Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Train: 2 ವಂದೇ ಭಾರತ್ ರೈಲುಗಳ ಮೇಲೆ 3 ಕಡೆ ಕಲ್ಲು ತೂರಾಟ​

ಬೆಂಗಳೂರು ವ್ಯಾಪ್ತಿಯಲ್ಲಿ ವಂದೇ ಭಾರತ್​ ರೈಲಿನ ಮೇಲೆ ಈ ವರ್ಷ 10 ಬಾರಿ ಕಲ್ಲು ತೂರಲಾಗಿದೆ. ರವಿವಾರದ ಎರಡು ಘಟನೆಗಳು ಸೇರಿದಂತೆ. ಇನ್ನು ಕಳೆದ ವರ್ಷ 40 ಇಂತಹ ಘಟನೆಗಳು ನಡೆದಿವೆ. ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ 59 ಮಂದಿಯನ್ನು ಬಂಧಿಸಲಾಗಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Vande Bharat Train: 2 ವಂದೇ ಭಾರತ್ ರೈಲುಗಳ ಮೇಲೆ 3 ಕಡೆ ಕಲ್ಲು ತೂರಾಟ​
ವಂದೇ ಭಾರತ್​ ರೈಲಿನ ಮೇಲೆ ಕಲ್ಲು ತೂರಾಟ
Follow us
ವಿವೇಕ ಬಿರಾದಾರ
|

Updated on: Mar 05, 2024 | 8:16 AM

ಬೆಂಗಳೂರು, ಮಾರ್ಚ 05: ನೈಋತ್ಯ ರೈಲ್ವೆ ವಲಯದ (South Western Railway Zone) ಮೂಲಕ ಹಾದು ಹೋಗುವ ಎರಡು ವಂದೇ ಭಾರತ್​ ರೈಲುಗಳ (Vande Bharat Train) ಮೇಲೆ ಕರ್ನಾಟಕ (Karnataka) ಮತ್ತು ಆಂಧ್ರಪ್ರದೇಶ (Andhra Pradesh) ರಾಜ್ಯಗಳಲ್ಲಿ ಭಾನುವಾರ (ಮಾ.03) ರಂದು ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ (Stone Throwing) . ಘಟನೆಯಲ್ಲಿ ಯಾವುದೇ ಗಾಯಗಳು ಸಂಭವಿಸದಿದ್ದರೂ, ನಾಲ್ಕು ಕಿಟಕಿಗಳಿಗೆ ಹಾನಿಯಾಗಿದೆ. ಈ ಕಿಟಕಿಗಳನ್ನು ರಿಪೇರಿ ಅಥವಾ ಬದಲಾಯಿಸಲು ಒಂದು ಕಿಟಕಿಗೆ ಸುಮಾರು 22 ಸಾವಿರ ರೂ. ವೆಚ್ಚ ತಗಲುತ್ತದೆ.

ಕೆಎಸ್​ಆರ್​ ಬೆಂಗಳೂರು-ಧಾರವಾಡ (20661/20662) ಮಧ್ಯೆ ಸಂಚರಿಸುವ ವಂದೇ ಭಾರತ್​ ರೈಲಿನ ಮೇಲೆ ಎರಡು ಬಾರಿ ಮತ್ತು ಮೈಸೂರು-ಚೆನ್ನೈ ಸೆಂಟ್ರಲ್ ​​ವಂದೇ ಭಾರತ್​ (20608) ರೈಲಿನ ಮೇಲೆ ಕಲ್ಲು ತೂರಲಾಗಿದೆ. ಭಾನುವಾರ (ಮಾ.03) ರಂದು ಬೆಂಗಳೂರಿನಿಂದ ಧಾರವಾಡದ ಕಡೆ ಹೊರಟಿದ್ದ ವಂದೇ ಭಾರತ್​ ರೈಲಿನ ಮೇಲೆ ಚಿಕ್ಕಬಾಣಾವರ ರೈಲು ನಿಲ್ದಾಣದ ಬಳಿ ಬೆಳಿಗ್ಗೆ 6:15ಕ್ಕೆ ಕಲ್ಲು ತೂರಲಾಗಿದೆ. ಇದೇ ರೈಲು ಧಾರವಾಡದಿಂದ ಬೆಂಗಳೂರಿಗೆ ಬರುವಾಗ ಮಾರ್ಗ ಮಧ್ಯೆ ಹಾವೇರಿ ಮತ್ತು ಹರಿಹರಿ ರೈಲು ನಿಲ್ದಾಣಗಳ ಮಧ್ಯೆ ಮಧ್ಯಾಹ್ನ 3:30ರ ಸುಮಾರಿಗೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ.

ಇನ್ನು ಮೈಸೂರು-ಚೆನ್ನೈ ಸೆಂಟ್ರಲ್​ ವಂದೇ ಭಾರತ್​​ ರೈಲು ಬೆಂಗಳೂರು ಮುಖಾಂತರ ಹಾದು ಚೈನ್ನೈ ತಲುಪುತ್ತದೆ. ಮಾರ್ಗ ಮಧ್ಯೆ ಆಂಧ್ರಪ್ರದೇಶದ ಕುಪ್ಪಂ ರೈಲು ನಿಲ್ದಾಣದ ಬಳಿ ಸಂಜೆ 4:30ರ ಸುಮಾರಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.

ಎರಡು ಕಲ್ಲು ತೂರಾಟಗಳು ಬೆಂಗಳೂರು ರೈಲು ನಿಲ್ದಾಣ ವ್ಯಾಪ್ತಿಯಲ್ಲಿ ಸಂಭವಿಸಿದರೇ (ಚಿಕ್ಕಬಾಣವಾರ ಮತ್ತು ಹಾವೇರಿ-ಹರಿಹರ) ಮೂರನೇ ಕಲ್ಲು ತೂರಾಟ ಮೈಸೂರು ರೈಲು ನಿಲ್ದಾಣ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು ವ್ಯಾಪ್ತಿಯಲ್ಲಿ ವಂದೇ ಭಾರತ್​ ರೈಲಿನ ಮೇಲೆ ಈ ವರ್ಷ 10 ಬಾರಿ ಕಲ್ಲು ತೂರಲಾಗಿದೆ. ರವಿವಾರದ ಎರಡು ಘಟನೆಗಳು ಸೇರಿದಂತೆ. ಇನ್ನು ಕಳೆದ ವರ್ಷ 40 ಇಂತಹ ಘಟನೆಗಳು ನಡೆದಿವೆ. ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ 59 ಮಂದಿಯನ್ನು ಬಂಧಿಸಲಾಗಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Railway Budget 2024: ವಂದೇ ಭಾರತ್​​ ಗುಣಮಟ್ಟಕ್ಕೆ 40 ಸಾವಿರ ಕೋಚ್​ಗಳ ಪರಿವರ್ತನೆ, ಬಜೆಟ್​ನಲ್ಲಿ ಘೋಷಣೆ

ಪದೆ ಪದೇ ಕಲ್ಲು ತೂರಾಟ ಸಂಭವಿಸುತ್ತಿರುವುದಕ್ಕೆ ಹಿರಿಯ ಆರ್​ಪಿಎಫ್​​ ಅಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಮತ್ತು ಆರೋಪಿಗಳನ್ನು ಬಂಧಿಸುವುದು ಪ್ರಯಾಸದ ಕೆಲಸವಾಗಿದೆ ಎಂದು ಹೇಳಿದರು.

ಕೆಲವು ಸಂದರ್ಭದಲ್ಲಿ ಇಂತಹ ಕೆಲಸವನ್ನು ಮಕ್ಕಳು, ಮದ್ಯವ್ಯಸನಿಗಳು ಮತ್ತು ಮಾದಕ ವ್ಯಸನಿಗಳು ಎಸಗಿರುತ್ತಾರೆ. ರೈಲಿನ ಒಳ ಮತ್ತು ಹೊರಗಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ರೈಲು ಗಂಟೆ 100 ಕಿಮೀ ವೇಗದಲ್ಲಿ ಚಲಿಸುವುದರಿಂದ ಸಿಸಿ ಕ್ಯಾಮೆರಾದ ದೃಶ್ಯಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಲು ಸ್ವಲ್ಪ ಕಷ್ಟವಾಗುತ್ತದೆ ಎಂದರು.

ಸೆಕ್ಷನ್ 147 (ರೈಲ್ವೆ ಹಳಿಯಲ್ಲಿ ಅತಿಕ್ರಮಣ) ಮತ್ತು ಸೆಕ್ಷನ್ 153 (ಉದ್ದೇಶಪೂರ್ವಕ ಕ್ರಿಯೆ ಅಥವಾ ಲೋಪದಿಂದ ರೈಲ್ವೆಯಲ್ಲಿ ಪ್ರಯಾಣಿಸುವ ವ್ಯಕ್ತಿಗಳ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು) ಅಡಿಯಲ್ಲಿ ಪ್ರಕರಣಗಳನ್ನು ದಾಖಲಾಗುತ್ತದೆ. ರೈಲುಗಳ ಮೇಲೆ ಕಲ್ಲು ತೂರಾಟವು ಕ್ರಿಮಿನಲ್ ಅಪರಾಧವಾಗಿದ್ದು, ರೈಲ್ವೇ ಕಾಯಿದೆಯ ಸೆಕ್ಷನ್ 153 ರ ಅಡಿಯಲ್ಲಿ ಐದು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ