ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ: 2 ಸಾವಿರ ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ

|

Updated on: Aug 23, 2024 | 6:28 PM

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಕೇಸ್ ನಂತರ ಸಿಐಡಿಗೆ ವರ್ಗಾವಣೆ ಆಗಿತ್ತು. ತನಿಖೆ ಕೈಗೆತ್ತಿಕೊಂಡು ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಇದೀಗ ಸುಮಾರು 2 ಸಾವಿರ ಪುಟಗಳ ಚಾರ್ಜ್​ಶೀಟ್​ನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಸಲ್ಲಿಸಲಾಗಿದೆ.

ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ: 2 ಸಾವಿರ ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ
ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಜಾಮೀನು ಅರ್ಜಿ ವಜಾಗೊಳಿದ ವಿಶೇಷ ಕೋರ್ಟ್
Follow us on

ಬೆಂಗಳೂರು, ಆಗಸ್ಟ್​ 23: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧದ ಅತ್ಯಾಚಾರ ಕೇಸ್​ಗೆ ಸಂಬಂಧಿಸಿದಂತೆ ಎಸ್​ಐಟಿ (SIT) ಅಧಿಕಾರಿಗಳು ತನಿಖೆ ನಡೆಸಿ ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ತನಿಖಾಧಿಕಾರಿ ಸುಮಾರಾಣಿ ಅವರಿಂದ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದೆ. ಆ ಮೂಲಕ ಪ್ರಜ್ವಲ್ ರೇವಣ್ಣ​​ ವಿರುದ್ಧ ಮೊದಲ ಚಾರ್ಜ್​ಶೀಟ್ ಇದಾಗಿದೆ.

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಕೇಸ್ ನಂತರ ಸಿಐಡಿಗೆ ವರ್ಗಾವಣೆ ಆಗಿತ್ತು. ತನಿಖೆ ಕೈಗೆತ್ತಿಕೊಂಡು ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಸುಮಾರು 2 ಸಾವಿರ ಪುಟಗಳ ಚಾರ್ಜ್​ಶೀಟ್​ನ್ನು ಅಧಿಕಾರಿಗಳು ಸಲ್ಲಿಸಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್​ ರೇವಣ್ಣಗೆ ಬಿಗ್​ ಶಾಕ್, ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್!

ಇನ್ನು ಇನ್ನೊಂದು ಕಡೆ ಹೆಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡ ಚಾರ್ಜ್​ಶೀಟ್​ ಸಲ್ಲಿಸಲಾಗಿದೆ. ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದವು.

ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣ, ಕೆ.ಆರ್.ನಗರದ ಕಿಡ್ನ್ಯಾಪ್‌ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದ ಪ್ರಜ್ವಲ್‌ರನ್ನ ಎಸ್‌ಐಟಿ ಕಸ್ಟಡಿಗೆ ಪಡೆದಿತ್ತು. ಈ ಎರಡೂ ಕೇಸ್‌ಗಳಲ್ಲಿ ವಿಚಾರಣೆ ಮುಗಿದಿರೋ ಕಾರಣಕ್ಕೆ ಪ್ರಜ್ವಲ್‌ ರೇವಣ್ಣರನ್ನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.

ಇನ್ನು ಇತ್ತೀಚೆಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣನರಿಂದ ಸಲ್ಲಿಸಲಾಗಿದ್ದ ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ವಜಾ ಮಾಡಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ಸೆರೆವಾಸ ಮುಂದುವರೆಯಲಿದೆ.​

ಇದನ್ನೂ ಓದಿ: ಕಿಡ್ನ್ಯಾಪ್​ ಕೇಸ್​: ರೇವಣ್ಣ, ಭವಾನಿ ಸೇರಿ 9 ಆರೋಪಿಗಳಿಗೆ ಸಮನ್ಸ್, ಖುದ್ದು ಹಾಜರಿಗೆ ಸೂಚನೆ

ಇನ್ನು ಮೈಸೂರು ಜಿಲ್ಲೆಯ ಕೆಆರ್​ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್​ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ 9 ಆರೋಪಿಗಳಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ನಿಂದ ಸಮನ್ಸ್​ ಜಾರಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.