ಕೊವಿಡ್ ಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮ: ಡಿಸಿಎಂ ಅಶ್ವಥ್ ನಾರಾಯಣ

ಕೊವಿಡ್ ಸಮಯದಲ್ಲಿ ಹೆಚ್ಚು ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ವಿಶೇಷ ಭತ್ಯೆ ನೀಡುವ ಆಲೋಚನೆ ಇದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಾಳೆಯಿಂದ 450 ಹೆಚ್ಚುವರಿ ಬೆಡ್​ಗಳ ವ್ಯವಸ್ಥೆ ಮಾಡಲಾಗುವುದು. ಪ್ರತಿ ದಿನ‌ 50 ಬೆಡ್​ಗಳನ್ನು ಸೇರ್ಪಡೆ ಮಾಡಲಾಗುವುದು: ಡಿಸಿಎಂ ಅಶ್ವಥ್ ನಾರಾಯಣ

ಕೊವಿಡ್ ಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮ: ಡಿಸಿಎಂ ಅಶ್ವಥ್ ನಾರಾಯಣ
ಮೋದಿ ಸಂಪುಟದಿಂದ ಹೊರಗಾದ ಸದಾನಂದ ಗೌಡ ರಾಜ್ಯ ರಾಜಕಾರಣಕ್ಕೆ ಬರುತ್ತಾರಾ? ಡಿಸಿಎಂ ಡಾ. ಅಶ್ವತ್ಥ್ ನಾರಾಯಣ ಏನಂತಾರೆ?
Follow us
guruganesh bhat
|

Updated on: Apr 21, 2021 | 4:17 PM

ಬೆಂಗಳೂರು: ಕೊವಿಡ್ ಸಮಯದಲ್ಲಿ ಆಂಬುಲೆನ್ಸ್​ನವರು ದುಪ್ಪಟ್ಟು ಹಣ ಪಡೆಯಬಾರದು. ಕೊವಿಡ್ ಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳುವ ಆಂಬ್ಯುಲೆನ್ಸ್​ನವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.  60 ಸಾವಿರ ಹಣಕ್ಕೆ ಬೇಡಿಕೆ ಇಟ್ಟ ಆಂಬುಲೆನ್ಸ್  ಡ್ರೈವರ್​ನ್ನು ಶೀಘ್ರವೇ‌ ಬಂಧಿಸಲಾಗುವುದು. ಸದ್ಯದಲ್ಲೇ ಸರ್ಕಾರ ಆಂಬುಲೆನ್ಸ್ ದರ ನಿಗದಿ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ತಿಳಿಸಿದರು. 

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ‌ 350 ಬೆಡ್​ಗಳಿವೆ. ಕೊವಿಡ್ ಪ್ರಕರಣಗಳ ಹೆಚ್ಚಳದ ಬೆನ್ನಲ್ಲೇ ಹೆಚ್ಚುವರಿ ಬೆಡ್​ಗಳನ್ನು ಹಾಕಲಾಗುವುದು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಾಳೆಯಿಂದ 450 ಹೆಚ್ಚುವರಿ ಬೆಡ್​ಗಳ ವ್ಯವಸ್ಥೆ ಮಾಡಲಾಗುವುದು. ಪ್ರತಿ ದಿನ‌ 50 ಬೆಡ್​ಗಳನ್ನು ಸೇರ್ಪಡೆ ಮಾಡಲಾಗುವುದು. ಸದ್ಯ 50 ವೆಂಟಿಲೇಟರ್​ಗಳಿಗೆ ಬೆಡ್​ಗಳಿವೆ. ವೆಂಟಿಲೇಟರ್​ಗಳ ಸಂಖ್ಯೆಯನ್ನು ಹೆಚ್ಚಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಕೊವಿಡ್ ಸಮಯದಲ್ಲಿ ಹೆಚ್ಚು ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ವಿಶೇಷ ಭತ್ಯೆ ನೀಡುವ ಆಲೋಚನೆ ಇದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಎಲ್ಲಾ ಬೆಡ್ ಭರ್ತಿಯಾಗಿದ್ದು, ಸೂಕ್ತ ಕಾಲದಲ್ಲಿ ಬೆಡ್ ವ್ಯವಸ್ಥೆ ಮಾಡಲು ಕಷ್ಟಕರವಾಗಿದೆ. ಎರಡನೇ ಅಲೆಯಲ್ಲಿ ಇಷ್ಟು ವೇಗವಾಗಿ ವೈರಸ್ ಹರಡುತ್ತೆ ಅಂತ ಯಾರೂ ಸಹ ಊಹಿಸಿರಲಿಲ್ಲ. ಆದರೆ, ಸರ್ಕಾರ ಎಲ್ಲಾ ವ್ಯವಸ್ಥೆ ಮಾಡಲು ಸಿದ್ಧವಿದೆ. ಈಗ ಉಂಟಾದ ಸಮಸ್ಯೆಯನ್ನು ಸರಿಪಡಿಸುತ್ತೇವೆ ಎಂದು ಡಿಸಿಎಂ ಅಶ್ವಥ್ ನಾರಾಯಣ ಭರವಸೆ ನೀಡಿದರು.

14 ದಿನ ಬಿಗಿ ಕ್ರಮಕ್ಕೆ ಸರ್ಕಾರ ಒತ್ತು; ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ. ನಿನ್ನೆ ರಾತ್ರಿಯೇ ಮುಖ್ಯ ಕಾರ್ಯದರ್ಶಿ  ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಕೊರೊನಾ ಚೈನ್ ಲಿಂಕ್ ಮುರಿಯಲು 14 ದಿನ ಬೇಕಾಗಿದೆ. ಹೀಗಾಗಿ 14 ದಿನ ಬಿಗಿ ಕ್ರಮಕ್ಕೆ ಸರ್ಕಾರ ಒತ್ತು ನೀಡಿದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಮತ್ತಷ್ಟು ಕಠಿಣ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸರ್ವಪಕ್ಷಗಳ ಸಭೆಯ ಬಳಿಕ ರಾಜ್ಯದಲ್ಲಿ ರಾತ್ರಿ 9ಗಂಟೆಯಿಂದ ಬೆಳಗ್ಗೆ 6ರವರೆಗೆ ನೈಟ್ ಕರ್ಫ್ಯೂ, ಮತ್ತು ವೀಕೆಂಡ್ನಲ್ಲಿ ಕರ್ಫ್ಯೂ (ಶುಕ್ರವಾರ ಸಂಜೆ 9ಗಂಟೆಯಿಂದ ಶನಿವಾರ ಬೆಳಗ್ಗೆ 6ರವರೆಗೆ) ಜಾರಿಗೆ ತರಲಾಗಿದೆ. ಏಪ್ರಿಲ್ 21ರಿಂದ ಮೇ 14ರವರೆಗೆ ರಾಜ್ಯದಲ್ಲಿ ಈ ಹೊಸ ನಿಯಮಗಳು ಜಾರಿಯಲ್ಲಿರಲಿದೆ. ಎಂದು 14ದಿನ ರಾಜ್ಯದಲ್ಲಿ ಕಟ್ಟುನಿಟ್ಟಿನ ನಿಯಮ ತರಲಾಗಿದೆ. ಹೀಗಾಗಿ ಈ ಬಗ್ಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಕೊರೊನಾ ಚೈನ್ ಲಿಂಕ್ ಮುರಿಯಲು 14 ದಿನ ಬೇಕಾಗಿದೆ. ಹೀಗಾಗಿ 14 ದಿನ ಬಿಗಿ ಕ್ರಮಕ್ಕೆ ಸರ್ಕಾರ ಒತ್ತು ನೀಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾಸಿಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆ: 22 ಕೊವಿಡ್ ರೋಗಿಗಳ ದುರ್ಮರಣ

KPCC President DKS : ಬೆಂಗಳೂರು ಸುತ್ತ 10 ಎಕರೆ ಜಾಗ ಕೊಡ್ರಿ.. ಹೆಣ ಸುಡೋಕ್ಕೂ ಜಾಗ ಕೊಡೋಕ್ಕೆ ಆಗಲ್ವಾ

(Strict action taken against one who misuse covid 19 situation says Karnataka DCM Dr Ashwath Narayan)

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ