Sign In

By signing in or creating an account, you agree with Associated Broadcasting Company's Terms & Conditions and Privacy Policy.

Mishaps ಕರ್ನಾಟಕಕ್ಕೆ ಇಂದು ಕರಾಳ ಸೋಮವಾರ: ರಾಜ್ಯದ 4 ಜಿಲ್ಲೆಗಳಲ್ಲಿ ಅವಘಡ, ಅಪಘಾತ, ದುರಂತ..

Mishaps: ಮನೆಗೆ ಬೆಂಕಿ ಹಚ್ಚಿ ದಂಪತಿ ಕೊಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಇಂದು ಹುಬ್ಬಳ್ಳಿಯ KIMS ಆಸ್ಪತ್ರೆಯಲ್ಲಿ ಪತಿ ಸಾವನ್ನಪ್ಪಿದ್ದಾರೆ.

Mishaps ಕರ್ನಾಟಕಕ್ಕೆ ಇಂದು ಕರಾಳ ಸೋಮವಾರ: ರಾಜ್ಯದ 4 ಜಿಲ್ಲೆಗಳಲ್ಲಿ ಅವಘಡ, ಅಪಘಾತ, ದುರಂತ..
ಅಪಘಾತ
Follow us
KUSHAL V
|

Updated on: Feb 15, 2021 | 10:19 PM

ಮನೆಗೆ ಬೆಂಕಿ ಹಚ್ಚಿ ದಂಪತಿ ಕೊಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಇಂದು ಹುಬ್ಬಳ್ಳಿಯ KIMS ಆಸ್ಪತ್ರೆಯಲ್ಲಿ ಪತಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರು ಗ್ರಾಮದಲ್ಲಿ ಫೆ.10ರಂದು ನಡೆದಿದ್ದ ಘಟನೆ ಬಳಿಕ ಫೆ.12ರಂದು ಚಿಕಿತ್ಸೆ ಫಲಿಸದೆ ಪತ್ನಿ ರೇಖಾ ಮೃತಪಟ್ಟಿದ್ದರು. ಇದೀಗ, ಇಂದು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಆಕೆಯ ಪತಿಯೂ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರೆಲ್ಲರೂ ಜಾತ್ರೆಗೆ ತೆರಳಿದ್ದ ವೇಳೆ ದಂಪತಿ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಕುರಿತು, ಐಗಳಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಟಿಪ್ಪರ್​ ಲಾರಿ ಮಗುಚಿ ಕಾರ್ಮಿಕ ದುರ್ಮರಣ ಇತ್ತ, ಕ್ವಾರಿಯಲ್ಲಿ ಟಿಪ್ಪರ್​ ಲಾರಿ ಮಗುಚಿ ಕಾರ್ಮಿಕ ದುರ್ಮರಣ ಹೊಂದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿಯಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ಜಿಲ್ಲೆಯ ಜ್ಯೋತಿಗೌಡನಪುರದ ಶಿವಕುಮಾರ್(32) ಎಂದು ಗುರುತಿಸಲಾಗಿದೆ. ಕಲ್ಲು ಕ್ವಾರಿಯ ತ್ಯಾಜ್ಯ ಸಾಗಿಸುತ್ತಿದ್ದಾಗ ಟಿಪ್ಪರ್ ಮಗುಚಿ ಅಪಘಾತ ಸಂಭವಿಸಿದೆ. ಈ ನಡುವೆ, ಮೃತನ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರ ಜಿಲ್ಲಾಸ್ಪತ್ರೆ ಮುಂದೆ ಮೃತನ ಕುಟುಂಬಸ್ಥರು ಧರಣಿ ನಡೆಸಿದರು.

ಕಾರ್ಯಕ್ರಮವೊಂದಕ್ಕೆ ತೆರಳ್ತಿದ್ದ ಕುಟುಂಬಸ್ಥರು ತಲುಪಿದ್ದು ಮಾತ್ರ ಮಸಣಕ್ಕೆ ಲಾರಿ ಡಿಕ್ಕಿಯಾಗಿ ಟ್ರ್ಯಾಕ್ಟರ್​ನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಹೊರವಲಯದ ಅಡವಿಹಳ್ಳಿ ಕ್ರಾಸ್ ಸಮೀಪ ಸಂಭವಿಸಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹೊಟ್ಟಿಗೇರನಹಳ್ಳಿಯ ದೊಡ್ಡಹಾಳ್ ಹನುಮಂತಪ್ಪ(46), ಹೊಳಿಯಮ್ಮ(32), ಲಕ್ಷ್ಮವ್ವ (42) ಮೃತ ದುರ್ದೈವಿಗಳು.

ಕುಟುಂಬಸ್ಥರು ಕಾರ್ಯಕ್ರಮವೊಂದಕ್ಕೆ ಟ್ರ್ಯಾಕ್ಟರ್​ನಲ್ಲಿ ತೆರಳ್ತಿದ್ದ ವೇಳೆ ರಸ್ತೆ ಬದಿ ಟ್ರ್ಯಾಕ್ಟರ್ ನಿಲ್ಲಿಸಿದ್ದಾಗ ಲಾರಿ ಡಿಕ್ಕಿಯಾಗಿದೆ. ಇನ್ನು, ಅಪಘಾತದ ನಂತರ ಲಾರಿ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ಹರಿದು ಯುವಕ ಸಾವು ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಗೌಡೂರಲ್ಲಿ ವಿದ್ಯುತ್ ಹರಿದು ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಗುರಗುಂಟಾ ಗ್ರಾಮದ ಮಹೇಶ್‌(21) ಮೃತ ಯುವಕ. ಮಹೇಶ್​ ಮನೆಯ ಮೇಲೆ ವಿದ್ಯುತ್ ಲೈನ್‌ ದುರಸ್ತಿ ಮಾಡುತ್ತಿದ ವೇಳೆ ಅಪಘಡ ನಡೆದಿದೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ‘ಉಮೇಶ್ ಕತ್ತಿಯವ್ರೇ.. ನಿಮ್ಮದೇ ಒಂದು ರಾಜ್ಯ ಕಟ್ಟಿ; ಅಲ್ಲಿ ನೀವೇ ಸಿಎಂ ಆದಾಗ ಇಂಥ ತುಘಲಕ್​​ ದರ್ಬಾರ್​ ನಡೆಸಿ’

ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್