ನಿಯಮ ಉಲ್ಲಂಘಿಸಿ ತರಗತಿ ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು: ಡಾ.ಕೆ.ಸುಧಾಕರ್ ಟ್ವೀಟ್

ಬೆಂಗಳೂರು: ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1 ರಿಂದ 6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ ಬಗ್ಗೆ ದೂರು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಸಚಿವ ಡಾ.ಕೆ.ಸುಧಾಕರ್, ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರಿಗೆ ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ. ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1-6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ […]

ನಿಯಮ ಉಲ್ಲಂಘಿಸಿ ತರಗತಿ ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು: ಡಾ.ಕೆ.ಸುಧಾಕರ್ ಟ್ವೀಟ್
ಡಾ.ಕೆ.ಸುಧಾಕರ್​
Follow us
shruti hegde
|

Updated on: Mar 11, 2021 | 4:35 PM

ಬೆಂಗಳೂರು: ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1 ರಿಂದ 6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ ಬಗ್ಗೆ ದೂರು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಸಚಿವ ಡಾ.ಕೆ.ಸುಧಾಕರ್, ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರಿಗೆ ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ.

60 ವರ್ಷ ಮೇಲ್ಪಟ್ಟವರು, 45 ವರ್ಷ ಮೇಲ್ಪಟ್ಟವರು, ಅಸ್ವಸ್ಥತೆ ಹೊಂದಿರುವವರು ತಪ್ಪದೇ ಆದಷ್ಟು ಬೇಗ ಕೊರೊನಾ ಲಸಿಕೆ ಪಡೆಯಿರಿ. ನಮ್ಮ ಮನೆಗಳಲ್ಲಿ, ಬಂಧು-ಬಳಗದಲ್ಲಿ, ಸ್ನೇಹಿತರಲ್ಲಿ, ನೆರೆಹೊರೆಗಳಲ್ಲಿ ಕೊರೊನಾ ಲಸಿಕೆ ಪಡೆಯಲು ಅರ್ಹ ವ್ಯಕ್ತಿಗಳಿದ್ದರೆ ಅವರಿಗೆ ಲಸಿಕೆ ಪಡೆಯುವಂತೆ ಅರಿವು ಮೂಡಿಸಿ ಎಂದು ಸಚಿವ ಡಾ.ಕೆ.ಸುಧಾಕರ್ ಟ್ವೀಟ್​ ಮಾಡಿದ್ದಾರೆ.

ನೆರೆಯ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದು ನನ್ನನ್ನು ಚಿಂತೆಗೀಡು ಮಾಡಿದೆ. ಇದನ್ನು ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿ, ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸಿವುದರ ಜೊತೆಗೆ ಸಾಮಾಜಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು ಎಂದು ಟ್ವೀಟ್​ ಮೂಲಕ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯಲ್ಲಿ ಒಂದೇ ಶಾಲೆಯ 229 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು; 8 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆ

ಇದನ್ನೂ ಓದಿ: School Reopen: ಫೆ. 22ರಿಂದ 6-8 ತರಗತಿಗಳಿಗೆ ಪೂರ್ಣ ಶಾಲೆ ಆರಂಭ -ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ