AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಿಂಗ್​​ ಆಪರೇಷನ್​​ ವಿಚಾರದಲ್ಲಿ ಮೌನ ಮುರಿಯುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ವಿಪಕ್ಷಗಳ ಆಗ್ರಹ

ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿಯಬೇಕು ಎಂದು ವಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದು, ಈ ಬೆಳವಣಿಗೆ ರಾಜ್ಯದಲ್ಲಿ ಹೊಸ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ನನ್ನ ತಂದೆ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ಮಾಡ್ತಿರುವ ಕಾರಣ ಸ್ಟೇ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಾಜಕಾರಣದ ವ್ಯವಸ್ಥೆ ಹಾಳಾಗಿದೆ, ಎಲ್ಲವನ್ನೂ ಎದುರಿಸುತ್ತೇವೆ ಎಂದು ಸಿದ್ದರಾಮಯ್ಯನವರ ಪುತ್ರ, ಸಚಿವ ಯತೀಂದ್ರ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯಿಸಿದ್ದಾರೆ.

ಸ್ಟಿಂಗ್​​ ಆಪರೇಷನ್​​ ವಿಚಾರದಲ್ಲಿ ಮೌನ ಮುರಿಯುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ವಿಪಕ್ಷಗಳ ಆಗ್ರಹ
ಮೌನ ಮುರಿಯುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ವಿಪಕ್ಷಗಳ ಆಗ್ರಹImage Credit source: Tv9 Kannada and PTI
ಪ್ರಸನ್ನ ಹೆಗಡೆ
|

Updated on:Oct 13, 2026 | 2:24 PM

Share

ಬೆಂಗಳೂರು, ಅಕ್ಟೋಬರ್​​ 13: ಸ್ಟಿಂಗ್​​ ಆಪರೇಷನ್​​ ವಿಚಾರ ಕರ್ನಾಟಕದಲ್ಲಿ ತೀವ್ರ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಸ್ಟೇ ತಂದಿರುವುದನ್ನೇ ವಿಪಕ್ಷಗಳೀಗ ಅಸ್ತ್ರ ಮಾಡಿಕೊಂಡಿವೆ. ಸಿದ್ದರಾಮಯ್ಯ ಅವರ ಅಧಿಕಾರ ಮುಗಿದರೂ ಅವರನ್ನು ಬಿಡುತ್ತಿಲ್ಲ. ಸೈಲೆಂಟ್ ಆಗಿದ್ದರೂ ಅವರನ್ನ ಬೀದಿಗೆ ತಂದು ನಿಲ್ಲಿಸ್ತಿದ್ದಾರೆ. ಕಾಂಗ್ರೆಸ್​ನ ನಿಜವಾದ ಸಂಸ್ಕೃತಿ ಏನೆಂದು ಅರ್ಥ ಆಗುತ್ತಿದೆ. ಹೀಗಾಗಿ ಈ ವಿಚಾರದಲ್ಲಿ ಸಿದ್ದರಾಮಯ್ಯ ಮೌನ ಮುರಿಯಬೇಕು ಎಂದು ಆಗ್ರಹಿಸಿವೆ.

‘ಸಿದ್ದರಾಮಯ್ಯನವರೇ ನಿಮ್ಮ ಹಳೇ ಧ್ವನಿ ಎತ್ತಿ’

ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್​ಗೆ ಫುಲ್​ ಸ್ಟಾಪ್ ಹಾಕಬೇಕು, ಅದಕ್ಕಾಗಿ ನಿಮ್ಮ ಹಳೇ ಧ್ವನಿ ಎತ್ತಿ ಎಂದು ನಾನು ಸಿದ್ದರಾಮಯ್ಯಗೆ ಒತ್ತಾಯ ಮಾಡುತ್ತೇನೆ ಎಂದು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ನಾನು ಸಿದ್ದರಾಮಯ್ಯ ಅವರ ‌ಪರ ಅನುಕಂಪ ತೋರಿಸುತ್ತಿದ್ದೇನೆ ಎನ್ನುತ್ತಿದ್ದಾರೆ. ನಮ್ಮ ಕುಟುಂಬ ನೋವು ಅನುಭವಿಸಿದೆ, ಅದಕ್ಕೆ ಅವರ ಪರ ನಿಂತೆ. ಅನುಕಂಪಕ್ಕಾಗಿ ನಾನು ಹೇಳುತ್ತಿಲ್ಲ, ನಿಮಗೆ ಅಹಿಂದ ಧ್ವನಿ ಇದೆ. 8 ವರ್ಷ ಆಳಿದ್ದೀರಿ, ಹೋರಾಟ ಮಾಡುವ ಶಕ್ತಿ ಇಲ್ವಾ? ಹೆದರಬೇಕಿಲ್ಲ, ಯಾಕೆ ಸ್ಟೇ ತೆಗೆದುಕೊಳ್ಳಬೇಕು? ಎಂದವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಪ್ರಜ್ವಲ್​​ ಪ್ರಕರಣದ ಹಿಂದಿದ್ದವರಿಂದಲೇ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್​​’: ಹೆಚ್​​ಡಿಕೆ ಸ್ಫೋಟಕ ಆರೋಪ

‘ಸಿದ್ದರಾಮಯ್ಯ ಕಾಂಗ್ರೆಸ್ ತೊರೆದರೆ ಒಳ್ಳೆಯದು’

ಸ್ಟಿಂಗ್ ಆಪರೇಷನ್ ವಿಚಾರವಾಗಿ ನನಗೂ ನೋವಾಗಿದೆ. ಅತೀ ಹೆಚ್ಚು ದಿನಗಳ ಕಾಲ ಸಿಎಂ ಆಗಿದ್ದ ಸಿದ್ದರಾಮಯ್ಯ ಅಧಿಕಾರವನ್ನು ತ್ಯಾಗ ಮಾಡಿದವರು. ಅಂತಹ ನಾಯಕನಿಗೆ ಕೋರ್ಟ್ ಮೆಟ್ಟಿಲು ಹತ್ತುವ ಸ್ಥಿತಿ ಬಂದಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್​​.ಅಶೋಕ್​​ ಹೇಳಿದ್ದಾರೆ. ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಸಿದ್ದರಾಮಯ್ಯರೇ ಹೇಳಿದ್ದು, ಅವರು ಈ ದಯನೀಯ ಸ್ಥಿತಿಗೆ ಬಂದಿರುವುದು ನೋವು ತಂದಿದೆ. ಹೀಗಾಗಿ ಸ್ಟಿಂಗ್​​ ಆಪರೇಷನ್​​ ವಿಚಾರವಾಗಿ ಕೂಡಲೇ ಎಫ್​ಐಆರ್ ಆಗಬೇಕು ಎಂದು ಅಶೋಕ್​​ ಆಗ್ರಹಿಸಿದ್ದಾರೆ. ರಾಜಣ್ಣ ಸದನದಲ್ಲಿ ಚೀಟಿ ಕಳುಹಿಸಿದ್ದಕ್ಕೆ ನಾವು ಪ್ರಸ್ತಾಪಿಸಿದ್ದೆವು. ಆದರೆ ಆಮೇಲೆ ಯುಟರ್ನ್ ಹೊಡೆದ್ರು. ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ತೊರೆದರೆ ಒಳ್ಳೆಯದು ಎಂದೂ ಅವರು ಹೇಳಿದ್ದಾರೆ.

‘ತಂದೆ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ’

ಇನ್ನು ಸ್ಟಿಂಗ್​​ ಆಪರೇಷನ್​​ ವಿಚಾರವಾಗಿ ಸಿದ್ದರಾಮಯ್ಯನವರ ಪುತ್ರ, ಸಚಿವ ಯತೀಂದ್ರ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯಿಸಿದ್ದಾರೆ. ನನ್ನ ತಂದೆ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ಮಾಡ್ತಿರುವ ಕಾರಣ ಸ್ಟೇ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಾಜಕಾರಣದ ವ್ಯವಸ್ಥೆ ಹಾಳಾಗಿದೆ, ಎಲ್ಲವನ್ನೂ ಎದುರಿಸುತ್ತೇವೆ. ನನ್ನ ತಂದೆ ತಪ್ಪು ಮಾಡಿಲ್ಲ, ಹಾಗಾಗಿ ಬೇಸರವಿಲ್ಲ. ಕಾನೂನು ಸಲಹೆ ಪಡೆದು ಮುಂದುವರಿಯಿರಿ ಎಂದು ಹೇಳಿದ್ದೇನೆ ಎಂದವರು ತಿಳಿಸಿದ್ದಾರೆ. ಮತ್ತೊಂದೆಡೆ ಯಾವುದೇ ನಿಗದಿತ ಕಾರ್ಯಕ್ರಮ ಇಲ್ಲದಿದ್ದರೂ ಮೈಸೂರಿಗೆ ಬಂದಿರುವ ಸಿದ್ದರಾಮಯ್ಯ, ತಮ್ಮ ನೂತನ ನಿವಾಸದಲ್ಲಿ ಕುಟುಂಬದ ಸದಸ್ಯರ ಜೊತೆ ವಿಶ್ರಾಂತಿಯಲ್ಲಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:24 pm, Tue, 13 October 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ