KSRTC Sudent Bus Pass: ವಿದ್ಯಾರ್ಥಿ ಬಸ್ ಪಾಸ್ ವಿತರಣೆ ಆರಂಭ; ದರ, ಅರ್ಜಿ ಸಲ್ಲಿಕೆ ವಿಧಾನ ಇಲ್ಲಿದೆ
KSRTC Student Bus Pass: 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿವೆ. ಪ್ರಸಕ್ತ ಸಾಲಿನಲ್ಲಿ ಕೆಎಸ್ಆರ್ಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಿಸಲು ನಿಗಮ ಆರಂಭಿಸಿದ್ದು, ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ, ದರ ಎಷ್ಟು? ಇಲ್ಲಿದೆ ವಿವರ..
ಬೆಂಗಳೂರು, ಜೂ.01: 2024-25ನೇ ಸಾಲಿನ ಶೈಕ್ಷಣಿಕ ವರ್ಷದ (Academic year) ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿವೆ. ವಿದ್ಯಾರ್ಥಿಗಳು ನಲಿಯುತ್ತ ಶಾಲೆ-ಕಾಲೇಜುಗಳತ್ತ ಹೆಜ್ಜೆ ಇಡುತ್ತಿದ್ದಾರೆ. ಈಗಾಗಲೆ ತರಗತಿಗಳು ಆರಂಭವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಬಸ್ ಪಾಸ್ (Student Bus Pass) ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಪ್ರಕರಟಣೆ ಹೊರಡಿಸಿದೆ. ನಿಗಮ 10 ತಿಂಗಳ ಪಾಸ್ ದರ ನಿಗದಿ ಮಾಡಿದೆ. ಹಾಗಿದ್ದರೆ ಈ ಬಾರಿಯ ಬಸ್ ಪಾಸ್ ದರ ಎಷ್ಟು? ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಓದಿ….
ಪಾಸ್ ದರ ಪಟ್ಟಿ
- ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪಾಸ್ ದರ – 150 ರೂ.
- ಪ್ರೌಢ ಶಾಲಾ ವಿದ್ಯಾರ್ಥಿಗಳ ಪಾಸ್ ದರ- 750 ರೂ.
- ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪಾಸ್ ದರ – 150 ರೂ.
- ಪ್ರೌಢ ಶಾಲಾ ವಿದ್ಯಾರ್ಥಿನಿಯರ (ಗಡಿ ಭಾಗದ ಆಚೆಗೆ) – 150 ರೂ.
- ಕಾಲೇಜು- ಡಿಪ್ಲೊಮಾ ವಿದ್ಯಾರ್ಥಿಗಳ ಪಾಸ್ ದರ- 1050 ರೂ.
- ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 150 ರೂ.
- ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳ ಪಾಸ್ ದರ (12 ತಿಂಗಳ ಅವದಿ) 1310 ರೂ.
- ಐಟಿಐ, ಡಿಪ್ಲೊಮಾ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 160 ರೂ.
- ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳ ಪಾಸ್ ದರ- 1550 ರೂ.
- ವೃತ್ತಿಪರ ಕೋರ್ಸ್ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 150 ರೂ.
- ಸಂಜೆ ಕಾಲೇಜು ವಿದ್ಯಾರ್ಥಿಗಳ ಪಾಸ್ ದರ- 1350 ರೂ.
- ಸಂಜೆ ಕಾಲೇಜು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪಾಸ್ ದರ – 150 ರೂ. ಈ ಪಾಸ್ಗಳನ್ನು ಪಡೆಯಲು ಆನ್ ಲೈನ್ನಲ್ಲೇ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಧಾನ
- ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖೇನ ಅರ್ಜಿಯನ್ನು ಸಲ್ಲಿಸಬೇಕು. ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/buspassservices
- ವಿದ್ಯಾರ್ಥಿಗಳು ಮೇ 31 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಬಸ್ ಪಾಸ್‌ಗಾಗಿ ಅರ್ಜಿಗಳನ್ನು ಸಲ್ಲಿಸಬಹು. ಆನ್ ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
- ಇದಲ್ಲದೆ, ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ 30 ರೂ. ಸೇವಾ ಶುಲ್ಕವನ್ನು ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಪಡೆಯುತ್ತಾರೆ.
- ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಲು Declaration Formeನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕರಾರಸಾ ನಿಗಮದ ವೆಬ್ಸೈಟ್ನಲ್ಲಿ (https://ksrtc.karnataka.gov.in/studentpass) ಡೌನ್ಲೋಡ್ ಮಾಡಿಕೊಳ್ಳಬೇಕು ಹಾಗೂ ಅದನ್ನು ಅರ್ಜಿ ಸಲ್ಲಿಸುವಾಗ Submitಮಾಡಬೇಕು.
- ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಕಳುಹಿಸಲಾಗುತ್ತದೆ. ವಿದ್ಯಾರ್ಥಿ ಪಾಸುಗಳನ್ನು ಜೂ. 01 ರಿಂದ ನಿಗದಿತ ಪಾಸ್ ಕೌಂಟರ್ಗಳಲ್ಲಿ ವಿತರಿಸಲಾಗುತ್ತದೆ.
- ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್ಗೆಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / UPI ಮುಖೇನ ಪಾವತಿಸಿ ಪಾಸನ್ನು ಪಡೆಯಬಹು.
- ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಅಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದೆ. ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು, ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಪಡೆಯಬಹದು. ಮೇಲ್ಕಂಡ ಕ್ರಮಗಳನ್ನು ಅನುಸರಿಸಿ ಗಡಿಭಾಗದ ವಿದ್ಯಾರ್ಥಿಗಳು ಪಾಸುಗಳನ್ನು ಪಡೆಯಬಹು.
- ಕರಾರಸಾನಿಗಮ ವ್ಯಾಪ್ತಿಯ 129 ಪಾಸ್ ವಿತರಣಾ ಕೌಂಟರ್ಗಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್ ಸೈಟ್ ನಲ್ಲಿ ಒದಗಿಸಲಾಗಿದೆ. ನಿಗಮದ ವೆಬ್ ಸೈಟ್ ವಿಳಾಸ: https://ksrtc.karnataka.gov.in
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:52 am, Sat, 1 June 24