ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕೇಸ್: ಕೃಪಾ ಆಳ್ವಾ ಸೇರಿ ಮೂವರಿಗೆ ಬಿಗ್ ರಿಲೀಫ್

ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಈಗಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕ್ಲೀನ್ ಚಿಟ್ ನೀಡಿದೆ. ಇದರ ಬೆನ್ನಲ್ಲೇ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ಸಂಬಂಧ ಕೇಂದ್ರ ಸಚಿವ ಹೆಚ್​​​​ಡಿ ಕುಮಾರಸ್ವಾಮಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಈ ಎಲ್ಲಾ ಬೆಳವಣಿಗಳ ನಡುವೆ ಸ್ಟಿಂಗ್ ಪ್ರಕರಣದ ಆರೋಪಿಗಳಿಗೆ ಕೋರ್ಟ್​ ಬಿಗ್ ರಿಲೀಫ್ ನೀಡಿದೆ.

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕೇಸ್: ಕೃಪಾ ಆಳ್ವಾ ಸೇರಿ ಮೂವರಿಗೆ ಬಿಗ್ ರಿಲೀಫ್
Krupa Alva And Siddaramaiah
Edited By:

Updated on: Nov 02, 2026 | 4:56 PM

ಬೆಂಗಳೂರು, (ನವೆಂಬರ್ 02): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಹೆಸರು ಕೇಳಿಬಂದಿದ್ದು, ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇದರ ನಡುವೆ ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿಬಂದ ವ್ಯಕ್ತಿಗೆ ಜಾಮೀನು ಸಿಕ್ಕಿದೆ. ಹೌದು..ಕಾಂಗ್ರೆಸ್​​​ನಿಂದ ಅಮಾನತುಗೊಂಡಿರುವ ಕೃಪಾ ಆಳ್ವಾ, ವಿನೋದ್ ಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಗೂ ಬೆಂಗಳೂರಿನ 66ನೇ ಸಿಸಿಹೆಚ್ ಕೋರ್ಟ್​ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಸ್ಟಿಂಗ್ ಆಪರೇಷನ್ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯನವರು ದೂರು ನೀಡಿದ್ದು, ಈ ದೂರಿನ ಅನ್ವಯ ಸಿಸಿಬಿ ಪೊಲೀಸರು, ಕೃಪಾ ಆಳ್ವಾ, ವಿನೋದ್ ಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಸೇರಿದಂತೆ ಹಲವರನ್ನು ವಿಚಾರಣೆಗೊಳಪಡಿಸಿ ಕೆಲ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಆದ್ರೆ, ಬಂಧನದ ಭೀತಿ ಹಿನ್ನೆಲೆಯಲ್ಲಿ ಈ ಮೂವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ಸಮ್ಮತಿಸಿದ್ದು,ಪೊಲೀಸರ ತನಿಖೆಗೆ ಸಹಕರಿಸಬೇಕು ಹಾಗೇ ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.

ಇದನ್ನು ಓದಿ: ಸ್ಟಿಂಗ್ ಆಪರೇಷನ್ ಕೇಸ್ ಆರೋಪಿಗೆ ಕುಮಾರಸ್ವಾಮಿ ಲಿಂಕ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪೊಲೀಸ್ ಆಯುಕ್ತ

ಇದೇ ಪ್ರಕರಣದಲ್ಲಿ ಅಕ್ಟೋಬರ್ 23ರಂದು ಖಾಸಗಿ ಸುದ್ದಿವಾಹಿನಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ ಅವರಿಗೆ ಬೆಂಗಳೂರಿನ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತ್ತು.  ಇನ್ನು ಈ ಪ್ರಕರಣ ಸಂಬಂಧ  ಸಿಸಿಬಿ ಪೊಲೀಸರು, ಈ ಮೂವರನ್ನು ವಿಚಾರಣೆ ನಡೆಸಿದ್ದರು.  ಆದ್ರೆ, ಬಂಧನದ ಭೀತಿ ಹಿನ್ನೆಲೆಯಲ್ಲಿ ವಿಚಾರಣೆಗೊಳಲಾಗಿದ್ದ ಕೃಪಾ ಆಳ್ವಾ, ವಿನೋದ್ ಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಅವರು ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮೂವರಿಗೂ ಷರತ್ತುಬದ್ಧ ಜಾಮೀನು ನೀಡಿದೆ.

ಕೃಪಾ ಆಳ್ವಾ ವಿದೇಶಕ್ಕೆ ಪರಾರಿ, ಪಕ್ಷದಿಂದ ಉಚ್ಛಾಟನೆ

ಸ್ಟಿಂಗ್ ಆಪರೇಷನ್ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯನವರ ಬಹಿರಂಗವಾಗಿಯೇ ಕೃಪಾ ಆಳ್ವಾರ ಹೆಸರು ಹೇಳಿದ್ದರು. ಇದರ ಬೆನ್ನಲ್ಲೇ ಕೃಪಾ ಖುದ್ದಾಗಿ ಸಿಸಿಬಿ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದರು. ಬಳಿಕ ಅವರು ಏಕಾಏಕಿ ವಿದೇಶಕ್ಕೆ ಹಾರಿದ್ದಾರೆ ಎಂದು ತಿಳಿದುಬಂದಿದೆ. ಇನ್ನೊಂದೆಡೆ ಕಾಂಗ್ರೆಸ್​​​, ಕೃಪಾ ಆಳ್ವಾ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿದೆ.

ಇನ್ನು ವಿನೋದ್ ಹಾಗೂ ಪ್ರಶಾಂತ್ ಎನ್ನುವರನ್ನು ಸಹ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿ ಮಹತ್ವದ ಮಾಹಿತಿ ಕಲೆಹಾಕಿದ್ದರು. ಆದ್ರೆ, ಇವರಿಗೂ ಬಂಧನದ ಭೀತಿ ಕಾಡುತ್ತಿದ್ದರಿಂದ ಜಾಮೀನಿಗಾಗಿ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಮೂವರಿಗೂ ಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ.

ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದ ಕೇಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹಲವು ತಿರುವು ಪಡೆದುಕೊಂಡು ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಹೇಳಿಕೆ ಬೆನ್ನಲ್ಲೇ ಪ್ರಕರಣದ ತನಿಖೆಯ ಹಾದಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರತ್ತ ತಿರುಗಿದೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಈ ಸಂಬಂಧ ಕುಮಾರಸ್ವಾಮಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ಮಾತಿನ ಸಮರ ಜೋರಾಗಿದೆ.

ಪ್ರಕರಣದ ಹಿನ್ನೆಲೆ

ಸೆಪ್ಟೆಂಬರ್ 27ರಂದು ‘ಕರ್ನಾಟಕ ಹನಿಟ್ರ್ಯಾಪ್’ ಹೆಸರಿನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪ್ರಕಟವಾಗಿ, ಬಳಿಕ ಕೆಲವು ಕನ್ನಡ ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗಿದ್ದ ಆಕ್ಷೇಪಾರ್ಹ ಸ್ಟಿಂಗ್ ವಿಡಿಯೊಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಅಕ್ಟೋಬರ್ 6ರಂದು ಪೊಲೀಸರಿಗೆ ದೂರು ನೀಡಿದ್ದರು. ವಿಡಿಯೊ ಮೂಲಕ ತಮ್ಮ ವಿರುದ್ಧ ಮಾನಹಾನಿ ಮತ್ತು ಬ್ಲ್ಯಾಕ್‌ಮೇಲ್ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದರು. ಇದಕ್ಕೂ ಮುನ್ನ ಅಕ್ಟೋಬರ್ 13ರಂದು ಬೆಂಗಳೂರಿನ ನ್ಯಾಯಾಲಯವು ಸಿದ್ದರಾಮಯ್ಯ ಅವರು ಎನ್ನಲಾದ ಹನಿಟ್ರ್ಯಾಪ್‌ ಸಂಬಂಧಿತ ವಿಡಿಯೊಗಳನ್ನು ಪ್ರಕಟಿಸದಂತೆ ಅಥವಾ ಪ್ರಸಾರ ಮಾಡದಂತೆ 42 ಮಾಧ್ಯಮ ಸಂಸ್ಥೆಗಳು, ಡಿಜಿಟಲ್ ವೇದಿಕೆಗಳು ಹಾಗೂ ಇತರ ಪ್ರತಿವಾದಿಗಳಿಗೆ ಏಕಪಕ್ಷೀಯ ಮಧ್ಯಂತರ ಪ್ರತಿಬಂಧಕಾದೇಶ ನೀಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Mon, 2 November 26

ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
Loading...
Unable to load recommendations.
Follow Us