Vande Bharat Express: ವಂದೇ ಭಾರತ್ ಎಕ್ಸ್​ಪ್ರೆಸ್​​ಗೆ ರಾಮನಗರ ಬಳಿ ಕಲ್ಲೆಸೆತ, ಗಾಜು ಪುಡಿ

ಕಲ್ಲು ಎಸೆದಿರುವ ರಭಸಕ್ಕೆ ವಂದೆ ಭಾರತ್ ರೈಲಿನ ಗಾಜು ಪುಡಿಪುಡಿಯಾಗಿದೆ. ಸ್ಥಳಕ್ಕೆ ಮಂಡ್ಯ ರೈಲ್ವೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vande Bharat Express: ವಂದೇ ಭಾರತ್ ಎಕ್ಸ್​ಪ್ರೆಸ್​​ಗೆ ರಾಮನಗರ ಬಳಿ ಕಲ್ಲೆಸೆತ, ಗಾಜು ಪುಡಿ
ವಂದೇ ಭಾರತ್ ಎಕ್ಸ್​​ಪ್ರೆಸ್ (ಸಾಂದರ್ಭಿಕ ಚಿತ್ರ)
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ Edited By:

Updated on: Jul 07, 2023 | 10:28 PM

ರಾಮನಗರ: ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ (Vande Bharat Express) ಕಿಡಿಗೇಡಿಗಳು ಕಲ್ಲೆಸೆದ ಘಟನೆ ರಾಮನಗರ (Ramanagara) ಬಳಿ ಶುಕ್ರವಾರ ಮಧ್ಯಾಹ್ನ 2.20ರ ಸುಮಾರಿಗೆ ನಡೆದಿದೆ. ರಾಮನಗರ ತಾಲ್ಲೂಕಿನ ವಡೇರಹಳ್ಳಿ ಬಳಿ ಮೈಸೂರನಿಂದ ಬೆಂಗಳೂರು ಕಡೆ ರೈಲು ಸಂಚರಿಸುತ್ತಿದ್ದಾಗ ಕಲ್ಲೆಸೆಯಲಾಗಿದೆ.

ಕಲ್ಲು ಎಸೆದಿರುವ ರಭಸಕ್ಕೆ ವಂದೆ ಭಾರತ್ ರೈಲಿನ ಗಾಜು ಪುಡಿಪುಡಿಯಾಗಿದೆ. ಸ್ಥಳಕ್ಕೆ ಮಂಡ್ಯ ರೈಲ್ವೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಡ್ಯ ರೈಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲ್ಲು ಎಸೆದಿರುವ ಕಿಡಿಗೇಡಿಗಳ ಪತ್ತೆಗೆ ಪೋಲಿಸರು ಬಲೆ ಬೀಸಿದ್ದಾರೆ.

ಇತ್ತೀಚೆಗೆ ನೂತನವಾಗಿ ಸಂಚಾರ ಆರಂಭಿಸಿದ್ದ ಧಾರವಾಡ ಬೆಂಗಳೂರು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಎರಡು ದಿನಗಳ ಹಿಂದಷ್ಟೇ ಚಿಕ್ಕಮಗಳೂರಿನಲ್ಲಿ ಕಿಡಿಗೇಡಿಗಳು ಕಲ್ಲೆಸೆದಿದ್ದರು. ಬೀರೂರು ಪಟ್ಟಣದ ಸಮೀಪ ಕಲ್ಲು ತೂರಾಟ ನಡೆಸಲಾಗಿತ್ತು. ಜುಲೈ 1ರಂದು ಕೂಡ ಧಾರವಾಡದಿಂದ ದಾವಣಗೆರೆಗೆ ಸಂಚರಿಸುತ್ತಿದ್ದ ವೇಳೆ ವಂದೇ ಭಾರತ್ ರೈಲಿಗೆ ಕಲ್ಲು ಎಸೆಯಲಾಗಿತ್ತು. ಆರೋಪಿಗಳನ್ನು ನಂತರ ವಶಕ್ಕೆ ಪಡೆಯಲಾಗಿತ್ತು.

ರಾಜ್ಯದ ಇನ್ನಷ್ಟು 2023 ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:27 pm, Fri, 7 July 23

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Loading...
Unable to load recommendations.
Follow Us