ಬೈಕ್ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ವೇಣಿವೀರಾಪುರದ ಬಳಿ ನಡೆದಿದೆ. ಇಮ್ರಾನ್(25) ಹಾಗೂ ಗೌಸ್(20) ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರರು.
ಇನ್ನು, ಘಟನೆಯಲ್ಲಿ ಮತ್ತೋರ್ವ ಸವಾರ ಅಬ್ದುಲ್ ಸ್ಥಿತಿ ಗಂಭೀರವಾಗಿದ್ದು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ, ಪೊಲೀಸರು ಲಾರಿಯನ್ನು ಜಪ್ತಿಮಾಡಿ ಚಾಲಕನನ್ನ ವಶಕ್ಕೆ ಪಡೆದಿದ್ದಾರೆ. ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತು, ಸರಣಿ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಜೀರಗಾಳ ಗ್ರಾಮದ ಬಳಿ ಬೆಳಗಾವಿ-ವಿಜಯಪುರ ಹೆದ್ದಾರಿಯಲ್ಲಿ ನಡೆದಿದೆ.
ರಸ್ತೆ ಬದಿ ನಿಂತಿದ್ದ ಮರಳು ಸಾಗಿಸುತ್ತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಇದನ್ನು ಕಂಡು ಹಿಂದೆಯಿಂದ ಬರುತ್ತಿದ್ದ ಟ್ಯಾಂಕರ್ನ ಚಾಲಕ ಬ್ರೇಕ್ ಹಾಕಿದ್ದಾನೆ. ಹಾಗಾಗಿ, ಟ್ಯಾಂಕರ್ಗೆ ಹಿಂದಿನಿಂದ 3 ಕಾರು ಹಾಗೂ ಸರ್ಕಾರಿ ಬಸ್ ಡಿಕ್ಕಿಹೊಡೆದಿದೆ.
ಇನ್ನು, ಗಾಯಾಳು ಬೈಕ್ ಸವಾರನನ್ನು ಮುಧೋಳ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ.