ಕೊಪ್ಪಳದಲ್ಲಿ ಬಸ್​ಗಳಿಲ್ಲದೆ ಪರದಾಟ; ಬಸ್​ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು

ಜಿಲ್ಲೆಯಲ್ಲಿ ಬಸ್​ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಸರಿಯಾಗಿ ಬಸ್​ ಇಲ್ಲ. ಈ ಕಾರಣದಿಂದ ಓಡಾಡಲು ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೊಪ್ಪಳದಲ್ಲಿ ಬಸ್​ಗಳಿಲ್ಲದೆ ಪರದಾಟ; ಬಸ್​ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು
ಬಸ್​ ವ್ಯವಸ್ಥೆಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ
Follow us
shruti hegde
| Updated By: ಸಾಧು ಶ್ರೀನಾಥ್​

Updated on: Feb 23, 2021 | 3:08 PM

ಕೊಪ್ಪಳ: ಜಿಲ್ಲೆಯಲ್ಲಿ ಬಸ್​ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಸರಿಯಾಗಿ ಬಸ್​ ಇಲ್ಲ. ಈ ಕಾರಣದಿಂದ ಓಡಾಡಲು ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬಸ್​ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಕೈಗೊಂಡಿದ್ದಾರೆ.

ಒಂದೇ ಬಸ್​ನಲ್ಲಿ ವನಬಳ್ಳಾರಿ, ಗಬ್ಬೂರು, ಕಲ್ಲತಾವರಗೇರಾ ಹಾಲಳ್ಳಿ, ಬಸಾಪೂರ, ಕಿಡದಾಳ ಗ್ರಾಮಗಳ ಜನರು ಬರುತ್ತಾರೆ. ಸುಮಾರು 200ಕ್ಕೂ ಹೆಚ್ಚು ಜನರು ಒಂದೇ ಬಸ್​ನಲ್ಲಿ ಇರುತ್ತಾರೆ. ಬಸ್​ ಒಳಗಡೆ ಜಾಗವೇ ಇರುವುದಿಲ್ಲ. ಹಾಗಾಗಿ ಬಸ್​ ಟಾಪ್​ ಮೇಲೆ ಕುಳಿತು ವಿದ್ಯಾರ್ಥಿಗಳು ಬರುವಂತಹ ಪರಿಸ್ಥಿತಿ ಎದುರಾಗಿದೆ. ಈ ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ನಮಗೆ ಬಸ್​ನಲ್ಲಿ ಬರಲು ಕಷ್ಟವಾಗುತ್ತಿದೆ ಎಂದು ಅಧಿಕಾರಿಗಳೊಂದಿಗೆ ವಿದ್ಯಾರ್ಥಿಗಳ ಮಾತಿನ ಚಕಮಕಿ ನಡೆದಿದೆ.

ವಿದ್ಯಾರ್ಥಿಗಳ ಪರದಾಟ

ಬೆಳಿಗ್ಗೆ ಬಸ್​ ಹತ್ತುವಾಗ ನೂಕುನುಗ್ಗಲು ಆಗುತ್ತಿರುತ್ತದೆ. ಇದರಿಂದ ಬಸ್​ ಹತ್ತಲು ಸಾಧ್ಯವಾಗುವುದಿಲ್ಲ. ಹೆಚ್ಚುವರಿ ಬಸ್​ಗಳನ್ನು ಬಿಟ್ಟರೆ ಅನುಕೂಲವಾಗುತ್ತದೆ ಎಂದು ವಿದ್ಯಾರ್ಥಿಗಳು ಮನವಿ ಮಾಡಿಕೊಂಡಿದ್ದಾರೆ. ಅನೇಕ ಊರುಗಳಿಂದ ಹಲವಾರು ವಿದ್ಯಾರ್ಥಿಗಳು ಕಾಲೇಜಿಗೆ, ಶಾಲೆಗೆ ತೆರಳಬೇಕು. ಒಂದೇ ಬಸ್​ ಬರುತ್ತಿರುವುದು ಕಷ್ಟವಾಗುತ್ತಿದೆ. ಅದೇ ಬಸ್ಸಿಗೆ ಒಟ್ಟು 200ಕ್ಕೂ ಹೆಚ್ಚು ಜನರು ಪ್ರಯಾಣ ನಡೆಸುತ್ತಾರೆ. ನಿಲ್ಲಲೂ ಜಾಗವಿರುವುದಿಲ್ಲ. ಕೇವಲ ವಿದ್ಯಾರ್ಥಿಗಳೊಂದೇ ಅಲ್ಲದೇ ಸಾರ್ವಜನಿಕರು ಕೂಡಾ ಪ್ರಯಾಣ ನಡೆಸುತ್ತಾರೆ. ಎಲ್ಲರಿಗಾಗಿ ಬಸ್​ ಅವಶ್ಯಕತೆ ಇದೆ ಎಂದು ಪ್ರತಿಭಟನೆ ಕೈಗೊಂಡಿದ್ದಾರೆ.

student protest in koppala

ವಿದ್ಯಾರ್ಥಿಗಳ ಪ್ರತಿಭಟನೆ

ಇದನ್ನೂ ಓದಿ: SSLC Exam 2020: ಹೊಸಕೋಟೆ, ಮಾಲೂರು ಡಿಪೋ ಬಸ್ ಇಲ್ಲದೇ ವಿದ್ಯಾರ್ಥಿಗಳ ಪರದಾಟ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್