ಟಿಪ್ಪು ಇತಿಹಾಸವನ್ನು ಪಠ್ಯದಿಂದ ತೆಗೆದರೆ ವಿದ್ಯಾರ್ಥಿಗಳು ವಂಚಿತರಾಗುತ್ತಾರೆ; ಯು.ಟಿ. ಖಾದರ್
ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಲಕ್ಷಾಂತರ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. ಎಲ್ಲರೂ ನೆಮ್ಮದಿಯಿಂದ, ಮಾನಸಿಕ ಒತ್ತಡ ಇಲ್ಲದೇ ಪರೀಕ್ಷೆ ಬರೆಯಿರಿ. ಸರ್ಕಾರ ಈಗಾಗಲೇ ಹಿಜಾಬ್ ಕುರಿತು ಆದೇಶ ಮಾಡಿದೆ. ಹೆಣ್ಮಕ್ಕಳ ಶಿಕ್ಷಣಕ್ಕೆ ಒತ್ತು ಕೂಡೋದು ಸರ್ಕಾರದ ಜವಾಬ್ದಾರಿಯಾಗಿದೆ.
ಮಂಗಳೂರು: ಟಿಪ್ಪು ಇತಿಹಾಸ (Tipu’s History) ಕೇವಲ ಭಾರತದಲ್ಲಿ ಮಾತ್ರ ಅಲ್ಲ, ಇಂಗ್ಲೆಂಡ್ ಫ್ರಾನ್ಸ್ ಮ್ಯೂಸಿಯಂಗಳಲ್ಲಿ ಅವರ ಇತಿಹಾಸ ಇದೆ. ಭಾರತದ ಸ್ವಾತಂತ್ರ್ಯಕ್ಕೆ ಬ್ರಿಟಿಷರ ಜೊತೆ ಯಾವ ರೀತಿ ಹೋರಾಡಿದ್ದಾರೆ ಅಂತ ಇದೆ ಎಂದು ಮಂಗಳೂರಿನಲ್ಲಿ ವಿಧಾನಸಭೆ ಪ್ರತಿಪಕ್ಷ ಉಪನಾಯಕ ಯು.ಟಿ. ಖಾದರ್ ಹೇಳಿಕೆ ನೀಡಿದ್ದಾರೆ. ಕರ್ನಾಟಕ ರಾಜ್ಯದ ಬೇರೆಬೇರೆ ಪ್ರದೇಶಗಳಿಗೆ ಹೋದರು ಕೂಡ ನಾವು ಅದನ್ನು ಕಾಣುತ್ತೇವೆ. ಬೆಂಗಳೂರಿನ ನಂದಿ ಹಿಲ್ಸ್, ಮಂಗಳೂರಿನ ಸುಲ್ತಾನ್ ಬತ್ತೇರಿ ಸೇರಿದಂತೆ ರಾಜ್ಯಾದ್ಯಂತ ಟಿಪ್ಪು ಸಾಧನೆಯ ಚಿತ್ರಣವಿದೆ. ಶೃಂಗೇರಿ ದೇವಸ್ಥಾನದಲ್ಲಿ ಸ್ಪಷ್ಟವಾಗಿ ಬರೆದಿದ್ದಾರೆ. ಕೊಲ್ಲೂರು ದೇವಸ್ಥಾನದಲ್ಲಿ ಸಲಾಂ ಪೂಜೆ ನಡೆಯುತ್ತದೆ. ಇದನ್ನು ತೆಗೆಯಲು ಸಾಧ್ಯವಿಲ್ಲ. ಟಿಪ್ಪು ಇತಿಹಾಸವನ್ನು ಪಠ್ಯದಿಂದ ತೆಗೆದರೆ ವಿದ್ಯಾರ್ಥಿಗಳು ವಂಚಿತರಾಗುತ್ತಾರೆ. ಭಾರತ ದೇಶದ ರಾಜರುಗಳು ಬ್ರಿಟಿಷರ ವಿರುದ್ಧ ಹೋರಾಡಿದ ಬಗ್ಗೆ ಇತಿಹಾಸ ಕಲಿಕೆಯಿಂದ ವಂಚಿತರಾಗುತ್ತಾರೆ ಎಂದು ಹೇಳಿದ್ದಾರೆ.
ಹಿಜಾಬ್ ಗೊಂದಲದ ಮಧ್ಯೆ ನಾಳೆಯಿಂದ SSLC ಪರೀಕ್ಷೆ ಆರಂಭಗೊಳ್ಳುತ್ತಿದ್ದು, ಆ ಕುರಿತಾಗಿ ಮಾತನಾಡಿದ ಯುಟಿ ಖಾದರ್, ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಲಕ್ಷಾಂತರ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. ಎಲ್ಲರೂ ನೆಮ್ಮದಿಯಿಂದ, ಮಾನಸಿಕ ಒತ್ತಡ ಇಲ್ಲದೇ ಪರೀಕ್ಷೆ ಬರೆಯಿರಿ. ಸರ್ಕಾರ ಈಗಾಗಲೇ ಹಿಜಾಬ್ ಕುರಿತು ಆದೇಶ ಮಾಡಿದೆ. ಹೆಣ್ಮಕ್ಕಳ ಶಿಕ್ಷಣಕ್ಕೆ ಒತ್ತು ಕೂಡೋದು ಸರ್ಕಾರದ ಜವಾಬ್ದಾರಿ. ಹೀಗಾಗಿ ಅವರಿಗೆ ಮಾನಸಿಕ ಒತ್ತಡ ಆಗದಂತೆ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕು. ಅದೇ ರೀತಿ ಹೆತ್ತವರು ಕೂಡ ಈ ಬಗ್ಗೆ ಅಗತ್ಯ ಗಮನ ಹರಿಸಬೇಕು. ಸರ್ಕಾರದ ಆದೇಶದಂತೆ ಸಮವಸ್ತ್ರ ನಿಯಮ ಗೌರವಿಸಿ ಪರೀಕ್ಷೆ ಬರೆಯಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಲಿನ ನಿಯಮ ಪಾಲಿಸಬೇಕು. ಖಾಸಗಿಯವರು ಶಿಕ್ಷಣಕ್ಕೆ ಒತ್ತು ಕೊಟ್ಟು ಎಲ್ಲವನ್ನೂ ನಿಭಾಯಿಸಲಿ. ಎಲ್ಲಾ ಧಾರ್ಮಿಕ ಗುರುಗಳು ಈ ಬಗ್ಗೆ ಪೂರಕವಾಗಿ ಮಾತನಾಡಿದ್ದಾರೆ. ಸಂವಿಧಾನಬದ್ದ ಹಕ್ಕಿನ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಾಕಲಾಗಿದೆ. ಸುಪ್ರೀಂ ಕೋರ್ಟ್ನಲ್ಲಿ ಇದಕ್ಕೆ ನ್ಯಾಯ ಸಿಗಬಹುದು ಎಂಬ ವಿಶ್ವಾಸ ಇದೆ. ವಿದ್ಯಾರ್ಥಿಗಳು ಈ ಬಗ್ಗೆ ಚಿಂತೆ ಮಾಡಬಾರದು, ಪರೀಕ್ಷೆ ಅಷ್ಟೇ ಬರೆಯಲಿ. ನನ್ನ ಮಗಳಿಗಾದ್ರೂ ನಾನು ಇದನ್ನೇ ಹೇಳುತ್ತೇನೆ. ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ಮಾಡಿದ ಆದೇಶ ಗೌರವಿಸಿ. ಆ ಆದೇಶ ಗೌರವಿಸಿ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯಿರಿ. ಹೆತ್ತವರು ಕೂಡ ಈ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ಸಹಕಾರ ನೀಡಿ ಎಂದು ಹೇಳಿದ್ದಾರೆ.
ಇದನ್ನೂ ಓದಿ:
ತರಬೇತಿ ವೇಳೆ ಹೃದಯಾಘಾತದಿಂದ ಕೊನೆಯುಸಿರೆಳೆದ ಐಆರ್ಬಿ ಪೊಲೀಸ್; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ