AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಜಾಲತಾಣ ಬಳಕೆ ನಿಷೇಧ ಮಾಡಿದ್ದು ಸರಿನಾ ತಪ್ಪಾ? ವಿದ್ಯಾರ್ಥಿಗಳು ಏನ್ ಹೇಳ್ತಾರೆ?

ಸಾಮಾಜಿಕ ಜಾಲತಾಣ ಬಳಕೆ ನಿಷೇಧ ಮಾಡಿದ್ದು ಸರಿನಾ ತಪ್ಪಾ? ವಿದ್ಯಾರ್ಥಿಗಳು ಏನ್ ಹೇಳ್ತಾರೆ?

ಸಹದೇವ್​ ಮಾನೆ
| Edited By: |

Updated on:Mar 06, 2026 | 8:20 PM

Share

ಚಿಕ್ಕ ಮಕ್ಕಳನ್ನು ಕಾಡುತ್ತಿರುವ ಮೊಬೈಲ್ ಮತ್ತು ಸೋಶಿಯಲ್ ಮೀಡಿಯಾ ವ್ಯಸನಕ್ಕೆ ಬ್ರೇಕ್​ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ, ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಲಾಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ದಿನವಿಡೀ ಮೊಬೈಲ್​ ಬಳಕೆಯನ್ನೇ ಮಗ್ನರಾಗಿರುತ್ತಿದ್ದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸರ್ಕಾರ ಈ ಕಠಿಣ ನಿರ್ಧಾರ ಕೈಗೊಂಡಿದ್ದು, ರಾಜ್ಯ ಸರ್ಕಾರದ ಈ ನಡೆಗೆ ಮೆಚ್ಚುಗಳು ವ್ಯಕ್ತವಾಗಿವೆ. ಇನ್ನು ಈ ಬಗ್ಗೆ ಮಕ್ಕಳನ್ನು ವಿಚಾರಿಸಿದಾಗ ಸಾಮಾಜಿಕ ಜಾಲತಾಣ ಬಳಕೆ ಬ್ಯಾನ್ ಮಾಡಿರುವ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಬೆಳಗಾವಿ (ಮಾರ್ಚ್ 06): ಚಿಕ್ಕ ಮಕ್ಕಳನ್ನು (children) ಕಾಡುತ್ತಿರುವ ಮೊಬೈಲ್ ಮತ್ತು ಸೋಶಿಯಲ್ ಮೀಡಿಯಾ (social media) ವ್ಯಸನಕ್ಕೆ ಬ್ರೇಕ್​ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ, ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಲಾಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ದಿನವಿಡೀ ಮೊಬೈಲ್​ ಬಳಕೆಯನ್ನೇ ಮಗ್ನರಾಗಿರುತ್ತಿದ್ದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸರ್ಕಾರ ಈ ಕಠಿಣ ನಿರ್ಧಾರ ಕೈಗೊಂಡಿದ್ದು, ರಾಜ್ಯ ಸರ್ಕಾರದ ಈ ನಡೆಗೆ ಮೆಚ್ಚುಗಳು ವ್ಯಕ್ತವಾಗಿವೆ. ಇನ್ನು ಈ ಬಗ್ಗೆ ಮಕ್ಕಳನ್ನು ವಿಚಾರಿಸಿದಾಗ ಸಾಮಾಜಿಕ ಜಾಲತಾಣ ಬಳಕೆ ಬ್ಯಾನ್ ಮಾಡಿರುವ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Karnataka Budget 2026:16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ! ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ

Published on: Mar 06, 2026 08:12 PM

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More