ಬೆಂಗಳೂರು ವಿವಿಯ ಕುಲಪತಿ ಧೋರಣೆ ಖಂಡಿಸಿ ವಿದ್ಯಾರ್ಥಿಗಳಿಂದ ಧರಣಿ

2018ರಿಂದಲೂ PhD ಪ್ರವೇಶಾತಿ ಪ್ರಕ್ರಿಯೆ ನಡೆಯುತ್ತಲೇ ಇದೆ. ಆದ್ರೆ 2 ವರ್ಷವಾದರೂ ಪ್ರವೇಶಾತಿ ಪ್ರಕ್ರಿಯೆ ಮುಗಿಯದ ಹಿನ್ನೆಲೆಯಲ್ಲಿ ಪಿಹೆಚ್‌ಡಿ ಪ್ರವೇಶಾತಿ ಅಕ್ರಮ ಖಂಡಿಸಿ ಇಂದು ಪ್ರತಿಭಟನೆ ವಿದ್ಯಾರ್ಥಿಗಳು ಮುಂದಾಗಿದ್ದಾರೆ. ವಿವಿ ಕುಲಪತಿ ವೇಣುಗೋಪಾಲ್ ಧೋರಣೆ ಖಂಡಿಸಿ ಧರಣಿ ನಡೆಸಲಿದ್ದಾರೆ.

ಬೆಂಗಳೂರು ವಿವಿಯ ಕುಲಪತಿ ಧೋರಣೆ ಖಂಡಿಸಿ ವಿದ್ಯಾರ್ಥಿಗಳಿಂದ ಧರಣಿ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on: Mar 15, 2021 | 8:13 AM

ಬೆಂಗಳೂರು: ಬೆಂಗಳೂರು ವಿವಿಯ ಕುಲಪತಿ ಧೋರಣೆ ಖಂಡಿಸಿ ವಿವಿಯ ಎಲ್ಲ ವಿಭಾಗ ಬಂದ್ ಮಾಡಿ ಇಂದು ಬೆಳಿಗ್ಗೆ 11ಗಂಟೆಗೆ ಪ್ರತಿಭಟನೆ ನಡೆಸಲು ವಿದ್ಯಾರ್ಥಿಗಳ ಸಮೂಹ ಮುಂದಾಗಿದೆ. ಇಂದು ನಡೆಯುವ ಪ್ರತಿಭಟನೆಯಲ್ಲಿ ಸುಮಾರು 2 ಸಾವಿರ ವಿದ್ಯಾರ್ಥಿಗಳು ಭಾಗಿಯಾಗುವ ಸಾಧ್ಯತೆ ಇದೆ. 2018ರಿಂದಲೂ PhD ಪ್ರವೇಶಾತಿ ಪ್ರಕ್ರಿಯೆ ನಡೆಯುತ್ತಲೇ ಇದೆ. ಆದ್ರೆ 2 ವರ್ಷವಾದರೂ ಪ್ರವೇಶಾತಿ ಪ್ರಕ್ರಿಯೆ ಮುಗಿಯದ ಹಿನ್ನೆಲೆಯಲ್ಲಿ ಪಿಹೆಚ್‌ಡಿ ಪ್ರವೇಶಾತಿ ಅಕ್ರಮ ಖಂಡಿಸಿ ಇಂದು ಪ್ರತಿಭಟನೆ ವಿದ್ಯಾರ್ಥಿಗಳು ಮುಂದಾಗಿದ್ದಾರೆ. ವಿವಿ ಕುಲಪತಿ ವೇಣುಗೋಪಾಲ್ ಧೋರಣೆ ಖಂಡಿಸಿ ಧರಣಿ ನಡೆಸಲಿದ್ದಾರೆ.

ರಾಜ್ಯದ ಯಾವುದೇ ವಿವಿಗಳಲ್ಲಿ ಅನುಸರಿಸದ ಅವೈಜ್ಞಾನಿಕ ಪದ್ದತಿಯನ್ನು ಅನುಸರಿಸಿ ಕೌನ್ಸಿಲಿಂಗ್ ನಡೆಸುತ್ತಿದೆ. ಮೀಸಲಾತಿ ವಿನಾಯ್ತಿಯ ನಿಯಮಗಳನ್ನು ಉಲ್ಲಂಘಿಸಿ ಪ್ರವೇಶಾತಿ ಪ್ರಕ್ರಿಯೆ ನಡೆಸಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಸಾಮಾನ್ಯವಾಗಿ ಯುಜಿಸಿ ನಿಯಮಾವಳಿಗಳ ಪ್ರಕಾರ ಪ್ರತಿ ಪ್ರವೇಶಾತಿ ಪ್ರಕ್ರಿಯೆಯಲ್ಲಿ ಸಾಮಾನ್ಯ ವರ್ಗಕ್ಕೆ 55%, ಹಿಂದುಳಿದ ವರ್ಗಗಳಿಗೆ 50% ಮತ್ತು ಪರಿಶಿಷ್ಟ ಜಾತಿ ಹಾಗೂ ವರ್ಗಗಳಿಗೆ 45% ಅರ್ಹತಾ ಅಂಕಗಳನ್ನು ನಿಗದಿಪಡಿಸಬೇಕು. ಆದರೆ ಬೆಂಗಳೂರು ವಿವಿಯಲ್ಲಿ ಯಾವುದೇ ವಿನಾಯ್ತಿ ನೀಡದೆ ಪ್ರವೇಶಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ನಿವೃತ್ತಿಗೆ 6 ತಿಂಗಳು ಬಾಕಿ ಇರುವ ಪ್ರಾಧ್ಯಾಪಕರಿಗೆ ಪಿಹೆಚ್​ಡಿ ಮಾರ್ಗದರ್ಶನ ನೀಡಲು ಅವಕಾಶ ನಿರಾಕರಿಸಲಾಗಿದೆ. ಇದರಿಂದಾಗಿ 80ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪಿಹೆಚ್​ಡಿ ಆಸೆಗೆ ಎಳ್ಳುನೀರು ಬಿಟ್ಟಂತಾಗಿದೆ. 2016ರಿಂದ ಪಿಎಚ್ ಡಿ ಪ್ರವೇಶಾತಿ ಪ್ರಕ್ರಿಯೆ ನಡೆದಿಲ್ಲ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಶಿಫಾರಸ್ಸುಗಳಲ್ಲಿ ಅಂತರಶಿಸ್ತೀಯ ಸಂಶೋಧನಾ (ಇಂಟರ್ ಡಿಸಿಪ್ಲಿನರಿ ರಿಸರ್ಚ್) ಗಳಿಗೆ ಅವಕಾಶ ನಿರಾಕರಿಸಲಾಗಿದೆ. ಈ ಹಿಂದೆ ಬೆಂಗಳೂರು ವಿವಿಯಲ್ಲಿ ಅತೀ ಹೆಚ್ಚು ಅಂತರಶಿಸ್ತೀಯ ಸಂಶೋಧನೆಗಳನ್ನು ಮಂಡಿಸಿ ದಾಖಲೆ ಬರೆದಿತ್ತು. ಆದರೆ ಈ ಬಾರಿ ವಿವಿಯಲ್ಲಿ ಇಂಟರ್ ಡಿಸಿಪ್ಲಿನರಿ ರಿಸರ್ಚ್ ಗಳಿಗೆ ಅವಕಾಶ ನಿರಾಕರಿಸಲಾಗಿದೆ. ಕಳೆದ 5 ವರ್ಷಗಳಿಂದ ಪಿಹೆಚ್​ಡಿ ಪ್ರಕ್ರಿಯೆ ನಡೆಸದ ಹಿನ್ನೆಲೆಯಲ್ಲಿ ಸಹಾಯಕ, ಸಹ ಹಾಗೂ ಪ್ರಾಧ್ಯಾಪಕರಿಗೆ ತಲಾ ಒಂದು ಸೀಟ್ ಹೆಚ್ಚುವರಿ‌ ಮಾಡಲು ಒತ್ತಾಯಿಸಲಾಗಿದೆ. ಬೇಡಿಕೆಗಳು ಈಡೇರಿಸದಿದ್ದಲ್ಲಿ ಸಾಂಕೇತಿಕ ಪ್ರತಿಭಟನೆಯನ್ನು ಅನಿರ್ಧಿಷ್ಟಾವಧಿಗೆ ವಿಸ್ತರಿಸಲು ವಿದ್ಯಾರ್ಥಿಗಳು ತೀರ್ಮಾನಿಸಿದ್ದಾರೆ. ಈ ಎಲ್ಲಾ ಸಮಸ್ಯೆಗಳಿಂದಾಗಿ ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು IISC ಸಂಸ್ಥೆಯಲ್ಲಿ ಒಂದೇ ದಿನ ಇಬ್ಬರು ವಿದ್ಯಾರ್ಥಿಗಳ ಸಾವು

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ