ನೇಣುಬಿಗಿದ ಸ್ಥಿತಿಯಲ್ಲಿ ಐಎಎಸ್ ಅಧಿಕಾರಿ ಶವಪತ್ತೆ, ಸಾವಿನ ಸುತ್ತ ಅನುಮಾನದ ಹುತ್ತ!
ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣ ಇಡೀ ದೇಶದಲ್ಲೇ ದೊಡ್ಡ ಸಂಚಲವನ್ನೇ ಸೃಷ್ಟಿಸಿತ್ತು.. ದೊಡ್ಡ ದೊಡ್ಡ ಅಧಿಕಾರಿಗಳು, ರಾಜಕಾರಣಿಗಳ ಹೆಸರು ಕೂಡ ಈ ಕೇಸ್ನಲ್ಲಿ ತಳುಕು ಹಾಕಿಕೊಂಡಿತ್ತು. ಆದ್ರೀಗ ಐಎಂಎ ಮಹಾಮೋಸ ಪ್ರಕರಣದಲ್ಲಿ ಕಿಕ್ಬ್ಯಾಕ್ ಆರೋಪ ಹೊತ್ತಿದ್ದ ಐಎಎಸ್ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಧಿಕಾರಿ ವಿಜಯ್ ಶಂಕರ್ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಸುಳಿದಾಡ್ತಿದೆ. ನೇಣುಬಿಗಿದ ಸ್ಥಿತಿಯಲ್ಲಿ ವಿಜಯ್ ಶಂಕರ್ ಶವಪತ್ತೆ: ಜಯನಗರದ ನಿವಾಸದಲ್ಲಿ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. […]
ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣ ಇಡೀ ದೇಶದಲ್ಲೇ ದೊಡ್ಡ ಸಂಚಲವನ್ನೇ ಸೃಷ್ಟಿಸಿತ್ತು.. ದೊಡ್ಡ ದೊಡ್ಡ ಅಧಿಕಾರಿಗಳು, ರಾಜಕಾರಣಿಗಳ ಹೆಸರು ಕೂಡ ಈ ಕೇಸ್ನಲ್ಲಿ ತಳುಕು ಹಾಕಿಕೊಂಡಿತ್ತು. ಆದ್ರೀಗ ಐಎಂಎ ಮಹಾಮೋಸ ಪ್ರಕರಣದಲ್ಲಿ ಕಿಕ್ಬ್ಯಾಕ್ ಆರೋಪ ಹೊತ್ತಿದ್ದ ಐಎಎಸ್ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಧಿಕಾರಿ ವಿಜಯ್ ಶಂಕರ್ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಸುಳಿದಾಡ್ತಿದೆ.
ನೇಣುಬಿಗಿದ ಸ್ಥಿತಿಯಲ್ಲಿ ವಿಜಯ್ ಶಂಕರ್ ಶವಪತ್ತೆ: ಜಯನಗರದ ನಿವಾಸದಲ್ಲಿ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ಹಿರಿಯ ಪೊಲೀಸರ ನಡೆ ಬಹಳಷ್ಟು ಗೊಂದಲಕ್ಕೆ ಎಡೆ ಮಾಡಿದೆ. ಹಿರಿಯ ಪೊಲೀಸರು ಪ್ರಕರಣ ಸಂಬಂಧ ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ.
IAS ಅಧಿಕಾರಿ ಮೃತಪಟ್ಟಿದ್ದರೂ ಈವರೆಗೂ ಹಿರಿಯ ಪೊಲೀಸ್ ಅಧಿಕಾರಿಗಳು ಯಾರೂ ಸ್ಥಳಕ್ಕೆ ಬಂದಿಲ್ಲ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಭೇಟಿ ನೀಡಿಲ್ಲ. ಪ್ರಕರಣ ಬೆಳಕಿಗೆ ಬಂದ ಬಳಿಕ ಡಿಸಿಪಿ ಶ್ರೀನಾಥ್ ಭೇಟಿ ನೀಡಿ 3 ಗಂಟೆಗೂ ಹೆಚ್ಚು ಕಾಲ ಸ್ಥಳದಲ್ಲಿದ್ದು ಮಾಹಿತಿ ಸಂಗ್ರಹ ಮಾಡಿದ್ದಾರೆ. ಆದರೆ ಪ್ರಕರಣ ಸಂಬಂಧ ಯಾವುದೇ ಹೇಳಿಕೆಯನ್ನು ನೀಡಿಲ್ಲ.