
ಮೈಸೂರು: ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಕಲ್ಲು ತೂರಾಟದಿಂದ ಹಲವರಿಗೆ ಗಾಯಗಳಾಗಿದ್ದು, ವಿಡಿಯೋ ಆಧರಿಸಿ ಆರೋಪಿಗಳ ಬಂಧನಕ್ಕೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಸಾಲಿಗ್ರಾಮದ ಒಂದು ಗುಂಪು ಮತ್ತೊಂದು ಗುಂಪಿನ ಮೇಲೆ ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ಕೆ.ಆರ್.ನಗರ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಸಹೋದರ ಸಾ.ರಾ. ರಘು ಭಾಗಿಯಾಗಿರುವ ಆರೋಪ ಕೇಳಿಬಂದಿದೆ. ಗಲಾಟೆಯಿಂದ ಸಾಲಿಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾ.ರಾ.ಮಹೇಶ್ ಸಹೋದರರ ವಿರುದ್ಧ FIR:
ಕೆ.ಆರ್.ನಗರ ಕ್ಷೇತ್ರದ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಸೋದರರು ಸೇರಿದಂತೆ ಒಟ್ಟು 17 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಾ.ರಾ.ರವೀಶ್ ಅಲಿಯಾಸ್ ರಘು A1 ಆಗಿದ್ದು, ಸಾ.ರಾ.ಸತೀಶ್ ಪ್ರಕರಣದ A2 ಆರೋಪಿಯಾಗಿ ನಮೂದಿಸಿದ್ದಾರೆ. ಜಾತಿ ನಿಂದನೆ, ಧಮ್ಕಿ, ಹಲ್ಲೆ ಆರೋಪದಡಿ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Published On - 12:08 pm, Fri, 13 December 19