
ಬೆಂಗಳೂರು: ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1 ರಿಂದ 6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ ಬಗ್ಗೆ ದೂರು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಸಚಿವ ಡಾ.ಕೆ.ಸುಧಾಕರ್, ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
60 ವರ್ಷ ಮೇಲ್ಪಟ್ಟವರು, 45 ವರ್ಷ ಮೇಲ್ಪಟ್ಟವರು, ಅಸ್ವಸ್ಥತೆ ಹೊಂದಿರುವವರು ತಪ್ಪದೇ ಆದಷ್ಟು ಬೇಗ ಕೊರೊನಾ ಲಸಿಕೆ ಪಡೆಯಿರಿ. ನಮ್ಮ ಮನೆಗಳಲ್ಲಿ, ಬಂಧು-ಬಳಗದಲ್ಲಿ, ಸ್ನೇಹಿತರಲ್ಲಿ, ನೆರೆಹೊರೆಗಳಲ್ಲಿ ಕೊರೊನಾ ಲಸಿಕೆ ಪಡೆಯಲು ಅರ್ಹ ವ್ಯಕ್ತಿಗಳಿದ್ದರೆ ಅವರಿಗೆ ಲಸಿಕೆ ಪಡೆಯುವಂತೆ ಅರಿವು ಮೂಡಿಸಿ ಎಂದು ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
ನೆರೆಯ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದು ನನ್ನನ್ನು ಚಿಂತೆಗೀಡು ಮಾಡಿದೆ. ಇದನ್ನು ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿ, ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸಿವುದರ ಜೊತೆಗೆ ಸಾಮಾಜಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು ಎಂದು ಟ್ವೀಟ್ ಮೂಲಕ ಸಲಹೆ ನೀಡಿದ್ದಾರೆ.
ಇದನ್ನೂ ಓದಿ: School Reopen: ಫೆ. 22ರಿಂದ 6-8 ತರಗತಿಗಳಿಗೆ ಪೂರ್ಣ ಶಾಲೆ ಆರಂಭ -ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ