ಕೊಪ್ಪಳ: 50ಕ್ಕೂ ಹೆಚ್ಚು ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ
50ಕ್ಕೂ ಹೆಚ್ಚು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಲಾಗಿದ್ದು ನವಜಾತ ಶಿಶುಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಕೊಪ್ಪಳ ಡಿಹೆಚ್‌ಒ ಟಿ.ಲಿಂಗರಾಜ್ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಎರಡನೇ ಅಲೆಯಲ್ಲಿ 100 ಕ್ಕೂ ಹೆಚ್ಚು ಗರ್ಭಿಣಿಯರಿಗೆ ಪಾಸಿಟಿವ್ ಆಗಿತ್ತು.
ಕೊಪ್ಪಳ: ಕೊರೊನಾ ಸಂಕಷ್ಟದ ಸಮಯದಲ್ಲಿ ಅತಿ ಹೆಚ್ಚು ಕಷ್ಟಪಟ್ಟಿದ್ದು ಗರ್ಭಿಣಿಯರು. ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ, ವೈದ್ಯರಿಲ್ಲದೆ ಅನೇಕ ಗರ್ಭಿಣಿಯರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಅದರಲ್ಲೂ ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಿಸುವುದೇ ದೊಡ್ಡ ಸಾಹಸದ ವಿಷಯ. ಸದ್ಯ ಕೊಪ್ಪಳ ಜಿಲ್ಲೆಯಲ್ಲಿ 50ಕ್ಕೂ ಹೆಚ್ಚು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಲಾಗಿದೆ.
50ಕ್ಕೂ ಹೆಚ್ಚು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಲಾಗಿದ್ದು ನವಜಾತ ಶಿಶುಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಕೊಪ್ಪಳ ಡಿಹೆಚ್‌ಒ ಟಿ.ಲಿಂಗರಾಜ್ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಎರಡನೇ ಅಲೆಯಲ್ಲಿ 100 ಕ್ಕೂ ಹೆಚ್ಚು ಗರ್ಭಿಣಿಯರಿಗೆ ಪಾಸಿಟಿವ್ ಆಗಿತ್ತು. ಇದರಲ್ಲಿ ಕೊಪ್ಪಳ ತಾಲೂಕು 33, ಯಲಬುರ್ಗಾ ತಾಲೂಕು 45, ಕುಷ್ಟಗಿ ತಾಲೂಕು 12 ಹಾಗೂ ಗಂಗಾವತಿ ತಾಲೂಕಿನಲ್ಲಿ 32 ಗರ್ಭಿಣಿಯರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇದರಲ್ಲಿ 80 ಕ್ಕೂ ಹೆಚ್ಚು ಜನ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ರು.
ಇದರಲ್ಲಿ 54 ಜನರ ಹೆರಿಗೆಯನ್ನ ಯಶಸ್ವಿಯಾಗಿ ಮಾಡಲಾಗಿದೆ. ಈ ಪೈಕಿ 26 ಜನರಿಗೆ ನಾರ್ಮಲ್ ಡೆಲಿವರಿ, 28 ಸಿಜರಿನ್ ಆಗಿವೆ. ಇದುವರೆಗೂ ಯಾವುದೇ ಸಾವು ಸಂಭವಿಸಿಲ್ಲ. ಇದು ಸಂತಸದ ವಿಷಯ ಎಂದು ಹೆರಿಗೆ ವಿಭಾಗದ ಮುಖ್ಯಸ್ಥರಿಗೆ ಡಿ.ಹೆಚ್‌ಓ. ಧನ್ಯವಾದ ಸಲ್ಲಿಸಿದ್ದಾರೆ.
ಹೆರಿಗೆಯಾದ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿಲ್ಲ ಸದ್ಯ 54 ಜನರ ಹೆರಿಗೆಯನ್ನ ಯಶಸ್ವಿಯಾಗಿ ಮಾಡಲಾಗಿದ್ದು ಹೆರಿಗೆಯಾದ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿಲ್ಲ. ಆದ್ರೆ ಬೇರೆ ಬೇರೆ ಜಿಲ್ಲೆಯಲ್ಲಿ ಹೆರಿಗೆಯಾದ ಬಳಿಕ ಐದು ಜನರಿಗೆ ಪಾಸಿಟಿವ್ ಆಗಿದೆ. ಅವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಕ್ಕಳಿಗೆ ವಿಶೇಷ ನವಜಾತ ಶಿಶು ತೀವ್ರ ಘಟಕದಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಅವರಲ್ಲೂ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದ ಡಿ.ಹೆಚ್‌ಓ. ತಿಳಿಸಿದ್ರು.
ಇದನ್ನೂ ಓದಿ: ಕೊರೊನಾ ಎರಡನೇ ಅಲೆಯಲ್ಲಿ 180 ಕ್ಕೂ ಹೆಚ್ಚು ಗರ್ಭಿಣಿಯರಿಗೆ ಸೋಂಕು; ಬಳ್ಳಾರಿ ಜನರಲ್ಲಿ ಹೆಚ್ಚಿದ ಆತಂಕ