AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ ಮಂಜುನಾಥ್​ ಗೆಲುವಿಗೆ ಹರಕೆ ಹೊತ್ತ ಸುಧಾಮೂರ್ತಿ, ಆ ಹರಕೆ ಏನು ಗೊತ್ತಾ?

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಅಂತ್ಯವಾಗಿದ್ದು, ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಹೈ ವೋಲ್ಟೇಜ್‌ ಪಡೆದುಕೊಂಡಿದೆ. ಕಾಂಗ್ರೆಸ್​ನ ಹಾಲಿ ಸಂಸದ ಡಿಕೆ ಸುರೇಶ್ ವಿರುದ್ಧ ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಅವರು ಸ್ಪರ್ಧೆ ಮಾಡಿದ್ದಾರೆ. ಹೀಗಾಗಿ ಎಲ್ಲರ ಚಿತ್ತ ಇದೀಗ ಬೆಂಗಳೂರು ಗ್ರಾಮಾಂತರ ಕ್ಷೇತ್ರದತ್ತ ನೆಟ್ಟಿದ್ದು, ಡಾ ಮಂಜುನಾತ್ ಗೆಲುವಿಗೆ ಇನ್ಫೋಸಿಸ್ ಸಹ ಸಂಸ್ಥಾಪಕಿ ಸುಧಾಮೂರ್ತಿ ಅವರು ಹರಿಕೆ ಹೊತ್ತುಕೊಂಡಿದ್ದಾರೆ. ಈ ಬಗ್ಗೆ ಸ್ವತಃ ಮಂಜುನಾಥ್ ಅವರೇ ಬಹಿರಂಪಡಿಸಿದ್ದಾರೆ.

ಡಾ ಮಂಜುನಾಥ್​ ಗೆಲುವಿಗೆ ಹರಕೆ ಹೊತ್ತ ಸುಧಾಮೂರ್ತಿ, ಆ ಹರಕೆ ಏನು ಗೊತ್ತಾ?
ಡಾ ಮಂಜುನಾಥ್, ಸುಧಾಮೂರ್ತಿ
ರಮೇಶ್ ಬಿ. ಜವಳಗೇರಾ
|

Updated on: May 29, 2024 | 4:27 PM

Share

ಬೆಂಗಳೂರು, (ಮೇ 29): ಈಗಾಗಲೇ ಕರ್ನಾಟಕದಲ್ಲಿ (Karnataka) ಲೋಕಸಭಾ ಚುನಾವಣೆ (Loksabha Elecctions 2024) ಮುಗಿದಿದ್ದು, ಜೂನ್ 4ರಂದು ಯಾರು ಗೆಲ್ಲಲಿದ್ದಾರೆ. ಯಾರು ಸೋಲಿಲ್ಲದ್ದಾರೆ ಎನ್ನುವುದು ಸ್ಪಷ್ಟವಾಗಿದೆ. ಆದ್ರೆ, ಫಲಿತಾಂಶಕ್ಕೂ ಮುನ್ನ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರಲ್ಲಿ ಇದೀಗ ಸೋಲು ಗೆಲುವಿನ ಲೆಕ್ಕಾಚಾರಗಳು ಗರಿಗೆದರಿವೆ. ಅದರಲ್ಲೂ ತಮ್ಮ ಅಭ್ಯರ್ಥಿ ಗೆಲ್ಲಲಿ ಎಂದು ಕೆಲವರು ದೇವರಿಗೆ ಹರಕೆ ಹೊತ್ತಿದ್ದಾರೆ. ಅದರಂತೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿರುವ ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ (Dr CN Manjunath) ಅವರ ಗೆಲುವಿಗೆ ರಾಜ್ಯಸಭಾ ಸದಸ್ಯೆ, ಇನ್ಫೋಸಿಸ್ ಸಹ ಸಂಸ್ಥಾಪಕಿ ಸುಧಾಮೂರ್ತಿ (Sudha murthy ಅವರು ಹರಿಕೆ ಹೊತ್ತುಕೊಂಡಿದ್ದಾರೆ. ಇದನ್ನು ಸ್ವತಃ ಡಾ ಮಂಜುನಾಥ್ ಅವರು ಕಾರ್ಯಕ್ರಮವೊಂದರಲ್ಲಿ ಬಹಿರಂಗಪಡಿಸಿದ್ದಾರೆ.

ಡಾ. ಸಿಎನ್​ ಮಂಜುನಾಥ್​ ಅವರು ಗೆದ್ದರೆ ಮಂತ್ರಾಲಯದಿಂದ ಸುಮಾರು ಆರು ಕಿಲೋ ಮೀಟರ್ ಇರುವ ಒಂದು ಸ್ಥಳದಿಂದ ಕಾಲ್ನಡಿಗೆ ಮೂಲಕ ಹೋಗಿ ರಾಯರ ಪಾದ ಪೂಜೆ ಮಾಡುತ್ತೇನೆ ಎಂದು ಸುಧಾಮೂರ್ತಿ ಅವರು ಹರಕೆ ಹೊತ್ತಿದ್ದಾರೆ. ಚುನಾವಣೆ ಮುಗಿದ ಬಳಿಕ ಡಾ ಮಂಜುನಾಥ್ ಅವರು ಅವರ ನಿವಾಸಕ್ಕೆ ಭೇಟಿ ನೀಡಿದ್ದ ವೇಳೆ ಸುಧಾಮೂರ್ತಿಯವರೇ ಹೇಳಿದ್ದಾರೆ. ಇದನ್ನು ಇದೀಗ ಸ್ವತಃ ಮಂಜುನಾಥ್ ಅವರೇ ಕಾರ್ಯಕ್ರಮವೊಂದರಲ್ಲಿ ಹಂಚಿಕೊಂಡಿದ್ದಾರೆ.

ಓರ್ವ ಅಭ್ಯರ್ಥಿ ಗೆಲುವಿಗಾಗಿ ಕಾರ್ಯಕರ್ತರು, ಮುಖಂಡರು ಹರಿಕೆ ಹೊತ್ತುಕೊಳ್ಳುವುದು ಸಾಮಾನ್ಯ. ಅಂದ್ರೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸದಸ್ಯರುಗಳ ಮಟ್ಟದ ಮುಖಂಡರು, ಚುನಾವಣೆಯಲ್ಲಿ ತಮ್ಮ ನಾಯಕನ ಗೆಲುವಿಗೆ ದೇವರಲ್ಲಿ ನಾನಾ ರೀತಿಯಾಗಿ ಹರಕೆ ಹೋರುವುದನ್ನು ನೋಡಿದ್ದೇವೆ ಕಂಡಿದ್ದೇವೆ  ಕೂಡ.

ಆದ್ರೆ, ರಾಜ್ಯಸಭಾ ಸದಸ್ಯೆಯಾಗಿ, ಅದರಲ್ಲೂ ಇನ್ಫೋಸಿಸ್​ ನಂತಹ ಬಹುರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಸಹ ಸಂಸ್ಥಾಪಕಿಯಾಗಿ ಓರ್ವ ಅಭ್ಯರ್ಥಿಯ ಗೆಲುವಿಗೆ ಹರಕೆ ಹೊತ್ತುಕೊಂಡಿದ್ದಾರೆ ಎನ್ನುವುದು ನಿಜಕ್ಕೂ ಅಚ್ಚರಿ ಮೂಡಿಸಿದೆ. ಇನ್ನು ಡಾ. ಮಂಜುನಾಥ್‌ ಅವರ ಪತ್ನಿ ಅನಸೂಯ ಅವರು ಸಹ ತಮ್ಮ ಮನೆ ದೇವರಲ್ಲಿ ಪತಿಯ ಗೆಲುವಿಗೆ ಹರಕೆ ಹೊತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.

ಒಟ್ಟಿನಲ್ಲಿ ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಫಲಿತಾಂಶ ಕುತೂಹಲ ಮೂಡಿಸಿದ್ದು, ಯಾರಿಗೆ ಗೆಲುವಾಗಲಿದೆ ಎನ್ನುವುದನ್ನು ಜನರು ಕಾತರದಿಂದ ಕಾಯುತ್ತಿದ್ದಾರೆ.

ಇನ್ನಷ್ಟು ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ