Student Bus Pass: ವಿದ್ಯಾರ್ಥಿಗಳೇ ಗಮನಿಸಿ, ಬಸ್ ಪಾಸ್ ಪಡೆಯಲು ಸೇವಾಸಿಂಧುನಲ್ಲಿ ಅರ್ಜಿ ಸಲ್ಲಿಸಿ
ಈಗಾಗಲೇ 2023-24ನೇ ಸಾಲನ ಶೈಕ್ಷಣಿಕ ವರ್ಷದ ಚಟುವಟಕೆಗಳು ಪ್ರಾರಂಭವಾಗಿದ್ದು, ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ಕೋರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಬೆಂಗಳೂರು: ಈಗಾಗಲೇ 2023-24ನೇ ಸಾಲನ ಶೈಕ್ಷಣಿಕ ವರ್ಷದ ಚಟುವಟಕೆಗಳು ಪ್ರಾರಂಭವಾಗಿದ್ದು, ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿ ಬಸ್ ಪಾಸ್ (student bus pass) ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ಕೋರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ವಿದ್ಯಾರ್ಥಿಗಳು ಜೂನ್ 12 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಪಾಸ್‌ಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಸಕ್ತ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲಾಗುತ್ತಿದೆ.
ಅರ್ಜಿ ಸಲ್ಲಿಕೆ ಹೇಗೆ?
ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗಾಗಿ ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಕೆಳಕಂಡ ಕ್ರಮಗಳನ್ನು ಅನುಸರಿಬೇಕಿದೆ.
- ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಐಡಿ ಮೂಲಕ ಲಾಗಿನ್ ಆಗಬಹುದು. ಅಥವಾ https://sevasindhuservices.karnataka.gov.in. ಭೇಟಿ ನೀಡಬಹುದು.
- ಇದಲ್ಲದೆ, ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ.30/- ಸೇವಾ ಶುಲ್ಕವನ್ನು ಸದರಿ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶ ವಿರುತ್ತದೆ.
- ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕ ಕಳುಹಿಸಲಾಗುತ್ತದೆ.
- ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ‘ಕೌಂಟರ್‌ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್‌ಕಾರ್ಡ್ / ಡೆಬಿಟ್‌ಕಾರ್ಡ್ / UPI ಮೂಲಕ ಪಾವತಿಸಿ ಪಾಸ್ನ್ನು ಪಡೆಯಬಹುದಾಗಿದೆ.
- ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಅಂಗತ್ವಅಲ್ಲ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದೆ. ನೆರೆ ರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ನೆರೆರಾಜ್ಯದ ಶಾಲೆ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತ್ತು ಗಡಿಭಾಗದ ಮಾರ್ಗಗಳನ ವಿದ್ಯಾರ್ಥಿನಿಯರು ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಪಡೆಯುವ ಅಗತ್ಯವಿದೆ. ಮೇಲ್ದಂಡ ವಿದ್ಯಾರ್ಥಿಗಳು ಪಾಸುಗಳನ್ನು ಕ್ರಮಗಳನ್ನು ಅನುಸರಿಸಿ ಗಡಿಭಾಗದ ಪಡೆಯಬಹುದಾಗಿರುತ್ತದೆ.
ವಿದ್ಯಾರ್ಥಿ ಪಾಸಿನ ದರ ಹೀಗಿದೆ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:21 pm, Mon, 12 June 23