ವಿದ್ಯಾರ್ಥಿಯ ಕಿಡ್ನ್ಯಾಪ್ ಪ್ರಕರಣದ ನಾಲ್ವರು ಆರೋಪಿಗಳು ಅರೆಸ್ಟ್; ತಾಂತ್ರಿಕ ದೋಷದಿಂದ ಹಂಪಿ ಎಕ್ಸ್‌ಪ್ರೆಸ್‌ ರೈಲಿನ ಗಾಲಿಗಳಲ್ಲಿ ಕಾಣಿಸಿಕೊಂಡ ಬೆಂಕಿ

ಹಣಕಾಸಿನ ವಿಚಾರಕ್ಕೆ ವಿದ್ಯಾರ್ಥಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಬೆಂಗಳೂರಿನ ಯಲಹಂಕ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿದ್ಯಾರ್ಥಿಯ ಕಿಡ್ನ್ಯಾಪ್ ಪ್ರಕರಣದ ನಾಲ್ವರು ಆರೋಪಿಗಳು ಅರೆಸ್ಟ್; ತಾಂತ್ರಿಕ ದೋಷದಿಂದ ಹಂಪಿ ಎಕ್ಸ್‌ಪ್ರೆಸ್‌ ರೈಲಿನ ಗಾಲಿಗಳಲ್ಲಿ ಕಾಣಿಸಿಕೊಂಡ ಬೆಂಕಿ
ಯುವಕನನ್ನು ಅಡ್ಡಗಟ್ಟಿ ದರೋಡೆ
Follow us
TV9 Web
| Updated By: Rakesh Nayak Manchi

Updated on:Jul 19, 2022 | 9:43 AM

ಬೆಂಗಳೂರು: ಹಣಕಾಸಿನ ವಿಚಾರಕ್ಕೆ ವಿದ್ಯಾರ್ಥಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಬೆಂಗಳೂರಿನ ಯಲಹಂಕ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗದೀಶ್​ ಎಂಬ ಕಾಲೇಜು ವಿದ್ಯಾರ್ಥಿಯ ತಂದೆಯ ಜೊತೆ ಹಣಕಾಸಿನ ವಿಚಾರದಲ್ಲಿ ನಡೆದ ಕಿರಿಕ್ ಸಂಬಂಧ ಆರೋಪಿಗಳು ಜಗದೀಶ್​ನನ್ನು ಕಿಡ್ನಾಪ್ ಮಾಡಿದ್ದರು. ಸದ್ಯ ಬಾಗೇಪಲ್ಲಿ ಬಳಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶ ಮೂಲದ ವ್ಯಕ್ತಿ ಹಾಗೂ ನಾಲ್ವರು ಆರೋಪಿಗಳ ನಡುವೆ ಹಣಕಾಸಿನ ವಿಚಾರದಲ್ಲಿ ಜಗಳ ನಡೆದಿತ್ತು. ಈ ಹಿನ್ನೆಲೆ ವ್ಯಕ್ತಿಗೆ ಬೆದರಿಕೆ ಹಾಕುವ ನಿರ್ಧಾರಕ್ಕೆ ಬಂದ ಆರೋಪಿಗಳು ಖಾಸಗಿ ಕಾಲೇಜಿನಲ್ಲಿ ವ್ಯಾಸಾಂಗ ನಡೆಸುತ್ತಿದ್ದ ಜಗದೀಶ್​ನನ್ನು ನಿನ್ನೆ ಮಧ್ಯಾಹ್ನ ಸಿನಿಮೀಯ ಶೈಲಿಯಲ್ಲಿ ಪರಿಚಿತರಂತೆ ಕಾರಲ್ಲಿ ಕರೆದುಕೊಂಡು ಹೋಗಿದ್ದರು.

ವಿಚಾರ ತಿಳಿಯುತ್ತಿದ್ದಂತೆ ಕಾರ್ಯಪ್ರವೃತ್ತರಾದ ಯಲಹಂಕ ಠಾಣಾ ಪೊಲೀಸರು, ಬಾಗೇಪಲ್ಲಿ ಬಳಿ ಇನ್ನೊವಾ ಕಾರನ್ನು ಅಡ್ಡಗಟ್ಟಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ಪ್ರಾರ್ಥಮಿಕ ತನಿಖೆ ನಡೆಸಿದ್ದಾರೆ. ಹಣಕಾಸಿನ ವ್ಯವಹಾರದ ಹಿನ್ನಲೆ ತಂದೆಗೆ ಬೆದರಿಕೆ ಹಾಕಲು ಕಿಡ್ನಾಪ್ ನಾಟಕ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಸದ್ಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವಿದ್ಯಾರ್ಥಿ ತಂದೆ ಸುರೇಶ್ ಅವರು ಮೆಶ್ ರಾಥೋಡ್ ಬಳಿಯಿಂದ 1 ಕೋಟಿ ಹಣ ಸಾಲ ಪಡೆದಿದ್ದರಂತೆ. ವ್ಯವಹಾರ ಉದ್ದೇಶದಿಂದ ಸಾಲ ಪಡೆದಿದ್ದ ಸುರೇಶ್ ಜೊತೆ ಸಾಕುಷ್ಟು ಬಾರಿ ಹಣ ವಾಪಸ್ ನೀಡುವಂತೆ ಕೇಳಿದರೂ ಹಿಂದಿರುಗಿಸಿರಲಿಲ್ಲ. ಇದೇ ಕಾರಣಕ್ಕೆ ಮಗನನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಡಲಾಗಿದೆ.

ಪುಂಡ ಪೋಕರಿಗಳಿಗಿಲ್ಲ ಪೊಲೀಸರ ಭಯ

ಅಪರಾಧ ಕೃತ್ಯಗಳು ನಡೆಯುತ್ತಿರುವ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ರಾಬರಿ ಪ್ರಕರಣಗಳು ಹೆಚ್ಚಾಗುತ್ತಿದೆ. ಸೋಮವಾರ ಬೆಳ್ಳಂಬೆಳಗ್ಗೆ ಲಾಂಗ್ ತೋರಿಸಿ ದರೋಡೆ ನಡೆಸಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಡಿ.ಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ನಂದಗೋಕುಲ‌ ಲೇಔಟ್​ನಲ್ಲಿ ಜುಲೈ 18 ರ ಬೆಳಗ್ಗೆ 6 ಗಂಟೆಗೆ ನಡೆದುಕೊಂಡು ಬರುತ್ತಿದ್ದ ಯುವಕನನ್ನು ಅಡ್ಡಗಟ್ಟಿದ ದರೋಡೆಕೋರರು, ಲಾಂಗ್ ತೋರಿಸಿ ಬೆದರಿಕೆ ಹಾಕಿ ಮೊಬೈಲ್ ಸಹಿತ ನಗದು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಘಟನೆ ಸಂಬಂಧ ಯುವಕ ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ತನಿಖೆ ಆರಂಭಿಸಿದ್ದಾರೆ. ನಗರದಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ಪುಂಡ ಪೋಕರಿಗಳು ಬಾಲ ಬಿಚ್ಚುತ್ತಿದ್ದಾರೆ. ಪೊಲೀಸರಿಗೂ ಕ್ಯಾರೇ ಎನ್ನದೆ ಹಾಡುಹಗಲೇ ದರೋಡೆಗಳಂತಹ ಪ್ರಕರಣಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ.

ಹಂಪಿ ಎಕ್ಸ್‌ಪ್ರೆಸ್‌ ರೈಲು ಗಾಲಿಗಳಲ್ಲಿ ಕಾಣಿಸಿಕೊಂಡ ಬೆಂಕಿ

ಬಳ್ಳಾರಿ: ತಾಂತ್ರಿಕ ದೋಷದ ಹಿನ್ನಲೆ ಹಂಪಿ ಎಕ್ಸ್‌ಪ್ರೆಸ್‌ ರೈಲಿನ ಗಾಲಿಗಳಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಜಿಲ್ಲೆಯ ತೋರಣಗಲ್ ಬಳಿ‌ ನಡೆದಿದೆ. ನಿನ್ನೆ ರಾತ್ರಿ  ರೈಲಿನ ಎಂಜಿನ್ ಸ್ಟಾರ್ಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಹಿಂದಿನ ಗಾಲಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ತಾಂತ್ರಿಕ ಸಮಸ್ಯೆಯಿಂದ ಕಂಡುಬಂದಿದ್ದು, ದೋಷವನ್ನು ಸರಿಪಡಿಸಿದ ನಂತ ರೈಲು ಸಂಚಾರ ಆರಂಭಿಸಲಾಗಿದೆ. ಪರಿಣಾಮವಾಗಿ ಹುಬ್ಬಳ್ಳಿಯಿಂದ ಮೈಸೂರಿಗೆ ತೆರಳುತ್ತಿದ್ದ ಹಂಪಿ ಎಕ್ಸಪ್ರೇಸ್ ರೈಲು‌ 2 ಗಂಟೆ ತಡವಾಗಿ ನಿರ್ಗಮಿಸಿದೆ.

Published On - 7:42 am, Tue, 19 July 22

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ