ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜಸ್ತಂಭ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ, ಕನ್ನಡ ಧ್ವಜಸ್ತಂಭ ಅಳವಡಿಸಿದ್ದ ಹೋರಾಟಗಾರನ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಅಂಗಡಿ ಮಾಲೀಕ ಹಾಗೂ ಕನ್ನಡಪರ ಹೋರಾಟಗಾರ ಶ್ರೀನಿವಾಸ ತಾಳೂಕರ್ ಶಹಾಪುರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ಶಹಾಪುರ ಠಾಣೆ ಪೊಲೀಸರ ಭೇಟಿ ನೀಡಿ, ಸ್ಥಳದಲ್ಲಿದ್ದ ಸಿಸಿ ಕ್ಯಾಮರಾ ದೃಶ್ಯಾವಳಿಗಳ ಪರಿಶೀಲನೆ ನಡೆಸಿದರು.
ಬೆಳಗಾವಿ ಮಹಾನಗರ ಪಾಲಿಕೆ ಎದುರು ಧ್ವಜಸ್ತಂಭ ಸ್ಥಾಪಿಸುವಂತೆ ಕನ್ನಡ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ