
ಬುಧವಾರದಂದು ಪತ್ರಿಕಾ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿರುವ ಸವದಿ. ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಬಸ್ ಪಾಸ್‍ಗಳ ದರವನ್ನು ಹೆಚ್ಚಿಸುವುದಿಲ್ಲ, ಹಿಂದಿನ ಮಾನದಂಡಗಳನ್ನು ಬದಲಿಸುವ ಯಾವುದೇ ಇರಾದೆ ತಮ್ಮ ಇಲಾಖೆಗೆ ಇಲ್ಲ, ವಿದ್ಯಾರ್ಥಿಗಳು ಮತ್ತು ಪೋಷಕರು ವಿನಾಕಾರಣ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳ ಬಸ್ ಪಾಸ್‍ಗಳ ದರ ಹೆಚ್ಚಿಸಲಾಗುತ್ತದೆ ಎಂಬುದು ಕೇವಲ ವದಂತಿ ಮಾತ್ರ ಆ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಕಳೆದ ಶೈಕ್ಷಣಿಕ ವರ್ಷದಲ್ಲಿ ಬಸ್ ಪಾಸ್‍ಗಳನ್ನು ಯಾವ ಮಾನದಂಡದಲ್ಲಿ ವಿತರಿಸಲಾಗಿತ್ತೋ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೂ ಅದೇ ಮಾನದಂಡವನ್ನು ಅಳವಡಿಸಿಕೊಳ್ಳಲಾಗುವುದು ಎಂದು ಸವದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.