AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಇಬ್ಬರ ಬಂಧನ

ಐವನ್ ಡಿಸೋಜಾ ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರೂ ಎಫ್​ಐಆರ್​ ದಾಖಲಾಗಿಲ್ಲ. ಹೀಗಾಗಿ ಸದ್ಯ ಬಿಜೆಪಿ ಜನಪ್ರತಿನಿಧಿಗಳ ಕೋರ್ಟ್​ ಮೆಟ್ಟಿಲೇರಲು ನಿರ್ಧರಿಸಿದೆ. ಈ ಮಧ್ಯೆ ಐವನ್ ಡಿಸೋಜಾ ಅವರ ಮನೆ ಮೇಲೆ ಕಲ್ಲುತೂರಾಟ ಮಾಡಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಇಬ್ಬರ ಬಂಧನ
ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಇಬ್ಬರ ಬಂಧನ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Aug 28, 2024 | 4:42 PM

Share

ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ ಮೇಲೆ ಕಲ್ಲುತೂರಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಭರತ್ ಅಲಿಯಾಸ್ ಯಕ್ಷಿತ್, ದಿನೇಶ್ ಕುರ್ತಮೊಗೆರು ಬಂಧಿತರು. ಸಿಸಿಕ್ಯಾಮರಾ ದೃಶ್ಯ ಆಧರಿಸಿ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ. ಐವನ್ ಡಿಸೋಜಾ ಹೇಳಿಕೆಯಿಂದ ಸಿಟ್ಟಾಗಿ ಕಲ್ಲೆಸೆದಿದ್ದಾಗಿ ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ.

ಆರೋಪಿ ಭರತ್, ಬಂಟ್ವಾಳ ತಾಲೂಕಿನ ಬೋಳಂತೂರಿನ ರಾಘವ ಭಂಡಾರಿ ಪುತ್ರ. ಭರತ್ ವಿರುದ್ಧ ಹಲ್ಲೆ ಆರೋಪದಡಿ ಈವರೆಗೆ 3 ಪ್ರಕರಣ ದಾಖಲಾಗಿವೆ. ಕನ್ಯಾನದಲ್ಲಿ ಫೈನಾನ್ಸ್​ ವಸೂಲಿ ವಿಭಾಗದಲ್ಲಿ ದಿನೇಶ್ ಕೆಲಸ ಮಾಡುತ್ತಿದ್ದ. ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಆನಂದ ಪೂಜಾರಿ ಪುತ್ರ.

ಇದನ್ನೂ ಓದಿ: ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಎಂಎಲ್​ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ವಿರೋಧಿಸಿ ನಡೆದಿದ್ದ ಪ್ರತಿಭಟನೆಯಲ್ಲಿ ರಾಜ್ಯಪಾಲರ ಥಾಮರ್​ ಚಂದ್​ ಗೆಹಲೋತ್​ ವಿರುದ್ಧ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೀಗಾಗಿ ಆ.22 ರಂದು ರಾತ್ರಿ ಸುಮಾರು 11 ಗಂಟೆಗೆ ಹೆಲ್ಮೆಟ್ ಹಾಕಿಕೊಂಡು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಮನೆಯ ಮೇಲೆ ರಾತ್ರಿ ಕಲ್ಲು ತೂರಾಟ ಮಾಡಿ ಪರಾರಿಯಾಗಿದ್ದರು.

ಇದನ್ನೂ ಓದಿ: ಕೈ ಎಂಎಲ್​ಸಿ ಐವನ್ ಡಿಸೋಜಾಗೆ ಸಂಕಷ್ಟ: ಜನಪ್ರತಿನಿಧಿಗಳ ಕೋರ್ಟ್​ ಮೆಟ್ಟಿಲೇರಲು ನಿರ್ಧರಿಸಿದ ಬಿಜೆಪಿ

ಇದಾದ ನಂತರ 2 ನಿಮಿಷ ಬಿಟ್ಟು ಮತ್ತೆ ಬೈಕ್​ನಲ್ಲಿ ಬಂದು ಕಲ್ಲು ತೂರಾಟ ಮಾಡಿದ್ದರು. ಇದರಿಂದ ಐವನ್ ಡಿಸೋಜಾ ಅವರ ಮನೆಯ ಕಿಟಕಿ ಗಾಜುಗಳು ಪುಡಿಯಾಗಿದ್ದವು. ಕಲ್ಲು ತೂರಾಟ ವೇಳೆ ಐವನ್ ಡಿಸೋಜಾ ಅವರ ಪತ್ನಿ ಕವಿತಾ ಡಿಸೋಜಾ ಮನೆಯಲ್ಲಿ ಇದ್ದರು. ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:27 pm, Wed, 28 August 24

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು