ಮೊಬೈಲ್ ಬಳಸದಂತೆ ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ
ಮೊಬೈಲ್ನಲ್ಲೇ ಹೆಚ್ಚು ಸಮಯ ಕಳೆಯಬೇಡ. ಅದರ ಬದಲು ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸುವ ಎಂದು ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಗೌರಿಬಿದನೂರಿನ ಚಿತ್ತವಾಳಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗೌರಿಬಿದನೂರು, ನ.7: ಮೊಬೈಲ್ನಲ್ಲೇ ಹೆಚ್ಚು ಸಮಯ ಕಳೆಯಬೇಡ. ಅದರ ಬದಲು ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸುವ ಎಂದು ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಸಮೀಪದ ಚಿತ್ತವಾಳಹಳ್ಳಿ ಗ್ರಾಮದಲ್ಲಿ ನಡೆದಿದೆ.
ಲೋಕೇಶ್ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಭಾನುವಾರದಂದು ತನ್ನ ಪೋಷಕರೊಂದಿಗೆ ಜಗಳವಾಡಿ, ಮನೆಯಿಂದ ಹೊರಬಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈತನಾಗಿರುವ ಲೋಕೇಶ್ ತಂದೆ, ತನ್ನ ಮಗ ಮೊಬೈಲ್ನಲ್ಲಿ ಕಾಲ ಕಳೆಯುವ ಬದಲು ಶಿಕ್ಷಣದ ಮೇಲೆ ಗಮನ ಹರಿಸಬೇಕೆಂದು ಬಯಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಮಾನಸಿಕ ಖಿನ್ನತೆ: ಅಪಾರ್ಟ್ಮೆಂಟ್ನ 8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ
ಆತ್ಮಹತ್ಯೆ ಸಹಾಯವಾಣಿ
ಕಾರಣ ಯಾವುದೇ ಇರಲಿ, ಆತ್ಮಹತ್ಯೆಯ ನಿರ್ಧಾರ ಬೇಡ. ಆತ್ಮಹತ್ಯೆಯ ಭಾವನೆಗಳು ಮನಸ್ಸಿನಲ್ಲಿ ಸುಳಿಯುತ್ತಿದ್ದರೆ ನಿಮ್ಮ ಆಪ್ತರೊಂದಿಗೆ ಮಾತನಾಡಿ. ಸಾಧ್ಯವಾಗದಿದ್ದರೆ ಆತ್ಮಹತ್ಯೆ ಸಹಾಯವಾಣಿಗೆ ಕರೆ ಮಾಡಿ. ಸಹಾಯವಾಣಿ ಸಂಖ್ಯೆ – 9152987821, ಆರೋಗ್ಯ ವಾಣಿ: 104, ಸಹಾಯ್ ಸಹಾಯವಾಣಿ: 080-25497777
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ