮದಾ ಎಂಬ ಮಹಿಳೆ ಮೃತಪಟ್ಟಿದ್ದಾರೆ. ವೈದ್ಯರು ಸಣ್ಣ ಕರಳು ಕತ್ತರಿಸಿದ್ದರಿಂದ ಸೋಂಕು ತಗುಲಿ ಸಾವು ಸಂಭವಿಸಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದ್ದು, ಆಸ್ಪತ್ರೆ ಮುಂದೆ ಕುಟುಂಬಸ್ಥರಿಂದ ಧರಣಿ ನಡೆಯುತ್ತಿದೆ. ಈ ಘಟನೆ ವೈದ್ಯಕೀಯ ನಿರ್ಲಕ್ಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ವೈದ್ಯರ ಎಡವಟ್ಟು ಬಾಣಂತಿ ಸಾವು ಆರೋಪ; ಚಿಂತಾಮಣಿ ಸರ್ಕಾರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ!
ಬಾಣಂತಿ ಸಾವು ಆರೋಪ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: May 11, 2026 | 11:38 AM

Share

ಚಿಕ್ಕಬಳ್ಳಾಪುರ ಮೇ.11: ವೈದ್ಯರು ಮಾಡುವ ಎಡವಟ್ಟು ಒಂದೆರಡಲ್ಲ, ಇವರು ಮಾಡುವ ಸಮಸ್ಯೆಗಳಿಗೆ ಸಾಮಾನ್ಯ ಜನ ಬಲಿಯಾಗುತ್ತಿದ್ದಾರೆ. ಇಂತಹದೇ ಅದೆಷ್ಟೋ ಪ್ರಕರಣಗಳು ಈಗ ಬೆಳಕಿದೆ ಬಂದಿದೆ. ಇದೀಗ ಚಿಕ್ಕಬಳ್ಳಾರಪುರದಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಘಟನೆಯಿಂದ ಆಕ್ರೋಶಗೊಂಡ ಸಂಬಂಧಿಕರು ಆಸ್ಪತ್ರೆಯ ಮುಂದೆ ಮೃತದೇಹವನ್ನಿಟ್ಟು ಧರಣಿ ನಡೆಸುತ್ತಿದ್ದಾರೆ.

ಬಟ್ಲಹಳ್ಳಿ ಗ್ರಾಮದ ನಿವಾಸಿ ನರ್ಮದಾ ಜಿ.ಎನ್ (24) ಮೃತಪಟ್ಟ ದುರ್ದೈವಿ. ಇವರಿಗೆ ಇಬ್ಬರು ಗಂಡು ಮಕ್ಕಳಿದ್ದು, ಕುಟುಂಬ ನಿಯಂತ್ರಣಕ್ಕಾಗಿ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಸ್ತ್ರೀರೋಗ ತಜ್ಞೆ ಡಾ. ವಾಣಿ ರೆಡ್ಡಿ ಅವರು ಆಕಸ್ಮಿಕವಾಗಿ ಸಣ್ಣ ಕರಳನ್ನು ಕತ್ತರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ದೇಹದಲ್ಲಿ ಸೋಂಕು (Infection) ಹರಡಿ ಚಿಕಿತ್ಸೆ ಫಲಿಸದೆ ನರ್ಮದಾ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ವಿಜಯ್, ಯಾವಾಗ ಬೆಂಗಳೂರಿಗೆ ಬರ್ತೀರಾ?: ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!

ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ನೇರ ಕಾರಣ. ಶಸ್ತ್ರಚಿಕಿತ್ಸೆಯ ವೇಳೆ ಕರಳು ಕತ್ತರಿಸಿರುವುದನ್ನು ಮರೆಮಾಚಲಾಗಿತ್ತು. ಈಗ ನರ್ಮದಾ ಸಾವಿಗೆ ಕಾರಣರಾದ ಡಾ. ವಾಣಿ ರೆಡ್ಡಿ ಮತ್ತು ಡಾ. ನಾರಾಯಣಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ಟಿವಿ9 ಗೆ ಪ್ರತಿಕ್ರಿಯಿಸಿರುವ ಡಾ. ವಾಣಿ ರೆಡ್ಡಿ, “ನರ್ಮದಾ ಅವರ ಸಣ್ಣ ಕರಳು ಅಂಟಿಕೊಂಡಿತ್ತು, ಅದನ್ನು ಬಿಡಿಸುವಾಗ ಸ್ವಲ್ಪ ಹಾನಿಯಾಗಿತ್ತು (Damage). ಹಿರಿಯ ವೈದ್ಯ ಡಾ. ನಾರಾಯಣಸ್ವಾಮಿ ಮೂಲಕ ಕೂಡಲೇ ಚಿಕಿತ್ಸೆ ಕೊಡಿಸಲಾಗಿತ್ತು. ಮೂರು ದಿನದ ಹಿಂದೆ ಅವರು ಗುಣಮುಖರಾಗಿ ಮನೆಗೆ ಹೋಗಿದ್ದರು. ಮನೆಯಲ್ಲಿ ಏನಾಯಿತೋ ಗೊತ್ತಿಲ್ಲ, ಸಾವಿಗೆ ನಿಖರ ಕಾರಣ ತಿಳಿಯಬೇಕಿದೆ” ಎಂದು ಹೇಳಿದ್ದಾರೆ. ಸದ್ಯ ಆಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮೃತ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬ ಆಗ್ರಹ ಕೇಳಿಬಂದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us