AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕರ ಹಠಾತ್ ಸಾವುಗಳ ಆತಂಕ: ಸಂಶೋಧನೆಗೆ ತಜ್ಞರ ಸಮಿತಿ ರಚಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಹೃದಯಘಾತ, ಹೃದಯಸ್ತಂಭನ ಪ್ರಕರಣಗಳು ಯುವಕರಲ್ಲಿ ಹೆಚ್ಚಾಗುತ್ತಿದ್ದು, ಈ ಬಗ್ಗೆ ಗಮನ ಸೆಳೆದು ಪತ್ರಕರ್ತರು ಬರೆದ ಪತ್ರಕ್ಕೆ ಸ್ಪಂದಿಸಿ ಸಿಎಂ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಹಠಾತ್ ಸಾವುಗಳ ಬಗ್ಗೆ ಸಂಶೋಧನೆ ನಡೆಸಿ, ಮುಂದಿನ ದಿನಗಳಲ್ಲಿ ಅವುಗಳನ್ನು ತಡೆಯಲು ಕ್ರಮ ಕೈಗೊಳ್ಳುವುದಕ್ಕಾಗಿ ತಜ್ಞರ ಹಾಗೂ ವಿಜ್ಞಾನಿಗಳ ತಂಡ ರಚಿಸುವಂತೆ ಸೂಚನೆ ನೀಡಿದ್ದಾರೆ.

ಯುವಕರ ಹಠಾತ್ ಸಾವುಗಳ ಆತಂಕ: ಸಂಶೋಧನೆಗೆ ತಜ್ಞರ ಸಮಿತಿ ರಚಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
ಸಿಎಂ ಸಿದ್ದರಾಮಯ್ಯImage Credit source: PTI
TV9 Web
| Updated By: Ganapathi Sharma|

Updated on: Feb 07, 2025 | 6:35 PM

Share

ಬೆಂಗಳೂರು, ಫೆಬ್ರವರಿ 7: ಇತ್ತೀಚಿನ ದಿನಗಳಲ್ಲಿ ಯುವಕರು ಹಠಾತ್ ಆಗಿ ಹೃದಯಘಾತ, ಹೃದಯಸ್ತಂಭನದಿಂದ ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಸಂಶೋಧನೆ ನಡೆಸಿ ಮುಂದೆ ಈ ರೀತಿ ಆಗುವುದನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ತಜ್ಞರ ಸಮಿತಿಯೊಂದನ್ನು ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಹಠಾತ್ ಸಾವುಗಳ ಬಗ್ಗೆ ಗಮನ ಸೆಳೆದು ಪತ್ರಕರ್ತ ರಾಜಾರಾಂ ತಲ್ಲೂರು ಅವರು ಬರೆದ ಪತ್ರಕ್ಕೆ ಸ್ಪಂದಿಸಿ ಸಿದ್ದರಾಮಯ್ಯ ಈ ಕ್ರಮ ಕೈಗೊಂಡಿದ್ದಾರೆ. ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಮುಖೇನ ಸೂಚನೆ ನೀಡಿದ್ದಾರೆ.

ಸಿದ್ದರಾಮಯ್ಯ ಪತ್ರದಲ್ಲೇನಿದೆ?

‘‘ಪತ್ರಕರ್ತ ರಾಜಾರಾಂ ತಲ್ಲೂರು, ಇವರು ಇ-ಮೇಲ್ ಮೂಲಕ ಇತ್ತೀಚೆಗೆ ರಾಜ್ಯದಲ್ಲಿ ಹೃದಯಾಘಾತ, ಹೃದಯಸ್ತಂಭನ, ಮೆದುಳು ಸಂಬಂಧಿ ನರ ಸಂಬಂಧಿ ಮತ್ತಿತರ ಕಾರಣಗಳಿಂದಾಗಿ ಯುವ ಜನರು ಹಠಾತ್ ಸಾವಿಗೀಡಾಗುತ್ತಿರುವುದು ದಿನಪತ್ರಿಕೆಗಳಲ್ಲಿ ವರದಿಯಾಗುತ್ತಿದೆ. ಪ್ರತಿ ಸಾವು ಅವರ ಅವಲಂಬಿತ ಕುಟುಂಬಗಳನ್ನು ಆರ್ಥಿಕ-ಸಾಮಾಜಿಕ ಸಮಸ್ಯೆಗಳಿಗೆ ತಳ್ಳುತ್ತಿದೆ ಎಂದು ತಿಳಿಸಿರುತ್ತಾರೆ. ಈ ಸಾವುಗಳು ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳ ಕಾರಣಕ್ಕೆ ಸಂಭವಿಸುತ್ತಿರಬಹುದೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಆದ್ದರಿಂದ, ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅತ್ಮಪರಿಣಾಮಗಳಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಇಂತಹ ಸಾವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೋರಿರುತ್ತಾರೆ’’ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಬೆಂಗಳೂರಿನಲ್ಲಿ ಉಚಿತ HPV ಲಸಿಕೆ ಅಭಿಯಾನ ಆರಂಭ

ಮುಂದುವರಿದು, ‘‘ಇಂತಹ ಹಠಾತ್ ಸಾವುಗಳ ಕುರಿತಂತೆ ಹಾಗೂ ಮುಂದೆ ಈ ರೀತಿಯ ಸಾವುಗಳು ಸಂಭವಿಸದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಲು ಒಂದು ತಜ್ಞರ ಹಾಗೂ ವಿಜ್ಞಾನಿಗಳ ಸಮಿತಿಯನ್ನು ರಚಿಸಿ, ವರದಿ ಪಡೆದು ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದೆ’’ ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ