ತೆರಿಗೆ ವಂಚನೆ, ಸೋರಿಕೆ, ಕಳ್ಳತನದ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಸೇರಿ ಹಲವು ಇಲಾಖೆಗಳ ಜತೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದು, ತೆರಿಗೆ ವಂಚನೆ, ಸೋರಿಕೆ, ತೆರಿಗೆ ಕಳ್ಳತನದ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ.19.2ರಷ್ಟಿದೆ. ತೆರಿಗೆ ಸಂಗ್ರಹ ದರ ದೇಶದಲ್ಲೇ ಹೆಚ್ಚಾಗಿರುವುದಕ್ಕೆ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 14: ತೆರಿಗೆ ವಂಚನೆ, ಸೋರಿಕೆ, ತೆರಿಗೆ ಕಳ್ಳತನದ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೂಚಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಸೇರಿ ಹಲವು ಇಲಾಖೆಗಳ ಜತೆ ಸಭೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ.19.2ರಷ್ಟಿದೆ. ಹಾಗಾಗಿ ತೆರಿಗೆ ಸಂಗ್ರಹ ದರ ದೇಶದಲ್ಲೇ ಹೆಚ್ಚಾಗಿರುವುದಕ್ಕೆ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಾಸ್ತವಿಕ ಸಂಗತಿಗಳ ಮೇಲೆ ಗುರಿ ನಿಗದಿಯಾಗಿದೆ. ರಾಜ್ಯದಲ್ಲಿ ತೆರಿಗೆ ಸಂಗ್ರಹದ ಗುರಿ ದಾಟುವ ಪ್ರಯತ್ನಕ್ಕೆ ಸೂಚನೆ ನೀಡಿದ್ದಾರೆ.
ತೆರಿಗೆ ವಂಚನೆ ಪ್ರಕರಣ ಪತ್ತೆಗೆ ಸಿಎಂ ಸೂಚನೆ
ಮುಂದಿನ ಸಭೆ ವೇಳೆಗೆ ಪ್ರಗತಿಯ ವೇಗ ಹೆಚ್ಚಿಸಿ. ಇಷ್ಟಕ್ಕೆ ಸಮಾಧಾನಗೊಳ್ಳದೆ ತೆರಿಗೆ ವಂಚನೆ ಪ್ರಕರಣ ಪತ್ತೆ ಮಾಡುವಂತೆ ಸೂಚಿಸಿದ್ದಾರೆ. ಶೇ.24ರ ಬೆಳವಣಿಗೆಯ ಗುರಿ ಬಗ್ಗೆ ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ, ತೆರಿಗೆ ಸಂಗ್ರಹ ಗುರಿಯನ್ನು ದಾಟಿ ಸಾಧನೆ ಮಾಡುವ ಅವಕಾಶಗಳಿವೆ. ಇದನ್ನು ಸಾಧಿಸಿ ತೋರಿಸಿ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ. ಹೆಚ್ಚು ತೆರಿಗೆ ಸಂಗ್ರಹ ಮಾಡಿದರೆ ಅಭಿವೃದ್ಧಿ ಕೆಲಸ ಮಾಡಲು ಅನುಕೂಲವಾಗುತ್ತೆ. ಸಾಮೂಹಿಕ ಜವಾಬ್ದಾರಿ ಹೊತ್ತು ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.
195 ತಾಲೂಕುಗಳು ಬರಪೀಡಿತ ಘೋಷಣೆ
SDRF ಹಾಗೂ NDRF ನಿಯಮ ಪ್ರಕಾರ 195 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಿದ್ದೇವೆ. ಬರದ ಬಗ್ಗೆ ಎಲ್ಲಾ ರೀತಿಯ ಸರ್ವೆ ಮಾಡಿಸಿ ವರದಿ ಪಡೆದಿದ್ದೇವೆ. ಬರ ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಕೇಂದ್ರ ಸರ್ಕಾರಕ್ಕೆ ನಾವು ಬರೆದಿರುವ ಪತ್ರಕ್ಕೆ ಉತ್ತರ ಕೊಟ್ಟಿಲ್ಲ ಎಂದು ಹೇಳಿದರು.
ಇದನ್ನೂ ಓದಿ: ದೆಹಲಿಯಿಂದ ಬೆಂಗಳೂರಿಗೆ ಯಡಿಯೂರಪ್ಪ ವಾಪಸ್: ಜೆಡಿಎಸ್ನೊಂದಿಗೆ ಮೈತ್ರಿ ಬಗ್ಗೆ ಹೇಳಿದ್ದಿಷ್ಟು
ಕಾವೇರಿ ನೀರು ಹರಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಪ್ರತಿಭಟನೆ ಮಾಡಲಿದೆ ಎಂಬ ಬಿಎಸ್ ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಸರ್ವ ಪಕ್ಷ ಸಭೆ ಕರೆದು ಅವರಿಗೆ ವಾಸ್ತವಾಂಶ ವಿವರಿಸಿದ್ದೇವೆ. ಜಲ ಸಂಪನ್ಮೂಲ ಸಚಿವರು ದೆಹಲಿಗೆ ಹೋಗಿದ್ದಾರೆ. ಲೀಗಲ್ ಟೀಂ ಜೊತೆ ಚರ್ಚೆ ಮಾಡುತ್ತಾರೆ. ಅದರ ಮೇಲೆ ಸುಪ್ರೀಂಕೋರ್ಟ್ಗೆ ಅರ್ಜಿ ಹಾಕುತ್ತೇವೆ ಎಂದು ತಿಳಿಸಿದರು.
ಸಚಿವ ಡಿ.ಸುಧಾಕರ್ ಬಂಧನಕ್ಕೆ ಒತ್ತಾಯ ವಿಚಾರವಾಗಿ ಮಾತನಾಡಿ, ಪೊಲೀಸರು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.